ಬೆಲೆ ಏರಿಕೆ | ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ: ಆರ್ ಅಶೋಕ್

Date:

Advertisements

ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.

ಬೆಂಗಳೂರು ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರವಾಸ ಮಾಡಲಾಗುತ್ತಿದೆ. ಕರ್ನಾಟಕದ ಇತಿಹಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಈ ಮಟ್ಟಕ್ಕೆ ಬೆಲೆ ಏರಿಕೆ ಮಾಡಿದ್ದಾರೆ. ಮದ್ಯದ ದರ, ಮೆಟ್ರೋ ದರ, ಕಾಲೇಜು ಪ್ರವೇಶ ಶುಲ್ಕ, ಬಿತ್ತನೆ ಬೀಜ ದರ, ಪೆಟ್ರೋಲ್‌-ಡೀಸೆಲ್‌ ದರ ಏರಿಕೆಯಾಗಿದೆ. ಈಗ ಕಸದಿಂದಲೂ ದುಡ್ಡು ಹೊಡೆಯಲಾಗುತ್ತಿದೆ. ಬೆಂಗಳೂರಿನ ಜನರು ಕಸಕ್ಕೂ ಶುಲ್ಕ ನೀಡಬೇಕಾಗಿದೆ. ಇದರಿಂದಲೇ ಒಂದೂವರೆ ಕೋಟಿ ರೂಪಾಯಿ ಲೂಟಿ ಮಾಡಲಾಗುತ್ತಿದೆ” ಎಂದು ದೂರಿದರು.

ಇದನ್ನು ಓದಿದ್ದೀರಾ? ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ವ್ಯರ್ಥ: ಸರ್ಕಾರದ ವಿರುದ್ಧ ಆರ್‌.ಅಶೋಕ್‌ ಆಕ್ರೋಶ

Advertisements

“ಕಾಂಗ್ರೆಸ್‌ ಜಾತ್ಯತೀತವಾದಿ ಎಂದು ಹೇಳಿಕೊಂಡು ಮುಸ್ಲಿಮರ ತುಷ್ಟೀಕರಣ ಮಾಡುತ್ತಿದೆ. ಸರ್ಕಾರಿ ಗುತ್ತಿಗೆಯಲ್ಲಿ ಧರ್ಮಾಧಾರಿತವಾದ ಮೀಸಲು ಕೊಡುವ ಅಗತ್ಯವಿರಲಿಲ್ಲ. ಈಗಾಗಲೇ ಮಂಗಳೂರಿನಲ್ಲಿ ಹೆಚ್ಚಿನ ಗುತ್ತಿಗೆಯನ್ನು ಮುಸ್ಲಿಮರೇ ಮಾಡುತ್ತಿದ್ದಾರೆ. ಈಗ ಮೀಸಲಾತಿಯೂ ಸೇರಿಕೊಂಡು ಹೆಚ್ಚಾಗಿದೆ. ಇದರ ವಿರುದ್ಧ ಹೋರಾಟ ಮಾಡಲಾಗುತ್ತದೆ” ಎಂದರು.

ಅಶೋಕ್1

“ಬಿಜೆಪಿ ಕಾರ್ಯಕರ್ತರ ವಿರುದ್ಧವೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಡೆತ್‌ನೋಟ್‌ಗಿಂತ ಹೆಚ್ಚಿನ ಸಾಕ್ಷಿ ಬೇಡವೆಂದು ಇವರೇ ಹೇಳುತ್ತಿದ್ದರು. ವಿನಯ್‌ ಅವರ ಡೆತ್‌ನೋಟ್‌ ಪರಿಗಣಿಸುತ್ತಲೇ ಇಲ್ಲ. ಈ ಹಿಂದೆ ಬಿಜೆಪಿ ಅವಧಿಯಲ್ಲಿ ಈಶ್ವರಪ್ಪನವರ ವಿಚಾರದಲ್ಲಿ ಇವರೇ ಹೋರಾಟ ಮಾಡಿದ್ದರು. ಈಗ ಉಲ್ಟಾ ಮಾತಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ವಾಟ್ಸ್‌ಅಪ್ ಗ್ರೂಪ್‌ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಥವಾ ಶಾಸಕರ ವಿರುದ್ಧ ಸಂದೇಶ ಹಾಕಿದರೆ ಅವರ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗುತ್ತಿದೆ. ಇದು ದೊಡ್ಡ ದಂಧೆಯಾಗಿ ಬೆಳೆದಿದೆ. ಸರ್ಕಾರದ ವಿರುದ್ಧ ಪ್ರತಿಭಟಿಸಿದರೆ ಆಗಲೂ ದೂರು ದಾಖಲಿಸುತ್ತಾರೆ‌” ಎಂದು ದೂರಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X