ಸಂಸದರ ಅಮಾನತು ಖಂಡಿಸಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ

Date:

ಸಂಸತ್ ಕಲಾಪದಿಂದ ವಿರೋಧ ಪಕ್ಷದ ಸದಸ್ಯರ ಅಮಾನತು ಖಂಡಿಸಿ ಕೆಪಿಸಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶುಕ್ರವಾರ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು.

- Advertisement -

ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿ, “ದೇಶದ ಸಂಸತ್ತಿನ ಮೇಲೆ ನಡೆದ ದಾಳಿ ವಿಚಾರವಾಗಿ ಪ್ರಧಾನಮಂತ್ರಿಗಳು ಹಾಗೂ ಗೃಹ ಸಚಿವರಿಂದ ಉತ್ತರ ಕೇಳಿದ ಕಾರಣಕ್ಕೆ ವಿರೋಧ ಪಕ್ಷಗಳ 146 ಸಂಸದರನ್ನು ಸದನದಿಂದ ಅಮಾನತು ಮಾಡಲಾಗಿದೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಪ್ರಜಾಪ್ರಭುತ್ವ ಹಾಗೂ ಅದರ ಮೌಲ್ಯಗಳನ್ನು ಉಳಿಸುವ ಉದ್ದೇಶದಿಂದ ಸರ್ಕಾರದ ವೈಫ್ಯಲ್ಯ ಹಾಗೂ ಭದ್ರತಾ ಲೋಪದ ಬಗ್ಗೆ ಸದನದಲ್ಲಿ ಚರ್ಚೆಗೆ ಆಗ್ರಹಿಸಲಾಯಿತು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತು ಪಡಿಸಿ ಉಳಿದವರನ್ನು ಅಮಾನತು ಮಾಡಿದ್ದಾರೆ” ಎಂದರು.

“ನೂತನ ಸಂಸತ್ ಭವನದಲ್ಲಿ ವಿರೋಧ ಪಕ್ಷದ ಸಂಸದರ ವಿರುದ್ಧದ ದಾಳಿ, ಕೇಂದ್ರ ಸರ್ಕಾರದ ದುರಾಡಳಿತ, ಸಂವಿಧಾನ ವಿರೋಧಿ ನೀತಿ ಖಂಡಿಸಿ ಸಂಸತ್ ಆವರಣದ ಮಹಾತ್ಮ ಗಾಂಧಿ ಅವರ ಪ್ರತಿಮೆ ಮುಂದೆ ನಮ್ಮ ಸಂಸತ್ ಸದಸ್ಯರು ಪ್ರತಿಭಟನೆ ಮಾಡಿದ್ದಾರೆ. ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ” ಎಂದು ಹೇಳಿದರು.

“ಸ್ಪೀಕರ್ ಅವರ ಬಳಿ ಕಾಗದ ಹರಿದಿದ್ದಾರೆ ಎಂದು ವಿರೋಧ ಪಕ್ಷಗಳ ಕೆಲವು ಸದಸ್ಯರ ನಡೆಯನ್ನು ಹಕ್ಕುಬಾಧ್ಯತಾ ಸಮಿತಿಯ ಪರಿಶೀಲನೆಗೆ ಒಳಪಡಿಸಿದ್ದಾರೆ. ಆ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೋ ಇಲ್ಲವೋ ಎಂಬ ಪ್ರಶ್ನೆಯನ್ನು ನಾವು ಜನರ ಮುಂದೆ ಇಡಬೇಕಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

“ವಿರೋಧ ಪಕ್ಷಗಳ ಸಂಸತ್ ಸದಸ್ಯರನ್ನು ಅಮಾನತು ಮಾಡಿ ತಮಗೆ ಬೇಕಾದ ಮಸೂದೆ ಮಂಡನೆ ಮಾಡಿ ಅನುಮೋದನೆ ಪಡೆದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಅಪಮಾನ. ಈ ವಿಚಾರವಾಗಿ ಜನರ ಗಮನ ಸೆಳೆಯಲು ದೇಶದಾದ್ಯಂತ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾವು ಪ್ರಜಾಪ್ರಭುತ್ವ ಉಳಿಸಬೇಕು. ಲೋಕಸಭೆ ಚುನಾವಣೆವರೆಗೂ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆ, ಕೇಂದ್ರ ಸರ್ಕಾರದ ವೈಫಲ್ಯವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇವೆ” ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಮಾಜಿ ಸಚಿವ ಎಚ್ ಎಂ ರೇವಣ್ಣ, ಶಾಸಕ ಪ್ರಸಾದ್ ಅಬ್ಬಯ್ಯ, ಎಂಎಲ್ಸಿ ಯು ಬಿ ವೆಂಕಟೇಶ್, ಮಾಜಿ ಸಂಸದ ಉಗ್ರಪ್ಪ, ಮಾಜಿ ಮೇಯರ್ ಹುಚ್ಚಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...