ಪುಲ್ವಾಮಾ ದಾಳಿ | ಸೈನಿಕರ ಸಾವಿಗೆ ಕಾರಣ ಯಾರು ಎಂದು ಅಯೋಗ್ಯ ಬಿಜೆಪಿ ಸ್ಪಷ್ಟಪಡಿಸಲಿ: ಕೃಷ್ಣಬೈರೇಗೌಡ

Date:

Advertisements

ಐದು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ಜೀವ ಚೆಲ್ಲಿದ 40 ಜನ ಭಾರತೀಯ ಸೈನಿಕರ ಹತ್ಯೆಗೆ ಕಾರಣ ಯಾರು? ಈ ಕೃತ್ಯಕ್ಕೆ ಬಳಸಿದ ಆರ್‌ಡಿಎಕ್ಸ್ ಎಲ್ಲಿಂದ ಬಂತು? ಈ ಪ್ರಕರಣದ ತನಿಖೆ ಏನಾಯ್ತು? ಎಂಬುದನ್ನು ಅಯೋಗ್ಯ ಬಿಜೆಪಿ ನಾಯಕರು ಸ್ಪಷ್ಟಪಡಿಸಲಿ ಎಂದು ಸಚಿವ ಕೃಷ್ಣಬೈರೇಗೌಡ ಆಗ್ರಹಿಸಿದರು.

ಬುಧವಾರ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್ ಮಾತನಾಡುತ್ತಾ “ಕೇಂದ್ರ ಸರ್ಕಾರ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಯಾವ ಪಕ್ಷ? ದೇಶ ಒಡೆದದ್ದು ಯಾರು?” ಎಂದು ಪ್ರಶ್ನಿಸಿದರು.

ಈ ವೇಳೆ ಶಾಸಕರ ಭಾಷಣದ ನಡುವೆ ಮಧ್ಯ ಪ್ರವೇಶಿಸಿ, ಪುಲ್ವಾಮಾ ಹತ್ಯಾಕಾಂಡ ಘಟನೆಯನ್ನು ಉಲ್ಲೇಖಿಸಿ ಬಿಜೆಪಿಗರ ವಿರುದ್ಧ ಕಿಡಿಕಾರಿದ ಸಚಿವ ಕೃಷ್ಣಬೈರೇಗೌಡ, “ನಮ್ಮ ದೇಶದ 40 ಜನ ಸೈನಿಕರ ಸಾವಿಗೆ ಕಾರಣ ಯಾರು ಎಂಬುದನ್ನು ಜನರ ಮುಂದೆ ಹೇಳಲಾಗದ, ಪ್ರಕರಣದ ತನಿಖೆ ನಡೆಸುವ ಯೋಗ್ಯತೆಯೂ ಇಲ್ಲದ ಅಯೋಗ್ಯರು ಬಿಜೆಪಿಗರು. ಇವರಿಗೆ ದೇಶಕ್ಕೆ ಬೆಂಕಿ ಇಟ್ಟು ಓಟು ಹಾಕಿಸಿಕೊಳ್ಳುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ?” ಎಂದು ಆಕ್ರೋಶ ಹೊರಹಾಕಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಪ್ರಸಾದ ಬೇಡ ಬಸ್ ಬೇಕು’ ಎಂದ ಬಾಲಕಿಯ ಮನವಿಯಲ್ಲಿದೆ ಮಹತ್ವದ ಸಂದೇಶ

ಮುಂದುವರೆದು, “ಬಿಜೆಪಿಗರು ಸದನದಲ್ಲಿ ವಾಸ್ತವಕ್ಕೆ ಹತ್ತಿರವಾದ ವಿಚಾರದ ಬಗ್ಗೆ ಮಾತನಾಡಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಬರೀ ಸುಳ್ಳು ಮತ್ತು ಕಟ್ಟುಕಥೆಗಳಿಂದ ಕೂಡಿದ ಅವರ ಮಾತಿಗೆ ಸದನದಲ್ಲಿ ಅವಕಾಶ ನೀಡಬೇಡಿ. ಬಿಜೆಪಿ ನಾಯಕರು ಸದನದ ಒಳಗೆ ಮತ್ತು ಹೊರಗೆ ಬೆಂಕಿ ಹಚ್ಚುವ ಕೆಲಸದಲ್ಲಿ ನಿಷ್ಣಾತರು. ಅದರಲ್ಲೂ, ಬಿಜೆಪಿ ಶಾಸಕ ವಿ. ಸುನೀಲ್ ಕುಮಾರ್ ಅವರು ಉದ್ದೇಶಪೂರ್ವಕವಾಗಿ ಪ್ರಚೋದನಾತ್ಮಕ ಮಾತುಗಳನ್ನಾಡುತ್ತಿದ್ದಾರೆ” ಎಂದರು.

“ನಾವು ತಾಳ್ಮೆಯಿಂದ ಇದ್ದೇವೆ ಎಂಬ ಕಾರಣಕ್ಕೆ ಅವರು ದುರ್ಲಾಬ ಪಡೆದುಕೊಂಡು ವಾಸ್ತವ ಬಿಟ್ಟು ಪ್ರಚೋದನೆಯ ಮಾತುಗಳನ್ನಾಡುತ್ತಿದ್ದಾರೆ. ನಮ್ಮ ತಾಳ್ಮೆ ಪರೀಕ್ಷೆ ಮಾಡುವುದೇ ಅವರ ಉದ್ದೇಶವಾಗಿದೆ. ದೇಶದ ವಿಭಜನೆಗೆ ಯಾರು ಕಾರಣ? ಎಂಬ ಬಗ್ಗೆ ಚರ್ಚಿಸಲು ನಾವು ಸಿದ್ದರಿದ್ದೇವೆ. ಆದರೆ, ಇಂದು ಅವರು ಅಸಲಿ ವಿಚಾರದ ಬಗ್ಗೆ ಮಾತನಾಡಲಿ. ವಿಷಯಾಂತರ ಬೇಡ” ಎಂದು ಸಚಿವರು ಕಿಡಿಕಾರಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X