ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ; ಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು ದಾಖಲು

Date:

Advertisements

“ಈಗಲೂ ಯುವಕರು ಮತ್ತು ವಿದ್ಯಾರ್ಥಿಗಳು ಮೋದಿ.. ಮೋದಿ.. ಎಂದರೆ ಕಪಾಳಕ್ಕೆ ಹೊಡೆಯಬೇಕು” ಎಂದು ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು ದಾಖಲಾಗಿದೆ.

ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಕೊಪ್ಪಳ ಕ್ಷೇತ್ರದ ತಮ್ಮ ಪಕ್ಷದ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಪರ ಪ್ರಚಾರ ಮಾಡುವ ಸಮಯದಲ್ಲಿ ಮೋದಿ ವಿರುದ್ಧ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದರು.

“ಶಿವರಾಜ ತಂಗಡಗಿ ತಮ್ಮ ಭಾಷಣದಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು” ಎಂದು ಕಾರಟಗಿಯಲ್ಲಿ ಚುನಾವಣಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ಗಂಗಾವತಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಗ್ಯಾನನಗೌಡ ನಂದನಗೌಡ ನೀಡಿದ ದೂರು ಮೇಲೆ ಪ್ರಕರಣ ದಾಖಲಾಗಿದೆ.

Advertisements

ಶಿವರಾಜ ತಂಗಡಗಿ ಹೇಳಿದ್ದೇನು?

Advertisements
Bose Military School

ಭಾನುವಾರ (ಮಾ. 24) ಕಾರಟಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ತಂಗಡಗಿ ಮಾತನಾಡುತ್ತ, “ಯುವಕರಿಗೆ ಎರಡು ಕೋಟಿ ಉದ್ಯೋಗ ಕೊಡುವುದಾಗಿ ಹೇಳಿ ಪ್ರಧಾನಿ ನರೇಂದ್ರ ಮೋದಿ ಮಾತು ತಪ್ಪಿದ್ದಾರೆ. ಉದ್ಯೋಗ ಕೊಡಿ ಎಂದು ಕೇಳಿದರೆ ಪಕೋಡಾ ಮಾರಲು ಹೋಗಿ ಎಂದಿದ್ದಾರೆ. ಈಗಲೂ ಯುವಕರು ಹಾಗೂ ವಿದ್ಯಾರ್ಥಿಗಳು ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡೆಯಬೇಕು” ಎಂದು ಆಕ್ರೋಶ ಹೊರಹಾಕಿದ್ದರು.

ಬಿಜೆಪಿ ಪ್ರತಿಭಟನೆ

ತಂಗಡಗಿ ಹೇಳಿಕೆ ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ. ಹೇಳಿಕೆ ಖಂಡಿಸಿ ಪಕ್ಷದ ಕಾರ್ಯಕರ್ತರು ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಮಂಗಳವಾರ ಕಾರಟಗಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಕ್ಷೇತ್ರದ ಮಾಜಿ ಶಾಸಕ ಬಸವರಾಜ ದಢೇಸೂಗೂರು ಕಚೇರಿಯಿಂದ ಆರಂಭವಾಗಲಿರುವ ಪ್ರತಿಭಟನಾ ಮೆರವಣಿಗೆ ಕನಕದಾಸ ವೃತ್ತದ ತನಕ ನಡೆಯಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವನಹಳ್ಳಿ ರೈತ ಹೋರಾಟ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಮೇಧಾ ಪಾಟ್ಕರ್‌

ದೇವನಹಳ್ಳಿ ರೈತ ಹೋರಾಟಕ್ಕೆ ಸಂಬಂಧಿಸಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೋರಾಟಗಾರ್ತಿ, ಸಾಮಾಜಿಕ...

ಶಿವಮೊಗ್ಗ | ಹೊಸನಗರ ತಹಶೀಲ್ದಾರ್ ಅಮಾನತಿಗೆ ತೀ.ನ. ಶ್ರೀನಿವಾಸ್ ಆಗ್ರಹ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ವಸವೆ ಗ್ರಾಮದ ರೈತ ಶ್ರೀಧರ್ ಎನ್ನುವವರ...

ಶಿವಮೊಗ್ಗ | ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

ಶಿವಮೊಗ್ಗ, ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು...

ದೇವನಹಳ್ಳಿ ರೈತ ಹೋರಾಟ: ಹತ್ತು ದಿನಗಳ ಗಡುವು ಪಡೆಯುವುದೇ ಸರ್ಕಾರ?

ದೇವನಹಳ್ಳಿ ಭೂಸ್ವಾಧೀನ ಕುರಿತು ಚನ್ನರಾಯಪಟ್ಟಣ ರೈತರ ಹೋರಾಟ ಮತ್ತು ಬೇಡಿಕೆಗಳ ಕುರಿತಂತೆ...

Download Eedina App Android / iOS

X