ಕೇಂದ್ರದ ತಾರತಮ್ಯ ವಿರುದ್ಧ ದೆಹಲಿ ಧರಣಿಯಲ್ಲಿ ಭಾಗಿಯಾಗುವಂತೆ ರಾಜ್ಯದ ಸಂಸದರಿಗೆ ಸಿಎಂ ಪತ್ರ

Date:

Advertisements

ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಗಂಭೀರವಾಗಿ ಆರೋಪಿಸಿರುವ ರಾಜ್ಯ ಸರ್ಕಾರ, ಕೇಂದ್ರದ ತಾರತಮ್ಯ ವಿರೋಧಿಸಿ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದೆ.

ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹೋರಾಟಕ್ಕೆ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಎಲ್ಲ ಸಂಸದರಿಗೆ, ರಾಜ್ಯಸಭಾ ಸದಸ್ಯರಿಗೆ ಹಾಗೂ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರಿಗೆ ಖುದ್ದಾಗಿ ಪತ್ರ ಬರೆದಿದ್ದಾರೆ.

ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ, ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಶಿ, ನಿರ್ಮಲಾ ಸೀತಾರಾಮನ್‌, ರಾಜೀವ್‌ ಚಂದ್ರಶೇಖರ್‌, ಶೋಭಾ ಕರಂದ್ಲಾಜೆ, ಸಂಸದರಾದ ಡಿ ವಿ ಸದಾನಂದಗೌಡ, ಅನಂತ ಕುಮಾರ್‌ ಹೆಗಡೆ, ಪ್ರತಾಪ್‌ ಸಿಂಹ, ಸುಮಲತಾ ಅಂಬರೀಷ್ ಸೇರಿದಂತೆ ಎಲ್ಲ ಸಂಸದರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಪತ್ರದ ಮೂಲಕ ಸಿದ್ದರಾಮಯ್ಯ ಕೋರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

ಪತ್ರದಲ್ಲಿ ಏನಿದೆ?

“ಕೇಂದ್ರ ಸರ್ಕಾರದಿಂದ ಆಗುತ್ತಿರುವ ನಿರಂತರ ಅನ್ಯಾಯ ಮತ್ತು ಕರ್ನಾಟಕದ ವಿಚಾರವಾಗಿ ಕೇಂದ್ರ ಸರ್ಕಾರವು ತೋರುತ್ತಿರುವ ಮಲತಾಯಿ ಧೋರಣೆಯು ತಮಗೆ ಈಗಾಗಲೇ ತಿಳಿದ ವಿಷಯವಾಗಿರುತ್ತದೆ. ಇದರ ವಿರುದ್ಧ ಪ್ರತಿಭಟಿಸಲು ಮತ್ತು ದೇಶದ ಗಮನ ಸೆಳೆಯಲು ತೀರ್ಮಾನಿಸಲಾಗಿದೆ. ರಾಜ್ಯದ ಉಪ ಮುಖ್ಯಮಂತ್ರಿಗಳು, ಎಲ್ಲ ಸಚಿವರು, ಶಾಸಕರು ಮತ್ತು ಸಂಸದರು ಸೇರಿ ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಫೆಬ್ರವರಿ, 07 ರಂದು ಒಂದು ದಿನದ ಧರಣಿ ಸತ್ಯಾಗ್ರಹವನ್ನು ನಡೆಸಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದ್ದಾರೆ.

“ಕರ್ನಾಟಕಕ್ಕೆ ತೆರಿಗೆ ಪಾಲಿನ ಹಂಚಿಕೆಯಲ್ಲಿ ಆಗುತ್ತಿರುವ ಭಾರೀ ಅನ್ಯಾಯ, ಬರಪರಿಹಾರ ನೀಡದಿರುವುದು, ವಿವಿಧ ಯೋಜನೆಗಳಿಗೆ ಅನುಮತಿ ಮತ್ತು ನೆರವು ನೀಡುವಲ್ಲಿ ತೋರುತ್ತಿರುವ ನಿರ್ಲಕ್ಷ್ಯ ಮತ್ತು ವಿಳಂಬ ಇತ್ಯಾದಿಗಳು ರಾಜ್ಯದಲ್ಲಿ ಜನಜೀವನವನ್ನು ವಿಪರೀತವಾಗಿ ಬಾಧಿಸುತ್ತಿವೆ. ಈ ವಿಚಾರವನ್ನು ಜವಾಬ್ದಾರಿಯುತ ಚುನಾಯಿತ ಪ್ರತಿನಿಧಿಗಳಾದ ತಾವು ಅರಿತೇ ಇರುತ್ತೀರಿ. ಆದುದರಿಂದ, ಈ ಧರಣಿ ಸತ್ಯಾಗ್ರಹದಲ್ಲಿ ತಾವು ಕೂಡಾ ಪಾಲ್ಗೊಂಡು ಅದರ ಯಶಸ್ಸಿಗೆ ನೆರವಾಗಬೇಕು ಎಂದು ತಮ್ಮಲ್ಲಿ ಕರ್ನಾಟಕದ ಸಮಸ್ತ ಜನತೆಯ ಪರವಾಗಿ ವಿನಂತಿಸುತ್ತೇನೆ” ಎಂದು ಸಿದ್ದರಾಮಯ್ಯ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ; ಇಂದಿಗೆ ಗುರಿ ಮುಟ್ಟಿದ್ದೆಷ್ಟು?

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಮಗ್ರ ಸಾಮಾಜಿಕ, ಆರ್ಥಿಕ...

ಸಿನಿಮಾ ಟಿಕೆಟ್‍ ದರ ಮಿತಿ | ತಡೆಯಾಜ್ಞೆ ಮುಂದುವರಿಕೆ, ಮೇಲ್ಮನವಿ ಅರ್ಜಿ ಅಂತಿಮ ತೀರ್ಪಿನಲ್ಲಿ ಸಿಲುಕಿದರೆ ಹಣ ವಾಪಸ್!

ರಾಜ್ಯದ ಎಲ್ಲ ಮಲ್ಟಿಫ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್‍ಗಳ ಮೇಲೆ ವಿಧಿಸಿದ್ದ 200 ರೂ.ಗಳ...

ಎಳೆತನದಲ್ಲೇ ಬುದ್ಧಿ ಸ್ಥಗಿತಗೊಂಡ ಸ್ಥಿತಿಯಲ್ಲಿ RSS; ದೇವನೂರರ ಮನೋಜ್ಞ ವಿಶ್ಲೇಷಣೆ

“ನೂರು ವರ್ಷಗಳಾದರೂ ಆರ್‌ಎಸ್‌ಎಸ್ ಸಂಘಟನೆಯನ್ನು ರಿಜಿಸ್ಟ್ರೆಷನ್ ಮಾಡಿಸದೇ ಇರುವುದು ಹಾಗೂ ಸಾರ್ವಜನಿಕರಿಂದ...

ಕೊಪ್ಪಳ | ದಶಕದ ಹಿಂದಿನ ಯಲ್ಲಾಲಿಂಗನ ಕೊಲೆ ಪ್ರಕರಣ: 9 ಆರೋಪಿಗಳ ಖುಲಾಸೆ

ರಾಜ್ಯ ರಾಜಕಾರಣದಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ತೀರ್ಪು...

Download Eedina App Android / iOS

X