ತನಿಖೆಯನ್ನೇ ನಡೆಸದೆ ಕ್ಲೀನ್ ಚಿಟ್: ಆರ್‌ ಅಶೋಕ್‌ ಟೀಕೆ

Date:

ಮುಡಾ ಹಗರಣದಲ್ಲಿ ನಡೆಸಲಾಗಿರುವ ಲೋಕಾಯುಕ್ತ ತನಿಖೆಯು ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆಯಾಗಿದ್ದು, ಇದರಲ್ಲಿ ನ್ಯಾಯ ಸಿಕ್ಕುತ್ತದೆ ಎನ್ನುವ ಭರವಸೆ ಯಾರಿಗೂ ಇರಲಿಲ್ಲ ಎಂದು ಆರ್‌ ಅಶೋಕ್‌ ಟೀಕಿಸಿದ್ದಾರೆ.

- Advertisement -

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಮುಡಾ ಹಗರಣದಲ್ಲಿ ತನಿಖೆಗೆ ಮೊದಲೇ ಮುಖ್ಯಮಂತ್ರಿಗಳಾದಿಯಾಗಿ, ಸಚಿವರು, ಕಾಂಗ್ರೆಸ್ ಶಾಸಕರು ಆರೋಪಿ ಸಿದ್ದರಾಮಯ್ಯ ಹಾಗು ಅವರ ಧರ್ಮ ಪತ್ನಿ ಅವರಿಗೆ ಕ್ಲೀನ್ ಚಿಟ್ ನೀಡಿದ್ದರು. ಇದನ್ನೇ ಲೋಕಾಯುಕ್ತ ಪೊಲೀಸರೂ ಸ್ವಲ್ಪ ತಡವಾಗಿ ‘ಬಿ ರಿಪೋರ್ಟ್’ ರೂಪದಲ್ಲಿ ನೀಡಿದ್ದಾರೆ. ಇದರಲ್ಲಿ ಆಶ್ಚರ್ಯಪಡುವಂತದ್ದು ಏನಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಪಾಠ ಕಲಿಯದ ‘ರೈಲ್ವೆ ಇಲಾಖೆ’

ಒಂದೇ ಒಂದು ದಿನ ನೆಪಮಾತ್ರಕ್ಕೆ ಆರೋಪಿ ಸಿಎಂ ಸಿದ್ದರಾಮಯ್ಯ ಹಾಗು ಅವರ ಪತ್ನಿ ಅವರನ್ನು ವಿಚಾರಣೆ ನಡೆಸಿ ಕ್ಲೀನ್ ಚಿಟ್ ನೀಡಿರಿವುದು ರಾಜ್ಯ ಕಂಡ ‘ಐತಿಹಾಸಿಕ ದುರಂತ’. ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ‘ನ್ಯಾಯ’ ಮಣ್ಣುಪಾಲಾಗಿದೆ. ಸಮರ್ಪಕ ತನಿಖೆಯನ್ನೇ ನಡೆಸದೆ ಕ್ಲೀನ್ ಚಿಟ್ ನೀಡಿ ‘ನ್ಯಾಯದ ಸಮಾಧಿ’ ಮಾಡಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಿಬಿಐಗೆ ನೀಡಲು ಆಗ್ರಹ: ಛಲವಾದಿ ನಾರಾಯಣಸ್ವಾಮಿ

ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಅಕ್ರಮದ ಬಗ್ಗೆ ಸಿಬಿಐ ತನಿಖೆಗೆ ನೀಡಿದರೆ ಬಯಲಾಗುತ್ತದೆ. ಕಾಂಗ್ರೆಸ್​ನವರಿಗೆ ಸಿಬಿಐ ಮೇಲೆ ವಿಶ್ವಾವಿಲ್ಲವೆಂದರೆ ಏನರ್ಥ. ಕಾಂಗ್ರೆಸ್​ನವರು ಕೇಂದ್ರದಲ್ಲಿದ್ದಾಗ ನಡೆದ ತನಿಖೆಗಳ ಸ್ಥಿತಿ ಏನು? ಹಾಗಾದರೆ ಕಾಂಗ್ರೆಸ್​ನವರು ಸಿಬಿಐ ದುರ್ಬಳಕೆ ಮಾಡಿಕೊಂಡಿದ್ದರಾ? ಮುಡಾ ಅಕ್ರಮದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರಲಿದೆ. ಕಾನೂನು ಹೋರಾಟ ಮಾಡುವ ಬಗ್ಗೆ ಪಕ್ಷದಲ್ಲಿ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ...

ಸಿಜೆಪಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ: ಸೆ.17ರಿಂದ ಶಾಲೆಗಳ ಪರಿಶೀಲನೆ

ದೇಶದ ಅರಣ್ಯ ಮತ್ತು ಮೂಲನಿವಾಸಿ ಪ್ರದೇಶಗಳ ಶಾಲೆಗಳಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮತ್ತು...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...