ಗಾಂಧಿ ಆದರ್ಶ ಎಂದರೆ ಪರಿಶಿಷ್ಟರ ಹಣ ಲೂಟಿ ಮಾಡುವುದಾ: ಆರ್‌ ಅಶೋಕ್‌ ವಾಗ್ದಾಳಿ

Date:

ಗಾಂಧಿ ಆದರ್ಶ ಎಂದರೆ ಪರಿಶಿಷ್ಟರ ಹಣ ಲೂಟಿ ಮಾಡುವುದಾ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಗಾಂಧಿ ಆದರ್ಶಗಳನ್ನು ಅನುಸರಿಸುವುದು ಎಂದರೆ ಪರಿಶಿಷ್ಟರ ಕಲ್ಯಾಣಕ್ಕೆ ವಿನಿಯೋಗವಾಗಬೇಕಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಲೂಟಿ ಮಾಡುವುದಾ? ಅಥವಾ ಸೂರಿಲ್ಲದ ಜನಸಾಮಾನ್ಯರು ಸೂರು ಕಟ್ಟಿಕೊಳ್ಳಲು ಸಿಗಬೇಕಾಗಿದ್ದ ಮುಡಾ ಸೈಟುಗಳನ್ನು ಲಪಟಾಯಿಸುವುದಾ? ಎಂದು ಪ್ರಶ್ನಿಸಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗಾಂಧಿ ತತ್ವಗಳನ್ನು ಅಳವಡಿಸಿಕೊಳ್ಳುವುದು ಎಂದರೆ ಗಾಂಧೀಜಿ ಅವರು ತಂದುಕೊಟ್ಟ ಸ್ವಾತಂತ್ರ್ಯ ಬಳಸಿಕೊಂಡು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುವ ದೇಶದ್ರೋಹಿಗಳನ್ನು ಸಮರ್ಥನೆ ಮಾಡಿಕೊಳ್ಳುವುದಾ? ಅಥವಾ ಗೋಮಾತೆಯ ಕೆಚ್ಚಲು ಕತ್ತರಿಸಿದರೂ ಮೌನ ವಹಿಸುವುದಾ? ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!

ಗಾಂಧಿ ಕನಸನ್ನು ನನಸಾಗಿಸುವುದು ಎಂದರೆ ನಕಲಿ ಗಾಂಧಿಗಳ ಕೈಗೆ ಕಾಂಗ್ರೆಸ್ ಪಕ್ಷವನ್ನು ಕೊಟ್ಟು ಗುಮಲಾಗಿರಿ ಮಾಡುವುದಾ? ಅಥವಾ ಸ್ವತಂತ್ರ ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಿ ಇಡೀ ದೇಶವನ್ನೇ ಜೈಲು ಮಾಡುವುದಾ? ಎಂದು ವಿಪಕ್ಷ ನಾಯಕ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಬಹುಶಃ ಇದನ್ನೆಲ್ಲಾ ಮುಂದಾಲೋಚನೆ ಮಾಡಿಯೇ ಗಾಂಧೀಜಿ ಅವರು ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ಪಕ್ಷವನ್ನ ವಿಸರ್ಜನೆ ಮಾಡಬೇಕು ಎಂದು ಹೇಳಿದ್ದರು ಅನ್ನಿಸುತ್ತೆ. ಈಗಿರುವ ನಕಲಿ ಗಾಂಧಿಗಳು ಎಷ್ಟು ಡೋಂಗಿ ಗಾಂಧಿವಾದಗಳೋ ಅಧಿಕಾರಕ್ಕಾಗಿ ಅವರ ಗುಲಾಮಗಿರಿ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಅವರಿಗಿಂತ ಹೆಚ್ಚು ಡೋಂಗಿಗಳು ಎಂದು ವಾಗ್ದಾಳಿ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...

ಅಕ್ಟೋಬರ್ 10ರ ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ಧರಣಿಯಲ್ಲಿ ಮಮತಾ ಬ್ಯಾನರ್ಜಿ ಭಾಗಿ ಸಾಧ್ಯತೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ಅನರ್ಹತೆ ನೋಟಿಸ್: ಲೋಕಸಭಾ ಸ್ಪೀಕರ್ ಬಳಿ ಮತ್ತೆ 15 ದಿನ ಕಾಲಾವಕಾಶ ಕೋರಿದ ಟಿಎಂಸಿ ಬಂಡಾಯ ಸಂಸದರು

ಪಕ್ಷಾಂತರ ನಿರೋಧಕ ಕಾಯ್ದೆಯಡಿ ಎದುರಿಸುತ್ತಿರುವ ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ...