ಪೊಲೀಸ್‌ ಅಧಿಕಾರಿಗೆ ಅ**ನ್ ಎಂದು ಅಶ್ಲೀಲವಾಗಿ ನಿಂದಿಸಿದ ಆರ್ ಅಶೋಕ್

Date:

ಅನುಮತಿ ಇಲ್ಲದೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿಗರನ್ನು ಪ್ರಶ್ನಿಸಿದ ಪೊಲೀಸ್‌ ಅಧಿಕಾರಿಗೆ ವಿಧಾನಸಭೆ ವಿಪಕ್ಷ ನಾಯಕ ಆರ್‌ ಅಶೋಕ್‌ ಅಶ್ಲೀಲವಾಗಿ ನಿಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ಸಾರಿಗೆ ಬಸ್‌ ಟಿಕೆಟ್‌ ಬೆಲೆ ಏರಿಕೆ ವಿರುದ್ಧ ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣನಲ್ಲಿ ವಿಪಕ್ಷ ನಾಯಕ ಆರ್‌ ಅಶೋಕ್ ಸೇರಿದಂತೆ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದರು. ಅನುಮತಿ ಪಡೆಯದೆ ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸುವುದು ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಪ್ರತಿಭಟನೆಯನ್ನು ನಿಲ್ಲಿಸಬೇಕೆಂದು ಪೊಲೀಸರು ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದೇ ವಿಚಾರಕ್ಕೆ, ಪೊಲೀಸರೊಂದಿಗೆ ಆರ್‌ ಅಶೋಕ್ ಮತ್ತು ಬಿಜೆಪಿಗರು ವಾಗ್ದಾದ ನಡೆಸಿದ್ದಾರೆ. ಈ ವೇಳೆ, ಅಶೋಕ್ ಅವರ ಕೈಹಿಡಿದು ಕರೆದೊಯ್ಯಲು ಮುಂದಾದ ಪೊಲೀಸ್‌ ಅಧಿಕಾರಿಗೆ ಅಶೋಕ್‌ ಅಶ್ಲೀಲ ಮತ್ತು ಅವಾಚ್ಯವಾಗಿ ನಿಂದಿಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದೆ.

ವಿಡಿಯೋದಲ್ಲಿ, “ನಾನು ಅಪೊಸಿಷನ್ ಲೀಡ್ರು (ವಿಪಕ್ಷ ನಾಯಕ). ನನ್ನ ಮೈಮುಟ್ಟಿದ್ರೆ ಉಷಾರ್. ಚಪ್ಪಲಿಲಿ ಹೊಡಿತೀನಿ ನಿನ್ ಅ**ನ್” ಎಂದು ಆರ್‌ ಅಶೋಕ್‌ ನಿಂದಿಸಿದ್ದಾರೆ.

ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್‌, “ಅಶೋಕ್‌ ಅವರೇ ವಿಪಕ್ಷ ನಾಯಕರಾಗಿಬಿಟ್ಟರೆ ಕರ್ತವ್ಯದಲ್ಲಿರುವ ಪೋಲೀಸ್ ಅಧಿಕಾರಿಗೆ ಅವಾಚ್ಯವಾಗಿ ನಿಂದಿಸಬಹುದೇ? ನಿನ್ನ ಅ**ನ್ ಅನ್ನೋದು ಎಷ್ಟು ಸರಿ? ಗೂಂಡಾಗಿರಿ ವಿಪಕ್ಷ ನಾಯಕನ ಕೆಲಸವೇ? ನಾಲಿಗೆ ಸಂಸ್ಕಾರ ಹೇಳುತ್ತದೆ. ಸಿ.ಟಿ ರವಿ ನಂತರ ಈಗ ನಿಮ್ಮ ಸರದಿಯೇ? ನೀವು ವಿರೋಧ ಪಕ್ಷದ ನಾಯಕನಾಗಿ ಉಳಿಯಲು ಅರ್ಹರಲ್ಲ ಎಂಬುದನ್ನು ನಿಮ್ಮ ನಡತೆ ಹೇಳುತ್ತಿದೆ. ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾರುದ್ದದ ಭಾಷಣ ಬಿಗಿಯುವ ನಿಮ್ಮ ನಾಯಕರ ಹೊಲಸು ನಾಲಿಗೆಯನ್ನು ಯಾವ ಫೆನಾಯಿಲ್‌ನಿಂದ ತೊಳೆಯಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...