ಪ್ರಜಾಪ್ರಭುತ್ವ, ಸಂವಿಧಾನವನ್ನು ರಕ್ಷಣೆ ಮಾಡುವುದೇ ಮಹನೀಯರಿಗೆ ಸಲ್ಲಿಸುವ ಗೌರವ: ಸಿಎಂ ಸಿದ್ದರಾಮಯ್ಯ

Date:

ಸಂವಿಧಾನವನ್ನು ದುರ್ಬಲಗೊಳಿಸುವ ಶಕ್ತಿಗಳ ವಿರುದ್ಧ ಹೋರಾಡಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ರಕ್ಷಣೆ ಮಾಡುವುದೇ ಎಲ್ಲ ಮಹನೀಯರಿಗೆ ಸಲ್ಲಿಸುವ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಸೋಷಿಯಲ್ ಜಸ್ಟೀಸ್ ಫೌಂಡೇಶನ್, ಮೈಸೂರು ಇವರ ವತಿಯಿಂದ ಆಯೋಜಿಸಿರುವ ಡಾ. ಹರೀಶ್ ಕುಮಾರ್ ಅವರ ‘ಆಧುನಿಕ ಭಾರತದ ನಿರ್ಮಾತೃ ಡಾ. ಬಾಬು ಜಗಜೀವನರಾಮ್’ ಮತ್ತು ‘ಬಾಬೂಜಿ ಚಿತ್ರ ಸಂಪುಟ’ ಕೃತಿಯನ್ನು ಬಿಡುಗಡೆಗೊಳಿಸಿದರು.

ಜಗಜೀವನ್ ರಾಂ ಅವರು ದೇಶ ಕಂಡ ಅಪ್ರತಿಮ ದೇಶಪ್ರೇಮಿ, ಮುತ್ಸದ್ಧಿ ರಾಜಕಾರಣಿ ಹಾಗೂ ಪ್ರಜಾಪ್ರಭುತ್ವವಾದಿ. ದೇಶಕ್ಕೆ ಸ್ವಾತಂತ್ರ್ಯ ಬರಬೇಕೆಂದು ಹೋರಾಟ ಮಾಡಿದ ಎಲ್ಲರಿಗೂ ಮುಂದೆ ದೇಶ ಹೇಗೆ ನಿರ್ಮಾಣವಾಗಬೇಕೆಂಬ ಕನಸಿತ್ತು. ಇದಕ್ಕೆ ಪೂರಕವಾದ ಸಂವಿಧಾನದ ರಚನಾ ಸಮಿತಿ ಅಧ್ಯಕ್ಷರಾಗಿ ಸೂಕ್ತ ಸಂವಿಧಾನವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ರಚನೆ ಮಾಡಿದ್ದಾರೆ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಮಾನ ಅವಕಾಶಗಳಿರುವ ಸಮಸಮಾಜ ನಿರ್ಮಾಣವಾಗಬೇಕು
ಸಮಾಜದಲ್ಲಿ ಹಸಿವು, ಬಡತನ, ನಿರುದ್ಯೋಗ, ದಾರಿದ್ರ್ಯ, ಅನಕ್ಷರತೆ ಎಲ್ಲವೂ ತೊಲಗಿ, ಸಮಾನ ಅವಕಾಶಗಳಿರುವ ಸಮಸಮಾಜ ನಿರ್ಮಾಣವಾಗಬೇಕು. ಅದಕ್ಕಾಗಿಯೇ ಪ್ರಯತ್ನ ಮಾಡಿದರು ಎಂದು ಸಿಎಂ ತಿಳಿಸಿದರು.

ಇತಿಹಾಸ ತಿರುಚಿರುವುದನ್ನು ನಾವು ನೋಡಿದ್ದೇವೆ. ಮುಂದೆ ಏನಾಗಬೇಕೆಬುದನ್ನು ಚರ್ಚಿಸುವುದು ಉತ್ತಮ. ಅಂಬೇಡ್ಕರ್, ಗಾಂಧಿ, ನೆಹರೂ, ಜಗಜೀವನ್ ರಾಂ ಅವರು ಹೇಳಿದಂಥ ಭಾರತ ನಿರ್ಮಾಣವಾಗಬೇಕು. ನಮಗೆ ಅವಕಾಶ ಸಿಕ್ಕಿದಾಗ ಅಂಥ ಭಾರತ, ರಾಜ್ಯವನ್ನು ನಿರ್ಮಿಸಬೇಕು. ಆ ದಿಕ್ಕಿನಲ್ಲಿ ನಮ್ಮ ಸರ್ಕಾರ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಎಲ್ಲ ಸರ್ಕಾರಗಳ ಉದ್ದೇಶ ಆದೇ ಆಗಬೇಕು. ಸಂವಿಧಾನದ ಪೀಠಿಕೆಯಲ್ಲಿ ಹೇಳಿರುವುದೇ ಸಂವಿಧಾನದ ಉದ್ದೇಶ. ಅದನ್ನು ಜಾರಿ ಮಾಡುವ ಪ್ರಯತ್ನ ನಮ್ಮದು. ಅನೇಕ ಶಕ್ತಿ ಗಳು ಅದಕ್ಕೆ ವಿರುದ್ದವಾಗಿವೆ. ಅಂಥ ಶಕ್ತಿಗಳನ್ನು ವಿರುದ್ಧ ಹೋರಾಡುವ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.

ಪಟ್ಟಭದ್ರ ಹಿತಾಸಕ್ತಿಗಳು ಹಿಂದೆಯೂ ಇದ್ದರು, ಈಗಲೂ ಇದ್ದಾರೆ. ಅವರನ್ನು ಗುರುತಿಸಿ ಅವರಿಗೆ ಶಕ್ತಿ ಬಾರದಂತೆ ನೋಡಿಕೊಳ್ಳುವ ಕೆಲಸವಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ | ಮನಮೋಹನ್ ಸಿಂಗ್ ಸರ್ಕಾರ ಎಷ್ಟು ಪರಿಹಾರ ನೀಡಿದೆ ಎಂದು ಲೆಕ್ಕ ಕೊಡಿ: ಆರ್. ಅಶೋಕ್

"ಬರಗಾಲದಿಂದ ಬಳಲಿದ ರಾಜ್ಯದ ಜನತೆಗೆ 3,454 ಕೋಟಿ ರೂ. ಪರಿಹಾರವನ್ನು ಪ್ರಧಾನಿ...

ಬರ ಪರಿಹಾರ | ಬಾಕಿ ಹಣ ಬಿಡುಗಡೆಯಾಗುವವರೆಗೆ ಕಾನೂನು ಹೋರಾಟ ನಿಲ್ಲಲ್ಲ : ಕೃಷ್ಣ ಬೈರೇಗೌಡ

ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ ರಾಜ್ಯಕ್ಕೆ ರೂ.18,172 ಕೋಟಿ ಬರ ಪರಿಹಾರ ಬಿಡುಗಡೆಯಾಗಬೇಕಿತ್ತು....

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...

14 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಹೆಚ್ಚುವರಿ ಉಸ್ತುವಾರಿ ಸಚಿವರ ನೇಮಕ

ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ...