ಭತ್ತ, ತೊಗರಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ: ಆರ್ ಅಶೋಕ್

Date:

Advertisements

ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು. ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದರೂ ಅತ್ತ ಗಮನ ಹರಿಸದ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಕಷ್ಟಕ್ಕೆ ದೂಡಿದೆ. ಇನ್ನು 24 ಗಂಟೆಯೊಳಗೆ ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು, ಖರೀದಿ ಆರಂಭಿಸದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ ಮಾಡಬೇಕಾಗುತ್ತದೆ” ಎಚ್ಚರಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಜ್ಯ ಸರ್ಕಾರ ದಿವಾಳಿಯತ್ತ ಸಾಗಿದೆ: ಆರ್ ಅಶೋಕ್

Advertisements

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿನ್ನರ್ ಸಭೆಗಳು, ಔತಣಕೂಟಗಳು, ರಾಜಕೀಯ ಮೇಲಾಟಗಳಲ್ಲೇ ನಿರತರಾಗಿದ್ದಾರೆ. ಈ ಕೆಲಸಗಳು ಮುಗಿದಿದ್ದರೆ ಸ್ವಲ್ಪ ರೈತರ ಸಮಸ್ಯೆಗಳತ್ತ ಗಮನ ಹರಿಸುವ ದೊಡ್ಡ ಮನಸ್ಸು ಮಾಡಬೇಕು. ಬಿಡುವು ಇಲ್ಲದಿದ್ದರೆ ಕನಿಷ್ಠ ಪಕ್ಷ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗಾದರೂ, ಅವರು ಕೃಷಿ ಸಚಿವರು ಎಂಬುದನ್ನು ಒಮ್ಮೆ ನೆನಪು ಮಾಡಬೇಕು” ಎಂದು ವಿಪಕ್ಷ ನಾಯಕರು ವ್ಯಂಗ್ಯವಾಡಿದ್ದಾರೆ.

“ಈ ದರಿದ್ರ ಸರ್ಕಾರದಲ್ಲಿ ಒಬ್ಬರು ಕುರ್ಚಿ ಉಳಿಸಿಕೊಳ್ಳಲು ತಂತ್ರ ಹೆಣೆಯುತ್ತಿದ್ದರೆ, ಇನ್ನೊಬ್ಬರು ಕುರ್ಚಿ ಕಿತ್ತುಕೊಳ್ಳಲು ಕತ್ತಿ ಮಸೆಯುತ್ತಿದ್ದಾರೆ. ಇವರಿಬ್ಬರ ನಡುವೆ ಅತಂತ್ರವಾಗಿರುವ ಸಚಿವರು ಅವರವರ ಅಸ್ತಿತ್ವ ಉಳಿಸಿಕೊಳ್ಳಲು ಡಿನ್ನರ್ ಮೀಟಿಂಗ್, ಸೀಕ್ರೆಟ್ ಸಭೆ ಮಾಡಿ ಕಾಲಹರಣ ಮಾಡುತ್ತಿದ್ದಾರೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಇವೆಲ್ಲದರ ನಡುವೆ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ರೈತರ ಕಷ್ಟ ಕೇಳಲು ಸರ್ಕಾರವೇ ಇಲ್ಲದಂತಾಗಿದೆ” ಎಂದು ಆರ್ ಅಶೋಕ್ ದೂರಿದರು.

ಇದನ್ನು ಓದಿದ್ದೀರಾ? ಪೊಲೀಸ್‌ ಅಧಿಕಾರಿಗೆ ಅ**ನ್ ಎಂದು ಅಶ್ಲೀಲವಾಗಿ ನಿಂದಿಸಿದ ಆರ್ ಅಶೋಕ್

“ಮಂಡ್ಯದಲ್ಲಿ ಭತ್ತ ಖರೀದಿ ಕೇಂದ್ರಗಳು ಆರಂಭವಾಗದೆ, ರೈತರು ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ದಲ್ಲಾಳಿಗಳಿಗೆ ಭತ್ತ ಮಾರಾಟ ಮಾಡುವ ಅನಿವಾರ್ಯ ಎದುರಾಗಿದೆ. ಕ್ವಿಂಟಾಲ್ ಭತ್ತಕ್ಕೆ ₹3,000 ಬೆಂಬಲ ಬೆಲೆ ನಿಗದಿಯಾಗಿದ್ದರೂ ಸರ್ಕಾರ ಭತ್ತ ಖರೀದಿ ಕೇಂದ್ರಗಳನ್ನು ತೆರೆಯದ ಕಾರಣ ದಲ್ಲಾಳಿಗಳಿಗೆ ₹1,800ರಿಂದ ₹2,000ಕ್ಕೆ ಮಾರಾಟ ಮಾಡಿ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ತವರು ಜಿಲ್ಲೆಯಲ್ಲೇ ಈ ಗತಿಯಾದರೆ, ಇನ್ನು ಬೇರೆ ಜಿಲ್ಲೆಗಳ ಗತಿ ಏನಾಗಿರಬಹುದು ಎನ್ನುವುದನ್ನು ಹೇಳಬೇಕಿಲ್ಲ” ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾದ ತೊಗರಿ ಬೆಲೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದ್ದು, ಸರ್ಕಾರ ಯಾವಾಗ ತೊಗರಿ ಖರೀದಿ ಕೇಂದ್ರ ತೆರೆಯಲಿದೆ ಎಂದು ರೈತರು ಕಾತರದಿಂದ ಎದುರು ನೋಡುತ್ತಿದ್ದಾರೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಈ ಬಾರಿ ತೇವಾಂಶದ ಇಳಿಕೆಯಿಂದ 1.82 ಲಕ್ಷ ಹೆಕ್ಟೇರ್‌ ವ್ಯಾಪ್ತಿಯಲ್ಲಿ ತೊಗರಿ ಬೆಳೆಗೆ ಹಾನಿಯಾಗಿದೆ ಎಂದು ಸರಕಾರಿ ದಾಖಲೆಗಳೇ ಹೇಳುತ್ತವೆ. ಆದರೆ, ಇದುವರೆಗೂ ರಾಜ್ಯ ಸರ್ಕಾರ ಪರಿಹಾರದ ಮಾತೇ ಆಡಿಲ್ಲ. ಜಿಲ್ಲೆಯ ಉಸ್ತುವಾರಿ ಸಚಿವರು ಕೂಡ ಚಕಾರ ಎತ್ತುತ್ತಿಲ್ಲ. ಒಟ್ಟಿನಲ್ಲಿ ಈ ರೈತ ವಿರೋಧಿ ಸಿಎಂ ಸಿದ್ದರಾಮಯ್ಯನವರ ಸರ್ಕಾರ ತೊಲಗುವವರೆಗೂ ನಾಡಿನ ಅನ್ನದಾತರಿಗೆ ನೆಮ್ಮದಿಯಿಲ್ಲ” ಎಂದು ದೂರಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X