ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಜೂನ್‌ 6ರ ಗಡುವು ನೀಡಿದ ಆರ್‌.ಅಶೋಕ್

Date:

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ಕಾಂಗ್ರೆಸ್‌ ಸರ್ಕಾರ ಲೂಟಿ ಮಾಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್‌ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಎಚ್ಚರಿಕೆ ನೀಡಿದರು.

- Advertisement -

ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದಲಿತರ ಹಣವನ್ನು ಟಕಾಟಕ್‌ ಎಂದು ಲೂಟಿ ಮಾಡಿದ ಕಾಂಗ್ರೆಸ್‌ ಸರ್ಕಾರವನ್ನು ಟಕಾಟಕ್‌ ಎಂದೇ ಅಧಿಕಾರದಿಂದ ಕೆಳಕ್ಕಿಳಿಸುವ ದಿನ ದೂರವಿಲ್ಲ. ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಪರಿಶಿಷ್ಟ ಪಂಗಡದ 187 ಕೋಟಿ ರೂ. ಹಣವನ್ನು ಗುಳುಂ ಮಾಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ. ಚುನಾವಣೆಗೆ ಮುನ್ನ ದಲಿತರ ಉದ್ಧಾರ ಎಂದು ಕಾಂಗ್ರೆಸ್‌ ಹೇಳುತ್ತಿತ್ತು. ನಂತರ ದಲಿತರನ್ನು ಶೋಷಣೆ ಮಾಡಿದೆ. ರಾಮನ ಹೆಸರು ಕಂಡರೆ ಆಗದ ಕಾಂಗ್ರೆಸ್‌ಗೆ ವಾಲ್ಮೀಕಿ ಹೆಸರಿನ ನಿಗಮವನ್ನೂ ಕಂಡರೆ ಆಗುವುದಿಲ್ಲ. ಹೆಣ್ಣುಮಕ್ಕಳಿಗೆ ಸುರಕ್ಷತೆ ಗ್ಯಾರಂಟಿ ಇಲ್ಲವೆಂದು ಗೊತ್ತಿತ್ತು. ಈಗ ಅಧಿಕಾರಿಗಳಿಗೂ ಗ್ಯಾರಂಟಿ ಇಲ್ಲ” ಎಂದು ಕಿಡಿಕಾರಿದರು.

ಕೊಲೆ ಪ್ರಕರಣ ದಾಖಲಿಸಿ

“ಹಿಂದೆ ಕೆ.ಎಸ್‌.ಈಶ್ವರಪ್ಪನವರ ಮೇಲೆ ಆರೋಪ ಬಂದಾಗ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಪ್ರಶ್ನೆ ಕೇಳಿದ್ದರು. ಹಾಗೆಯೇ ಸಿಎಂ ಸಿದ್ದರಾಮಯ್ಯ ಅವರಂತೂ ಸೆಕ್ಷನ್‌ 302 ಅಡಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದರು. ಈಗ ಡೆತ್‌ನೋಟ್‌ನಲ್ಲಿ ಸಚಿವರ ಹೆಸರಿದ್ದರೂ ಯಾವುದೇ ಕ್ರಮ ವಹಿಸಿಲ್ಲ. ಮುಖ್ಯಮಂತ್ರಿಗಳಿಗೆ ಮಾನ ಮರ್ಯಾದೆ ಇಲ್ಲ. ಈಗಲೂ ಸಚಿವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಿ” ಎಂದು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...