ಚುನಾವಣೆ 2023 | ಪದ್ಮನಾಭನಗರದಲ್ಲಿ ಆರ್ ಅಶೋಕ್‌ ವಿರುದ್ಧ ಡಿಕೆ ಸುರೇಶ್‌ ಕಣಕ್ಕೆ?

Date:

Advertisements
  • ಹೈಕಮಾಂಡ್‌ ಅಂಗಳಕ್ಕೆ ತಲುಪಿದ ಪದ್ಮನಾಭನಗರ ಕ್ಷೇತ್ರದ ಟಿಕೆಟ್
  • ಡಿ.ಕೆ ಸುರೇಶ್‌ಗಾಗಿ ಕ್ಷೇತ್ರ ಬಿಟ್ಟುಕೊಡಲು ಸಿದ್ದ ಎಂದ ‘ಕೈ’ ಅಭ್ಯರ್ಥಿ

ರಾಜ್ಯದಲ್ಲಿ ಚುನಾವಣಾ ರಣಕಣ ರಂಗೇರುತ್ತಿರುವ ಬೆನ್ನಲ್ಲೇ, ಹೈವೋಲ್ಟೇಜ್‌ ಕ್ಷೇತ್ರಗಳು ಹೆಚ್ಚು ಸದ್ದು ಮಾಡುತ್ತಿವೆ. ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ವಿರುದ್ಧ ಸ್ಪರ್ಧಿಸಿರುವ ಆರ್‌ ಅಶೋಕ್‌ಗೆ ಆರಂಭದಲ್ಲೇ ‘ಬಿಗ್‌ ಶಾಕ್‌’ ಎದುರಾಗಿದೆ. ಅಶೋಕ್‌ ವಿರುದ್ಧ ಪದ್ಮನಾಭನಗರದಲ್ಲಿ ಡಿ.ಕೆ ಶಿವಕುಮಾರ್‌ ಸಹೋದರ ಡಿ.ಕೆ ಸುರೇಶ್ ಸ್ಪರ್ಧಿಸಲಿದ್ದು, ಅಶೋಕ್‌ ಅವರನ್ನು ಕಟ್ಟಿಹಾಕಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೂ ನಾಮಪತ್ರ ಸಲ್ಲಿಕೆಗೆ ಕೇವಲ 2 ದಿನ ಬಾಕಿ ಉಳಿದಿದೆ. ಈ ಹಿಂದೆ, ಪದ್ಮನಾಭನಗರ ಕ್ಷೇತ್ರದಲ್ಲಿ ರಘುನಾಥ್ ನಾಯ್ಡು ಅವರಿಗೆ ಕಾಂಗ್ರೆಸ್‌ ಟಿಕೆಟ್ ನೀಡಿತ್ತು. ಆದರೆ, ಇದೀಗ, ಅವರಿಗೆ ನೀಡಲಾಗಿದ್ದ ಬಿ ಫಾರಂಅನ್ನು ವಾಪಸ್‌ ಪಡೆಯಲಾಗಿದೆ. ಹೀಗಾಗಿ, ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯಾರಾಗುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

ಈ ಸುದ್ದಿ ಓದಿದ್ದೀರಾ? : ಆಯನೂರು ಮಂಜುನಾಥ್‌ ರಾಜೀನಾಮೆ ಘೋಷಣೆ; ಜೆಡಿಎಸ್‌ನಿಂದ ಸ್ಪರ್ಧೆ ಸಾಧ್ಯತೆ

Advertisements

ಪದ್ಮನಾಭನಗರದ ಹಾಲಿ ಶಾಸಕರಾಗಿರುವ ಆರ್ ಅಶೋಕ್‌ ಅವರನ್ನು ಕ್ಷೇತ್ರದಲ್ಲಿಯೇ ಕಟ್ಟಿ ಹಾಕಲು ಕಾಂಗ್ರೆಸ್‌ ಚಿಂತನೆ ನಡೆಸುತ್ತಿದ್ದು, ಈ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಹಾಲಿ ಸಂಸದ ಡಿಕೆ ಸುರೇಶ್‌ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ.

ಪದ್ಮನಾಭನಗರ ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿರುವ ಕ್ಷೇತ್ರದ ಕಾಂಗ್ರೆಸ್ ಘೋಷಿತ ಅಭ್ಯರ್ಥಿ ರಘುನಾಥ್ ನಾಯ್ಡು, “ಡಿ.ಕೆ ಸುರೇಶ್ ಪದ್ಮನಾಭನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ, ಅವರಿಗೆ ಕ್ಷೇತ್ರ ಬಿಟ್ಟುಕೊಡಲು ಸಿದ್ಧನಿದ್ದೇನೆ. ಪಕ್ಷ ಏನು ಹೇಳುತ್ತದೆಯೋ ಅದಕ್ಕೆ ನಾನು ಮನ್ನಣೆ ನೀಡುತ್ತೇನೆ” ಎಂದಿದ್ದಾರೆ.

ತೀವ್ರ ಕುತೂಹಲ ಕೆರಳಿಸಿರುವ ಈ ಕ್ಷೇತ್ರದ ಎಲ್ಲ ಅಂತೆ-ಕಂತೆಗಳಿಗೂ ಇಂದು ಅಥವಾ ನಾಳೆ ತೆರೆ ಬೀಳಲಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುವುದನ್ನು ಕಾದು ನೋಡಬೇಕಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

Download Eedina App Android / iOS

X