ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌ ಅಶೋಕ ಆಗ್ರಹ

Date:

ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದ್ದಾರೆ.

- Advertisement -

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಿಂದೂಗಳಿಗೆ ಘಾಸಿಯಾಗುವ ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುಗಳ ಕೆಚ್ಚಲು ಕೊಯ್ದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದೆ. ಈಗ ಕಾಟಾಚಾರಕ್ಕಾಗಿ ಒಬ್ಬನನ್ನು ಬಂಧಿಸಿದ್ದು, ಈತ ಬಿಹಾರದಿಂದ ಬಂದವನು ಎನ್ನಲಾಗಿದೆ. ಆದರೆ ಈತ ಇದೇ ಊರಿನಲ್ಲಿ ಹತ್ತು ವರ್ಷಗಳಿಂದ ನೆಲೆಸಿದ್ದು, ಆತನ ಅಣ್ಣನಿಗೆ ಫ್ಯಾಕ್ಟರಿ ಕೂಡ ಇದೆ. ಪೊಲೀಸರು ಈತನನ್ನು ವಿಚಾರಣೆ ಮಾಡಿ, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬೇಕಿತ್ತು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಘಟನೆಯಲ್ಲಿ ಯಾರ ಕೈವಾಡವಿದೆ ಎಂದು ತನಿಖೆ ಮಾಡಬೇಕಿತ್ತು. ಇಲ್ಲಿ ಪಶು ಆಸ್ಪತ್ರೆಯ ಜಾಗವಿದ್ದು, ಅದನ್ನು ವಕ್ಫ್‌ಗೆ ನೀಡಲು ಪ್ರಯತ್ನ ನಡೆದಿತ್ತು. ಸುಮಾರು 500 ಕೋಟಿ ರೂ. ಬೆಲೆಬಾಳುವ ಆಸ್ತಿಯನ್ನು ಲೂಟಿ ಮಾಡಲು ನಕಲಿ ದಾಖಲೆಗಳನ್ನು ಸರ್ಕಾರ ಸೃಷ್ಟಿ ಮಾಡಿತ್ತು. ಅದರ ವಿರುದ್ಧ ಹೋರಾಟ ಮಾಡಿದ ಕರ್ಣ ಅವರ ಮೇಲೆ ಸೇಡು ತೀರಿಸಿಕೊಳ್ಳಲು ಹೀಗೆ ಮಾಡಿದ್ದಾರೆ. ಸಚಿವ ಜಮೀರ್‌ ಅಹ್ಮದ್‌ ಹಸು ನೀಡುವುದರಿಂದ ಪರಿಹಾರ ಸಿಗಲ್ಲ. ಇದಕ್ಕೆ ನ್ಯಾಯ ಸಿಗಬೇಕಿದೆ ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಎರಡು ಮಕ್ಕಳು ಮಾಡಿಕೊಳ್ಳಿ ಎಂದು ಹೇಳಿದ್ದಾರೆ. ಇದನ್ನೇ ಮುಸ್ಲಿಮರ ಬಳಿ ಹೋಗಿ ಹೇಳಲಿ. ಹಿಂದೂಗಳ ಸಂಖ್ಯೆ ಕಡಿಮೆಯಾಗಲಿ, ಮುಸ್ಲಿಮರ ಸಂಖ್ಯೆ ಹೆಚ್ಚಲಿ ಎಂಬುದು ಅವರ ಉದ್ದೇಶ. ಒಂದು ಧರ್ಮಕ್ಕೆ ಬೆಣ್ಣೆ, ಮತ್ತೊಂದು ಧರ್ಮಕ್ಕೆ ಸುಣ್ಣ ಹಚ್ಚಲಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಎಲ್ಲ ಸಮುದಾಯಗಳನ್ನು ಒಂದಾಗಿ ಕೊಂಡೊಯ್ಯಬೇಕು ಎಂದು ಕಿವಿಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸಿತ ಕಂಡ ‘ಬಾಲಿವುಡ್’, ಭಿನ್ನ ಜಾಡು ಹಿಡಿದ ದಕ್ಷಿಣ ಭಾರತದ ಚಿತ್ರೋದ್ಯಮ

ರಾಜ್ಯದಲ್ಲಿ ಆಡಳಿತ ನೆಲ ಕಚ್ಚಿದೆ. ಅಭಿವೃದ್ಧಿ ಕಾರ್ಯವನ್ನು ಟಾರ್ಚ್‌ ಹಾಕಿ ಹುಡುಕಬೇಕಿದೆ. ಸಿಎಂ ಕುರ್ಚಿ ಖಾಲಿ ಇಲ್ಲವೆಂದು ಸಿದ್ದರಾಮಯ್ಯ ಸಾವಿರ ಬಾರಿ ಹೇಳಿದ್ದಾರೆ. ಎಲ್ಲೇ ಹೋದರೂ ಅದನ್ನೇ ಮಾತಾಡುತ್ತಿದ್ದಾರೆ. ಎಲ್ಲ ನಾಯಕರು ಪವರ್‌ ಪಾಲಿಟಿಕ್ಸ್‌ನಲ್ಲಿ ಮುಳುಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಮಂಡ್ಯಕ್ಕೆ ಹೋಗಿ ಅಧಿಕಾರ ಕೊಡಿ ಎಂದು ಜನರ ಮುಂದೆ ಹೇಳಿದ್ದರು. ಈಗ ಶಾಸಕರ ಮುಂದೆ ಹೋಗಿ ಅಂಗಲಾಚುತ್ತಿದ್ದಾರೆ. ಇವರ ಕಥೆ ಕತ್ತಲಲ್ಲಿ ಕರಡಿಯನ್ನು ಹುಡುಕುವಂತಾಗಿದೆ. ಈ ಪವರ್‌ ಶೇರಿಂಗ್‌ ಎಲ್ಲಿ ನಡೆದಿದೆ ಎಂದು ಜನರಿಗೆ ಸ್ಪಷ್ಟವಾಗಿ ತಿಳಿಸಲಿ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಶ್ಲೋಕ ಹೇಳಿದರೆ, ಸಚಿವ ರಾಜಣ್ಣ ಟೀಕೆ ಮಾಡುತ್ತಿದ್ದಾರೆ. ಸಚಿವ ಪರಮೇಶ್ವರ್‌ ಕೂಡ ಕೆಂಡಕಾರಿದ್ದಾರೆ. ಕೆಲವು ಶಾಸಕರು ಮುಂದಿನ ಸಿಎಂ ಶಿವಕುಮಾರ್‌ ಎನ್ನುತ್ತಿದ್ದಾರೆ. ಜನರು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಇಂತಹ ಪಾಪಿ ಸರ್ಕಾರ ಯಾಕಾದರೂ ಬಂತೋ ಎಂದು ಜನರು ಶಾಪ ಹಾಕುತ್ತಿದ್ದಾರೆ ಎಂದರು.

ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ ಬಂದು ಹೋದ ಬಳಿಕವೂ ಈ ಸಮಸ್ಯೆ ನಿವಾರಣೆಯಾಗಲ್ಲ. ಪವರ್‌‌ ಶೇರಿಂಗ್‌ ಬಗ್ಗೆ ಶಾಸಕರಿಗೆ ಸ್ಪಷ್ಟವಾಗಬೇಕಿದೆ. ಹೈಕಮಾಂಡ್‌ ಡಿ ಕೆ ಶಿವಕುಮಾರ್‌ ಅವರಿಗೆ ಮಾತು ನೀಡಿದೆ. ಅದರ ಬಗ್ಗೆ ಸರಿಯಾಗಿ ತಿಳಿಸಲಿ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....