ಜನಪರ ರಾಜಕಾರಣಕ್ಕೆ ಆರ್. ಧ್ರುವನಾರಾಯಣ್ ಮಾದರಿ ವ್ಯಕ್ತಿತ್ವ: ಸಿಎಂ ಸಿದ್ದರಾಮಯ್ಯ

Date:

ಆರ್. ಧ್ರುವನಾರಾಯಣ್ ಅವರು ಮಾದರಿ ಜನನಾಯಕರಾಗಿದ್ದರು. ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.

- Advertisement -

ದಿವಂಗತ ಧ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು, ಹೆಗ್ಗವಾಡಿಗೆ ತೆರಳಿ ಆರ್. ಧ್ರುವನಾರಾಯಣ್ ಅವರ ಸಮಾಧಿಗೆ ನಮನ ಸಲ್ಲಿಸಿದರು. ಬಳಿಕ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕ್ಷೇತ್ರದ ಅಭಿವೃದ್ಧಿ ಮತ್ತು ಚಾಮರಾಜನಗರ ಜಿಲ್ಲೆಯ ಪ್ರಗತಿ ನಿರಂತರ ಪ್ರಯತ್ನ ಮಾಡಿದ್ದ ಆರ್. ಧ್ರುವನಾರಾಯಣ್ ಅವರು ಜನರ ಮಧ್ಯ ಓಡಾಡದ ದಿನವೇ ಇಲ್ಲ. ಇವರದ್ದು ಜನಪರ ರಾಜಕಾರಣಕ್ಕೆ ಮಾದರಿ ವ್ಯಕ್ತಿತ್ವ” ಎಂದರು.

“ಕಾಂಗ್ರೆಸ್ ಸಿದ್ಧಾಂತ ಮತ್ತು ಕಾಂಗ್ರೆಸ್ ಪಕ್ಷದ ಆಸ್ತಿಯಾಗಿದ್ದ ಧ್ರುವನಾರಾಯಣ್ ಅವರು ವಿದ್ಯಾರ್ಥಿ ಕಾಂಗ್ರೆಸ್ ಅವಧಿಯಿಂದ ಪಕ್ಷದ ಕಾರ್ಯಾಧ್ಯಕ್ಷರಾಗುವವರೆಗೂ ಬೆಳೆದರು. ಶಾಸಕರಾಗಿ, ಸಂಸದರಾಗಿ ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಶ್ರಮಿಸಿದವರು. ಹೀಗಾಗಿ ಇವರ ಅಗಲಿಕೆ ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ಕನ್ನಡ ನಾಡಿಗೆ ತುಂಬಲಾರದ ನಷ್ಟ ಆಗಿದೆ” ಎಂದು ಹೇಳಿದರು.

“ಅಜಾತಶತ್ರು ಆಗಿದ್ದ ಧ್ರುವನಾರಾಯಣ್ ಅವರ ವ್ಯಕ್ತಿತ್ವವನ್ನೇ ಅವರ ಪುತ್ರ ಶಾಸಕ ದರ್ಶನ್ ಆರ್. ಧ್ರುವನಾರಾಯಣ್ ಅವರೂ ಹೊಂದಿದ್ದು ಜನಪರತೆ ಬೆಳೆಸಿಕೊಂಡಿದ್ದಾರೆ. ಇವರಿಗೆ ನಾನು ಸಂಪೂರ್ಣ, ಸಹಕಾರ, ಬೆಂಬಲ ನೀಡುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರ ಗಮನ ಬೇರೆಡೆಗೆ ಸೆಳೆಯಲು ‘ಸಿಎಎ’ ಮುಂದೆ ಮಾಡಿದ ‘ಮೋಶಾ’

“”ರಾಜಕಾರಣಿಗೆ ಸೈದ್ಧಾಂತಿಕ ಸ್ಪಷ್ಟತೆ ಮತ್ತು ಬದ್ಧತೆ ಅತ್ಯಗತ್ಯ. ಆರ್. ಧ್ರುವನಾರಾಯಣ್ ಅವರಿಗೆ ಇವೆರಡೂ ಇತ್ತು. ಸಮಾಜದ ಅಸಮಾನತೆ ಅಳಿಸಲು, ದುರ್ಬಲರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸವನ್ನು ಅವರು ಮಾಡುತ್ತಿದ್ದರು. ಅಂಬೇಡ್ಕರ್ ಅವರ ಸಂವಿಧಾನದ ಬಗ್ಗೆ ಆರ್. ಧ್ರುವನಾರಾಯಣ್ ಅಪಾರವಾದ ನಂಬಿಕೆ, ಗೌರವ ಹೊಂದಿದ್ದರು. ಈಗ ಈ ಸಂವಿಧಾನವನ್ನು ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿವೆ. ಸಂವಿಧಾನ ಉಳಿದರೆ ಮಾತ್ರ ನಾವೂ ನೀವೂ ಉಳಿಯುತ್ತೇವೆ” ಎಂದು ಎಚ್ಚರಿಸಿದರು.

ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕ ದರ್ಶನ್ ಆರ್. ಧ್ರುವನಾರಾಯಣ್, ಅನಿಲ್ ಚಿಕ್ಕ ಮಾದು, ರವಿಶಂಕರ್, ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ ಸೇರಿ ಮೈಸೂರು, ಚಾಮರಾಜನಗರ ಜಿಲ್ಲೆಯ ಶಾಸಕರುಗಳು, ಮುಖಂಡರು ಮತ್ತು ಜಿಲ್ಲಾ ಮುಖಂಡರುಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...