ಭತ್ತ, ತೊಗರಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ: ಆರ್ ಅಶೋಕ್

Date:

ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು. ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಕೆ ನೀಡಿದ್ದಾರೆ.

- Advertisement -

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದರೂ ಅತ್ತ ಗಮನ ಹರಿಸದ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಕಷ್ಟಕ್ಕೆ ದೂಡಿದೆ. ಇನ್ನು 24 ಗಂಟೆಯೊಳಗೆ ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು, ಖರೀದಿ ಆರಂಭಿಸದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ ಮಾಡಬೇಕಾಗುತ್ತದೆ” ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನು ಓದಿದ್ದೀರಾ? ರಾಜ್ಯ ಸರ್ಕಾರ ದಿವಾಳಿಯತ್ತ ಸಾಗಿದೆ: ಆರ್ ಅಶೋಕ್

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿನ್ನರ್ ಸಭೆಗಳು, ಔತಣಕೂಟಗಳು, ರಾಜಕೀಯ ಮೇಲಾಟಗಳಲ್ಲೇ ನಿರತರಾಗಿದ್ದಾರೆ. ಈ ಕೆಲಸಗಳು ಮುಗಿದಿದ್ದರೆ ಸ್ವಲ್ಪ ರೈತರ ಸಮಸ್ಯೆಗಳತ್ತ ಗಮನ ಹರಿಸುವ ದೊಡ್ಡ ಮನಸ್ಸು ಮಾಡಬೇಕು. ಬಿಡುವು ಇಲ್ಲದಿದ್ದರೆ ಕನಿಷ್ಠ ಪಕ್ಷ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗಾದರೂ, ಅವರು ಕೃಷಿ ಸಚಿವರು ಎಂಬುದನ್ನು ಒಮ್ಮೆ ನೆನಪು ಮಾಡಬೇಕು” ಎಂದು ವಿಪಕ್ಷ ನಾಯಕರು ವ್ಯಂಗ್ಯವಾಡಿದ್ದಾರೆ.

“ಈ ದರಿದ್ರ ಸರ್ಕಾರದಲ್ಲಿ ಒಬ್ಬರು ಕುರ್ಚಿ ಉಳಿಸಿಕೊಳ್ಳಲು ತಂತ್ರ ಹೆಣೆಯುತ್ತಿದ್ದರೆ, ಇನ್ನೊಬ್ಬರು ಕುರ್ಚಿ ಕಿತ್ತುಕೊಳ್ಳಲು ಕತ್ತಿ ಮಸೆಯುತ್ತಿದ್ದಾರೆ. ಇವರಿಬ್ಬರ ನಡುವೆ ಅತಂತ್ರವಾಗಿರುವ ಸಚಿವರು ಅವರವರ ಅಸ್ತಿತ್ವ ಉಳಿಸಿಕೊಳ್ಳಲು ಡಿನ್ನರ್ ಮೀಟಿಂಗ್, ಸೀಕ್ರೆಟ್ ಸಭೆ ಮಾಡಿ ಕಾಲಹರಣ ಮಾಡುತ್ತಿದ್ದಾರೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಇವೆಲ್ಲದರ ನಡುವೆ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ರೈತರ ಕಷ್ಟ ಕೇಳಲು ಸರ್ಕಾರವೇ ಇಲ್ಲದಂತಾಗಿದೆ” ಎಂದು ಆರ್ ಅಶೋಕ್ ದೂರಿದರು.

ಇದನ್ನು ಓದಿದ್ದೀರಾ? ಪೊಲೀಸ್‌ ಅಧಿಕಾರಿಗೆ ಅ**ನ್ ಎಂದು ಅಶ್ಲೀಲವಾಗಿ ನಿಂದಿಸಿದ ಆರ್ ಅಶೋಕ್

“ಮಂಡ್ಯದಲ್ಲಿ ಭತ್ತ ಖರೀದಿ ಕೇಂದ್ರಗಳು ಆರಂಭವಾಗದೆ, ರೈತರು ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ದಲ್ಲಾಳಿಗಳಿಗೆ ಭತ್ತ ಮಾರಾಟ ಮಾಡುವ ಅನಿವಾರ್ಯ ಎದುರಾಗಿದೆ. ಕ್ವಿಂಟಾಲ್ ಭತ್ತಕ್ಕೆ ₹3,000 ಬೆಂಬಲ ಬೆಲೆ ನಿಗದಿಯಾಗಿದ್ದರೂ ಸರ್ಕಾರ ಭತ್ತ ಖರೀದಿ ಕೇಂದ್ರಗಳನ್ನು ತೆರೆಯದ ಕಾರಣ ದಲ್ಲಾಳಿಗಳಿಗೆ ₹1,800ರಿಂದ ₹2,000ಕ್ಕೆ ಮಾರಾಟ ಮಾಡಿ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ತವರು ಜಿಲ್ಲೆಯಲ್ಲೇ ಈ ಗತಿಯಾದರೆ, ಇನ್ನು ಬೇರೆ ಜಿಲ್ಲೆಗಳ ಗತಿ ಏನಾಗಿರಬಹುದು ಎನ್ನುವುದನ್ನು ಹೇಳಬೇಕಿಲ್ಲ” ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾದ ತೊಗರಿ ಬೆಲೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದ್ದು, ಸರ್ಕಾರ ಯಾವಾಗ ತೊಗರಿ ಖರೀದಿ ಕೇಂದ್ರ ತೆರೆಯಲಿದೆ ಎಂದು ರೈತರು ಕಾತರದಿಂದ ಎದುರು ನೋಡುತ್ತಿದ್ದಾರೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಈ ಬಾರಿ ತೇವಾಂಶದ ಇಳಿಕೆಯಿಂದ 1.82 ಲಕ್ಷ ಹೆಕ್ಟೇರ್‌ ವ್ಯಾಪ್ತಿಯಲ್ಲಿ ತೊಗರಿ ಬೆಳೆಗೆ ಹಾನಿಯಾಗಿದೆ ಎಂದು ಸರಕಾರಿ ದಾಖಲೆಗಳೇ ಹೇಳುತ್ತವೆ. ಆದರೆ, ಇದುವರೆಗೂ ರಾಜ್ಯ ಸರ್ಕಾರ ಪರಿಹಾರದ ಮಾತೇ ಆಡಿಲ್ಲ. ಜಿಲ್ಲೆಯ ಉಸ್ತುವಾರಿ ಸಚಿವರು ಕೂಡ ಚಕಾರ ಎತ್ತುತ್ತಿಲ್ಲ. ಒಟ್ಟಿನಲ್ಲಿ ಈ ರೈತ ವಿರೋಧಿ ಸಿಎಂ ಸಿದ್ದರಾಮಯ್ಯನವರ ಸರ್ಕಾರ ತೊಲಗುವವರೆಗೂ ನಾಡಿನ ಅನ್ನದಾತರಿಗೆ ನೆಮ್ಮದಿಯಿಲ್ಲ” ಎಂದು ದೂರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುರುದ್ವಾರ ಆವರಣದಲ್ಲಿ ದೆಹಲಿ ಪೊಲೀಸರು ಶೂ ಧರಿಸಿದ ಆರೋಪ: ‘ತಾಲಿಬಾನ್ ಮಾದರಿಯ ವರ್ತನೆ’ ಎಂದ ಪಂಜಾಬ್ ಸಿಎಂ

ದೆಹಲಿಯ ಐತಿಹಾಸಿಕ ಗುರುದ್ವಾರ ಶ್ರೀ ಬಾಂಗ್ಲಾ ಸಾಹಿಬ್‌ಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ...

ಮಣಿಪುರ ಹಿಂಸಾಚಾರ | 12 ಗಂಟೆಗಳಲ್ಲಿ 9 ಸಾವು; ಶಾಂತಿ ಕಾಪಾಡಲು ಸಿಎಂ ಮನವಿ

ಈಶಾನ್ಯ ರಾಜ್ಯ ಮಣಿಪುರದ ಮಲೆನಾಡು ಭಾಗಗಳಲ್ಲಿ ಕಳೆದ ಕೆಲ ಗಂಟೆಗಳಲ್ಲಿ ಮರುಕಳಿಸಿದ...

SIR | ಬೀದರ್‌ ಜಿಲ್ಲಾದ್ಯಂತ ಮತದಾರರ ಹೆಸರು ತೆಗೆಸಲು 6,101 ಫಾರಂ-7 ಅರ್ಜಿ ಸಲ್ಲಿಕೆ!

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು,...

ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಹಿಂಗಾರು ಮಳೆಯೂ ಆರಂಭವಾಗುತ್ತಿದೆ. ಪರಿಣಾಮ, ಮುಂದಿನ 4...