ಬೆಂಗಳೂರು ಮಳೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ; ಸರ್ಕಾರಕ್ಕೆ ಮಾಜಿ ಸಿಎಂಗಳ ಒತ್ತಾಯ

Date:

  • ಬೆಂಗಳೂರಿನ ಮಳೆ ಸಮಸ್ಯೆ ಬಗ್ಗೆ ಸರ್ಕಾರ ಗಮನ ಸೆಳೆದ ಮಾಜಿ ಸಿಎಂ
  • ಬಿಬಿಎಂಪಿ ವಿರುದ್ಧ ಆಕ್ರೋಶ ಹೊರಹಾಕಿದ ಎಚ್ ಡಿ ಕುಮಾರಸ್ವಾಮಿ

ರಾಜಧಾನಿ ಬೆಂಗಳೂರಿನ ಕೆ ಆರ್‌ ಸರ್ಕಲ್‌ ಅಂಡರ್ ಪಾಸ್ ನಲ್ಲಿ ಮಳೆ ಸಮಸ್ಯೆಗೆ ಸಿಲುಕಿ ಯುವತಿ ಸಾವನ್ನಪ್ಪಿರುವ ಘಟನೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಹಾಗೂ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ.

ಇಂತಹ ದುರಂತಗಳು ಮರುಕಳಿಸದಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಶಾಶ್ವತ ಪರಿಹಾರ ರೂಪಿಸಬೇಕು. ಅಂಡರ್ ಪಾಸ್, ರಸ್ತೆ, ಚರಂಡಿ, ಒಳಚರಂಡಿಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ಅವರುಗಳು ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಘಟನೆಯನ್ನು ಉಲ್ಲೇಖಿಸಿ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ. ಆ ಟ್ವೀಟ್ ಸಾರಾಂಶ ಈ ಕೆಳಗಿನಂತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಂಗಳೂರು ನಗರದಲ್ಲಿ ಇಂದು ಸುರಿದ ಭಾರೀ ಮಳೆಯಿಂದ ಕೆ.ಆರ್.ವೃತ್ತದ ಅಂಡರ್ ಪಾಸ್ ನಲ್ಲಿ ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಅಂಡರ್ ಪಾಸ್ ಗಳಲ್ಲಿ ಕಸಕಡ್ಡಿ ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಾಗಿದ್ದ ಪಾಲಿಕೆ, ಮೈಮರೆತು ಕರ್ತವ್ಯಲೋಪ ಎಸಗಿದೆ. ಪ್ರತೀಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ, ಯಾಕೆ? ಮಳೆ ಬಂದರೆ ಜನರು ಸಾಯಲೇಬೇಕೆ?ಎಂದು ಹೆಚ್‌ಡಿಕೆ ಪ್ರಶ್ನಿಸಿದರು.

ಭಾರೀ ಮಳೆ ಸುರಿಯುತ್ತಿದ್ದ ಅಪಾಯದ ಸಮಯದಲ್ಲಿ ವಾಹನ ಚಾಲಕರು ಅತ್ಯಂತ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದ್ದನ್ನು ಕಂಡ ಮೇಲೂ ಚಾಲಕ ಕಾರನ್ನು ಅಂಡರ್ ಪಾಸ್ ಮೂಲಕ ಚಾಲನೆ ಮಾಡಬಾರದಿತ್ತು. ಸಂಚಾರಿ ಪೊಲೀಸರು ಮೊದಲೇ ಮುನ್ನೆಚ್ಚರಿಕೆ ನೀಡಬೇಕಿತ್ತು.

ಈ ಸುದ್ದಿ ಓದಿದ್ದೀರಾ?:ಬೆಂಗಳೂರಿನಲ್ಲಿ ಧಾರಕಾರ ಮಳೆ | ಸುರಂಗ ಮಾರ್ಗದಡಿ ಸಿಲುಕಿದ್ದ ಮಹಿಳೆ ದುರ್ಮರಣ

ಬಿಬಿಎಂಪಿ ಅಧಿಕಾರಿಗಳು ಕೂಡಲೇ ನಗರದ ಉದ್ದಗಲಕ್ಕೂ ಎಲ್ಲಾ ಅಂಡರ್ ಪಾಸ್ ಗಳನ್ನು ವಿಸ್ತೃತವಾಗಿ ಪರಿಶೀಲಿಸಿ, ಕಸಕಡ್ಡಿ ವಿಲೇವಾರಿ ಮಾಡಿಸಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು. ಇನ್ನೊಂದು ಪ್ರಾಣನಷ್ಟವೂ ಆಗುವುದಕ್ಕೆ ಅವಕಾಶ ನೀಡಬಾರದು ಎಂದು ಮಾಜಿ ಸಿಎಂ ಹೇಳಿದರು.

ಮೃತ ನತದೃಷ್ಟ ಯುವತಿ ಕುಟುಂಬಕ್ಕೆ ಪರಿಹಾರ ನೀಡಿರುವುದು ಸ್ವಾಗತಾರ್ಹ. ಆದರೆ, ಇಂತಹ ದುರಂತಗಳು ಮರುಕಳಿಸದಂತೆ ರಾಜ್ಯ ಕಾಂಗ್ರೆಸ್ ಸರಕಾರ ಶಾಶ್ವತ ಪರಿಹಾರ ರೂಪಿಸಬೇಕು. ಅಂಡರ್ ಪಾಸ್, ರಸ್ತೆ, ಚರಂಡಿ, ಒಳಚರಂಡಿಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎನ್ನುವುದು ನನ್ನ ಆಗ್ರಹ ಎಂದು ಅವರು ಹೇಳಿಕೊಂಡಿದ್ದಾರೆ.

ಇದೇ ರೀತಿ ತಮ್ಮ ಅಭಿಪ್ರಾಯ ತಿಳಿಸಿರುವ ಬಸವರಾಜ ಬೊಮ್ಮಾಯಿ, ಹೊಸ ಸರ್ಕಾರ ತಕ್ಷಣವೇ ಕಾರ್ಯಪ್ರವೃತವಾಗಿ ಮಳೆಯಿಂದ ಉಂಟಾಗಬಹುದಾದ ಹಾನಿಯನ್ನು ತಡೆಯಲು ಅಗತ್ಯ ಸಿದ್ದತೆಯನ್ನು ಮಾಡಿಕೊಳ್ಳಲು ಬಿಬಿಎಂಪಿ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಆದೇಶ ನೀಡಬೇಕು. ಮಳೆಯಿಂದ ಅಮಾಯಕರು ಜೀವ‌ ಕಳೆದುಕೊಳ್ಳುವುದನ್ನು ತಪ್ಪಿಸಬೇಕು ಎಂದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪ್ರಧಾನಿ ಮೋದಿಗೆ ಗುಜರಾತ್‌ನಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಓಕೆ, ಇತರೆಡೆ ಮಾತ್ರ ಬೇಡ’

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ....

ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದ ತೇಜಸ್ವಿ ಯಾದವ್!

ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ...

ಹಾಸನ ಪೆನ್‌ಡ್ರೈವ್ ಪ್ರಕರಣ: ಜರ್ಮನಿಗೆ ತೆರಳಿರುವ ಸಂಸದ ಪ್ರಜ್ವಲ್ ರೇವಣ್ಣ?

ಹಾಸನದ ಅಶ್ಲೀಲ ವೀಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ...