ಸರ್ಕಾರದ ರಾಜಕೀಯ ಹಸ್ತಕ್ಷೇಪದಿಂದ ಕೆಎಎಸ್‌ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಆರ್‌ ಅಶೋಕ್ ಆರೋಪ

Date:

Advertisements

ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಕೆಪಿಎಸ್‌ಸಿ ಮತ್ತೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ. ಸಿಎಂ ಸಿದ್ದರಾಮಯ್ಯನವರ ರಾಜಕೀಯ ಹಸ್ತಕ್ಷೇಪವೇ ಇದಕ್ಕೆ ಕಾರಣ ಎಂದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

“ಕಾಂಗ್ರೆಸ್‌ ಸರ್ಕಾರ ಮರುಪರೀಕ್ಷೆಯಲ್ಲೂ ಮುಗ್ಗರಿಸಿದೆ. ಆಗಸ್ಟ್‌ನಲ್ಲಿ ನಡೆದ 2023-24ನೇ ಸಾಲಿನ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್‌ ಪೂರ್ವಭಾವಿ ಪರೀಕ್ಷೆಯಲ್ಲಿ ಭಾರಿ ಎಡವಟ್ಟುಗಳು ಕಂಡುಬಂದಿತ್ತು. ಅಭ್ಯರ್ಥಿಗಳ ಆಕ್ರೋಶಕ್ಕೆ ಮಣಿದ ಸರ್ಕಾರ ಮರು ಪರೀಕ್ಷೆ ನಡೆಸಿತ್ತು. ಆದರೆ ಅದರಲ್ಲೂ ಎಡವಟ್ಟುಗಳ ಮೇಲೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ” ಎಂದು ದೂರಿದರು.

ಇದನ್ನು ಓದಿದ್ದೀರಾ? ಸ್ವಾಮೀಜಿಯನ್ನು ಮುಟ್ಟಲು ಬಂದರೆ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ: ಆರ್ ಅಶೋಕ್‌

Advertisements

“ಭಾಷಾಂತರದಲ್ಲಿ ಲೋಪ, ಒಎಂಆರ್‌ ಶೀಟ್ ಮತ್ತು ನೋಂದಣಿ ಸಂಖ್ಯೆ ಅದಲು ಬದಲು, ಕೆಲವೆಡೆ 45 ನಿಮಿಷ ತಡವಾಗಿ ಪರೀಕ್ಷೆ ಆರಂಭ, ಹೀಗೆ ಸಾಲು ಸಾಲು ಎಡವಟ್ಟುಗಳಿಂದ ಕೂಡಿದ್ದ ಭಾನುವಾರದ ಮರು ಪರೀಕ್ಷೆ ಮತ್ತೊಮ್ಮೆ ಅಭ್ಯರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ” ಎಂದು ಆರೋಪಿಸಿದರು.

“ಮರುಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 2.10 ಲಕ್ಷ ಅಭ್ಯರ್ಥಿಗಳ ಪೈಕಿ ಕೇವಲ 1 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಆಗಸ್ಟ್‌ನಲ್ಲಿ ನಡೆದ ಪರೀಕ್ಷೆಯಲ್ಲಿ ಶೇ.62.52 ರಷ್ಟಿದ್ದ ಹಾಜರಾತಿ, ಮರುಪರೀಕ್ಷೆಯಲ್ಲಿ ಶೇ.47.7 ಕ್ಕೆ ಕುಸಿದಿದೆ. ಅಂದರೆ ಅಭ್ಯರ್ಥಿಗಳು ಕಾಂಗ್ರೆಸ್‌ ಸರ್ಕಾರ ಹಾಗೂ ಕೆಪಿಎಸ್‌ಸಿ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ” ಎಂದು ಅಭಿಪ್ರಾಯಿಸಿದರು.

“ಸಿಎಂ ಸಿದ್ದರಾಮಯ್ಯನವರ ಸರ್ಕಾರದ ರಾಜಕೀಯ ಹಸ್ತಕ್ಷೇಪ, ಭ್ರಷ್ಟಾಚಾರ, ಸ್ವಜನಪಕ್ಷಪಾತವೇ ಕೆಪಿಎಸ್‌ಸಿ ಪರೀಕ್ಷೆಗಳಲ್ಲಿನ ಎಡವಟ್ಟಿಗೆ ಕಾರಣ. ಆಗಸ್ಟ್‌ನಲ್ಲಿ ನಡೆದ ಪೂರ್ವಭಾವಿ ಪರೀಕ್ಷೆಗೆ 13.40 ಕೋಟಿ ರೂ. ವೆಚ್ಚವಾಗಿತ್ತು. ಮರುಪರೀಕ್ಷೆಗೂ ಅಷ್ಟೇ ಮೊತ್ತ ಅಥವಾ ಅದಕ್ಕಿಂತ ಹೆಚ್ಚು ಖರ್ಚಾಗಿರುತ್ತದೆ. ಅದರಲ್ಲಿ ಸುಮಾರು 5.3 ಕೋಟಿ ರೂ. ಪರೀಕ್ಷಾ ಗೋಪ್ಯತೆ ಕಾಪಾಡುವುದಕ್ಕೆ ವೆಚ್ಚ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ. ಇಷ್ಟಾದರೂ ಈ ಪರಿ ಎಡವಟ್ಟುಗಳು ಮರುಕಳಿಸಿದೆ ಎಂದರೆ ಇದಕ್ಕೆ ಯಾರು ಹೊಣೆ? ಸಾರ್ವಜನಿಕರ ತೆರಿಗೆ ಹಣವನ್ನ ಹೀಗೆ ಪೋಲು ಮಾಡುವುದು ಯಾವ ನ್ಯಾಯ” ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ನಮ್ಮ ಅವಧಿಯಲ್ಲಿ ವಕ್ಫ್ ನೋಟಿಸ್ ಕೊಟ್ಟವರ ವಿರುದ್ಧವೂ ಕ್ರಮವಾಗಲಿ: ಆರ್ ಅಶೋಕ್

“ಒಂದಲ್ಲ, ಹತ್ತು ಬಾರಿ ಮರುಪರೀಕ್ಷೆ ನಡೆಸಿದರೂ ಈ ಎಡವಟ್ಟು ಕಾಂಗ್ರೆಸ್ ಸರ್ಕಾರಕ್ಕೆ ಸರಿಯಾಗಿ ಪರೀಕ್ಷೆ ನಡೆಸಲು ಯೋಗ್ಯತೆ ಇಲ್ಲ ಎನ್ನುವ ಅಭಿಪ್ರಾಯ ಅಭ್ಯರ್ಥಿಗಳಲ್ಲಿ ಈಗಾಗಲೇ ಮೂಡಿದೆ. ಆದ್ದರಿಂದಲೇ ಹಾಜರಾತಿ ಗಣನೀಯವಾಗಿ ಕುಸಿದಿದೆ” ಎಂದು ದೂರಿದ್ದಾರೆ.

“ಆಗಸ್ಟ್‌ನಲ್ಲಿ ನಡೆದ ಪೂರ್ವಭಾವಿ ಪರೀಕ್ಷೆಯ ಎಡವಟ್ಟುಗಳಿಗೆ, ಲೋಪ ದೋಷಗಳಿಗೆ ಕಾರಣರಾದ ಪರೀಕ್ಷಾ ನಿಯಂತ್ರಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದೆ. ಕಾರ್ಯದರ್ಶಿಗಳನ್ನು ಮಾತ್ರ ಎತ್ತಂಗಡಿ ಮಾಡಲಾಗಿದೆ. ಕೆಪಿಎಸ್‌ಸಿ ಈ ರೀತಿ ನಂಬಿಕೆ ಕಳೆದುಕೊಂಡು, ಹೆಸರು ಕೆಡಿಸಿಕೊಂಡರೆ ಉತ್ತಮ ಅಭ್ಯರ್ಥಿಗಳನ್ನು, ಪ್ರತಿಭಾವಂತ ಯುವಜನರನ್ನು ಸರ್ಕಾರಿ ಸೇವೆಯತ್ತ ಆಕರ್ಷಿಸುವುದು ಹೇಗೆ ಸಾಧ್ಯ? ಆಡಳಿತಕ್ಕೆ ಹೊಸ ರಕ್ತ ಬರದಿದ್ದರೆ ಆಡಳಿತವನ್ನು ಚುರುಕುಗೊಳಿಸುವುದು ಹೇಗೆ? ಯುವ ಜನಾಂಗ ಸಾರ್ವಜನಿಕ ಸೇವೆಗೆ ಬರದಿದ್ದರೆ ಆಡಳಿತಕ್ಕೆ ಹೊಸ ಚೈತನ್ಯ ತುಂಬಲು ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

“16 ಸದಸ್ಯರಿರುವ ಕೆಪಿಎಸ್‌ಸಿ ದೇಶದಲ್ಲೇ ದೊಡ್ಡ ಆಯೋಗವಾಗಿದೆ. ಅವರ ಸಂಬಳ, ಸಾರಿಗೆಗೆಂದು ಸರ್ಕಾರ ಕೋಟ್ಯಂತರ ರೂಪಾಯಿ ತೆರಿಗೆ ಹಣ ವ್ಯಯ ಮಾಡುತ್ತದೆ. ಇಷ್ಟಾದರೂ ಒಂದು ಗೊಂದಲಮುಕ್ತ ಪೂರ್ವಭಾವಿ ಪರೀಕ್ಷೆ ನಡೆಸಲು ವಿಫವಾಗುತ್ತದೆ ಎಂದರೆ ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಲೇಬೇಕು. ಲಕ್ಷಾಂತರ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಾಕಷ್ಟು ಹಣ, ಸಮಯ ಸಮರ್ಪಿಸುತ್ತಾರೆ. ಅನೇಕರು ತಮ್ಮ ಭವಿಷ್ಯವನ್ನೇ ಪಣಕ್ಕಿಟ್ಟು ತಯಾರಿ ನಡೆಸುತ್ತಾರೆ. ಅನೇಕ ಬಡ ಅಭ್ಯರ್ಥಿಗಳು ಸಾಲ ಮಾಡಿ ಕೋಚಿಂಗ್ ಪಡೆಯುತ್ತಾರೆ. ಇಷ್ಟೆಲ್ಲಾ ತನು-ಮನ-ಧನ ಧಾರೆ ಎರೆದು ಪರೀಕ್ಷೆಗೆ ಕುಳಿತುಕೊಳ್ಳುವ ಅಭ್ಯರ್ಥಿಗಳಿಗೆ ಈ ರೀತಿ ಗೊಂದಲವಾಗುತ್ತಿದ್ದರೆ ಸರ್ಕಾರ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಿದಂತಾಗಿತ್ತದೆ. ಅಭ್ಯರ್ಥಿಗಳ ಹಿತದೃಷ್ಟಿಯಿಂದ, ಆಡಳಿತದ ಹಿತದೃಷ್ಟಿಯಿಂದ ಇನ್ನಾದರೂ ಸರ್ಕಾರ ಎಚ್ಚೆತ್ತುಕೊಳ್ಳಲಿ. ಕೆಪಿಎಸ್ಸಿಯಲ್ಲಿ ಆಮೂಲಾಗ್ರ ಸುಧಾರಣೆ ತರುವ ಮೂಲಕ ಇಡೀ ನೇಮಕಾತಿ ವ್ಯವಸ್ಥೆಗೆ ಹೊಸ ಕಾಯಕಲ್ಪ ನೀಡಲಿ” ಎಂದು ಆಗ್ರಹಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X