ಪಿಎಸ್ಐ ನೇಮಕಾತಿ ಅಕ್ರಮ | ಸರ್ಕಾರಕ್ಕೆ ವರದಿ ಸಲ್ಲಿಸಿದ ನ್ಯಾ. ಬಿ. ವೀರಪ್ಪ ಸಮಿತಿ ಆಯೋಗ

Date:

ಪಿಎಸ್ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಸಿದರು.

ರಾಜ್ಯದಲ್ಲಿ ನಡೆದ 545 ಪಿಎಸ್​ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣ ಸಂಬಂಧ ತನಿಖೆಗೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.

ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿನ 93 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಹಣ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಗ್ಗಿ ಬದುಕಿದವರು ಎದ್ದು ನಿಲ್ಲುವುದು ಯಾವಾಗ?

ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿತ್ತು. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಮೃತ್ ಪಾಲ್​ರನ್ನು ಬಂಧಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಕ್ತಿ ಯೋಜನೆಗೆ 2 ವರ್ಷ: 474.82 ಕೋಟಿ ಮಹಿಳೆಯರ ಉಚಿತ ಪ್ರಯಾಣ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೊಜನೆ'...

ತೋತಾಪುರಿ ಮಾವು ಖರೀದಿ ಮೇಲೆ ನಿರ್ಬಂಧ, ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ್ದು, ಚಿತ್ತೂರು...

ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ ಅಲರ್ಟ್‌

ಕರ್ನಾಟಕಕ್ಕೆ ಮುಂಗಾರು ಮಳೆ ಪ್ರವೇಶಿಸಿ ಎರಡು ವಾರಗಳು ಕಳೆದಿವೆ. ರಾಜ್ಯದ ನಾನಾ...

Download Eedina App Android / iOS

X