ಪಿಎಸ್‌ಐ ನೇಮಕಾತಿ ಹಗರಣ ನ್ಯಾಯಾಂಗ ತನಿಖೆಗೆ; ಕಾಂಗ್ರೆಸ್‌ ದ್ವೇಷದ ರಾಜಕಾರಣ: ಬೊಮ್ಮಾಯಿ

Date:

Advertisements

ಪಿಎಸ್‌ಐ ನೇಮಕಾತಿ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ್ದು, ದ್ವೇಷದ ರಾಜಕಾರಣ ಎಲ್ಲಿಗೆ ಹೋಗುತ್ತಿದೆ ಎನ್ನುವುದು ಗೊತ್ತಾಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ ಹಗರಣ ನಾವೇ ಹೊರಗೆ ತಂದು ಸಿಐಡಿ ತನಿಖೆಗೆ ಆದೇಶ ಮಾಡಿದ್ದೆವು. ಪ್ರಕರಣದಲ್ಲಿ ಎಡಿಜಿಪಿ ಹುದ್ದೆಯ ಅಧಿಕಾರಿಯನ್ನು ಜೈಲಿಗೆ ಕಳುಹಿಸಿದ್ದೇವೆ.‌ ಈ ಹಗರಣದಲ್ಲಿ ಕಾಂಗ್ರೆಸ್ ನವರೂ ಇದ್ದಾರೆ. ಪ್ರಕರಣದ ತನಿಖೆ ನಡೆದು ಕೋರ್ಟ್‌ನಲ್ಲಿದೆ‌.‌ ಈ ಸಂದರ್ಭ ಮತ್ತೆ ತನಿಖೆಗೆ ಆದೇಶ ಮಾಡಿರುವುದು ದ್ವೇಷ ರಾಜಕೀಯವನ್ನು ತೋರಿಸುತ್ತದೆ ಎಂದು ಹೇಳಿದರು.

ಗಾಂಧೀಜಿ, ಸ್ವಾತಂತ್ರ್ಯದ ನಂತರ ಕಾಂಗ್ರೆಸ್‌ ವಿಸರ್ಜಿಸಿ ಎಂದಿದ್ದರು

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರು ಗೋಡ್ಸೆ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಲಿ ಎಂದು ಹೇಳಿದ್ದಾರೆ‌‌. ನಕಲಿ ಗಾಂಧಿಗಳ ಜಪ ಮಾಡುತ್ತಿರುವವರು ಕಾಂಗ್ರೆಸ್ ನವರು. ಗಾಂದೀಜಿಯನ್ನು ಹೆಚ್ಚು ದುರುಪಯೋಗ ಮಾಡಿಕೊಂಡವರು ಕಾಂಗ್ರೆಸ್ ನವರು. ಗಾಂಧೀಜಿ ಅವರು ಸ್ವಾತಂತ್ರ್ಯದ ನಂತರ ಕಾಂಗ್ರೆಸ್‌ನ್ನು ವಿಸರ್ಜಿಸಿ ಎಂದು ಹೇಳಿದ್ದರು. ಯಾಕೆಂದರೆ ಕಾಂಗ್ರೆಸ್ ನವರಿಗೆ ದೇಶ ಆಳಲು ಬರುವುದಿಲ್ಲ ಎಂದು. ಆದರೆ, ಇವರು ಗಾಂಧೀಜಿ‌ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ವಿರೋಧ ಪಕ್ಷದವರಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡಿದ್ದು ಇದೇ ಮೊದಲು: ಸಿಎಂ ಸಿದ್ದರಾಮಯ್ಯ

ಬೆಲೆ ಏರಿಕೆಯಿಂದ ಜನಜೀವನ ದುಸ್ತರ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಜೀವನ ದುಸ್ತರ ಆಗಿದೆ. ಸರ್ಕಾರ ಬಂದ ತಕ್ಷಣ ವಿದ್ಯುತ್ ದರ ಹೆಚ್ಚಳ ಮಾಡಿದರು. ಎಲ್ಲ ಕಾಯಿಪಲ್ಯೆ ದರ ಹೆಚ್ಚಳ ಆಗಿದೆ. ಈಗ ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಆಗಸ್ಟ್ 1ರ ನಂತರ ಸೈಟ್, ಕಾರು, ಹೊಸ ಮನೆ ಖರೀದಿ ದರವೂ ಹೆಚ್ಚಳ‌ವಾಗಲಿದೆ ಎಂದು ಕಿಡಿಕಾರಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X