2000 ರೂ. ನೀಡುವ ಬದಲು ಬಾಣಂತಿಯರ ಸಾವು ನಿಲ್ಲಿಸಿ: ಆರ್ ಅಶೋಕ್

Date:

ಕರ್ನಾಟಕದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸರಣಿ ಸಾವಿನ ವಿಚಾರವಾಗಿ ರಾಜ್ಯ ಸರ್ಕಾರವನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಸರ್ಕಾರಿ ಪ್ರಾಯೋಜಿತ ಕೊಲೆಗೆ ಸಮ. ಇನ್ನೂ ಕೂಡ ಈ ಸರ್ಕಾರಕ್ಕೆ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಅನಿಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಾಣಂತಿಯರ ಸಾವಿಗೆ ಸಂಬಂಧಿಸಿದ ನ್ಯಾಯಾಂಗ ತನಿಖೆ ಬಗ್ಗೆ, ಡೆತ್ ಆಡಿಟ್ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಕಳಪೆ ದ್ರಾವಣ ಪೂರೈಸಿದ ಕಂಪನಿ ವಿರುದ್ಧ ದೆಹಲಿಗೆ ಹೋಗಿ ದೂರು ಕೊಡುವುದಾಗಿ ಆರೋಗ್ಯ ಸಚಿವರು ಹೇಳಿದ್ದರು. ಆದರೆ ಇನ್ನೂ ಯಾಕೆ ಹೋಗಿ ದೂರು ಕೊಟ್ಟಿಲ್ಲ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳು ಬಾಣಂತಿಯರ ಪಾಲಿಗೆ ಮರಣ ಮೃದಂಗ ಬಾರಿಸುವಂತಾಗಿದೆ. ಅಪ್ಪಾ ಸಿದ್ದರಾಮಯ್ಯನವರೇ, ನಿಮ್ಮ 2000 ರೂಪಾಯಿ ನೀಡುವ ಬದಲು ಮೊದಲು ಬಾಣಂತಿಯರ ಸಾವು ನಿಲ್ಲಿಸಿ. ಔಷಧ ನಿಯಂತ್ರಣದಲ್ಲಿ ಗೋಲ್ಮಾಲ್ ಆಗುತ್ತಿರುವುದನ್ನು ತಪ್ಪಿಸಿ. ರಾಜ್ಯದಲ್ಲಿ ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಸರ್ಕಾರ ಕೊಡಲಿ ಎಂದು ಅವರು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ: ಫೈನಲ್‌ಗೆ ಭಾರತ – ಪಾಕ್‌ ಜೊತೆಯಾದರೆ ಎರಡು ಸ್ಥಳ ನಿಗದಿ!

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಲ್ಲದಕ್ಕೂ ಕಾರಣ ಎಂದು ಆರೋಪಿಸಿರುವ ಅಶೋಕ್, ಸಚಿವರ ರಾಜಿನಾಮೆಗೆ ಆಗ್ರಹಿಸಿದ್ದಾರೆ. ಅಲ್ಲದೆ, ಬಾಣಂತಿಯರ ಸಾವು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೊಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈಗಿನ ಆರೋಗ್ಯ ಸಚಿವರು ರಾಜಿನಾಮೆ ಕೊಟ್ಟು ಹೊಸ ಸಚಿವರು ಬಂದರೆ ಹಾಗೂ ಸಕ್ರಿಯವಾಗಿ ಕೆಲಸ ಮಾಡಿದರೆ ಬಾಣಂತಿಯರ ಸಾವಿನ ವಿಚಾರದಲ್ಲಿ ಪರಿಹಾರ ದೊರೆಯಲು ಸಾಧ್ಯವಾಗಬಹುದು. ನಾವು ಪ್ರತಿಪಕ್ಷವಾಗಿ ಕಳೆದ ಒಂದು ವರ್ಷದಲ್ಲಿ ಹೋರಾಟ ಮಾಡಿದಷ್ಟು ಹಿಂದೆಂದೂ ಮಾಡಿಲ್ಲ. ನಾವು ಹಳೆಯ ವಿಚಾರಗಳನ್ನು ಎಲ್ಲವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದೇವೆ. ಈ ಪ್ರಕರಣದಲ್ಲೂ ಅಷ್ಟೆ, ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ಮಾಡಿದ್ದೇವೆ. ವರದಿ ದೊರೆತ ಬಳಿಕ ಹೋರಾಟ ಮುಂದುವರಿಸಲಿದ್ದೇವೆ. ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ ಎಂದು ಅಶೋಕ್ ಹೇಳಿದ್ದಾರೆ.

ಅಂದು ಬಿಜೆಪಿ ಸರ್ಕಾರ ಇದ್ದಾಗ ಈಶ್ವರಪ್ಪನವರನ್ನು ಉದ್ದೇಶಿಸಿ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದರು. ಒಬ್ಬ ವ್ಯಕ್ತಿ ಆತ್ಮಹತ್ಯೆ ನಿರ್ಧಾರಕ್ಕೆ ಬರಬೇಕು ಎಂದರೆ ಎಷ್ಟು ಕಷ್ಟಪಟ್ಟಿರಬಹುದು. ಎಷ್ಟು ಮಂದಿ ಬೀದಿಗೆ ಬಂದಿರಬಹುದು ಎಂದು ಪ್ರಿಯಾಂಕ್ ಪ್ರಶ್ನಿಸಿದ್ದರು. ಅದೇ ಪ್ರಿಯಾಂಕ್ ಖರ್ಗೆ ಈಗ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ನೀಡಲಿ ಎಂದು ಅಶೋಕ್ ಕಿಡಿಕಾರಿದ್ದಾರೆ.

ಎಐಸಿಸಿ ಅಧ್ಯಕ್ಷರ ಮಗ ಎಂದು ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಲು ಸಿದ್ದರಾಮಯ್ಯ ನಡುಗುತ್ತಿದ್ದಾರೆ. ನಾವು ಬಟ್ಟೆಹರಿದುಕೊಳ್ಳುವುದಕ್ಕಿಂತ ಮೊದಲು ಅವರ ಬಟ್ಟೆ ಹರಿದು ಹೋಗುತ್ತದೆ ಎಂದು ಅಶೋಕ್ ತಿರುಗೇಟು ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...