ಬ್ಯಾಂಕ್‌ ಹಣ ಕಳಕೊಂಡಿದ್ದವರ ಪ್ರಶ್ನೆಗೆ ಉತ್ತರಿಸಲಾಗದೆ ಓಡಿ ಹೋದ ತೇಜಸ್ವಿ ಸೂರ್ಯ: ವಿಡಿಯೋ ವೈರಲ್

Date:

ಸದಾ ವಿವಾದಾತ್ಮಕ ಹೇಳಿಕೆ ಹಾಗೂ ಕೋಮುದ್ವೇಷ ಹರಡುವುದರಲ್ಲೇ ಕುಖ್ಯಾತಿ ಗಳಿಸಿಕೊಂಡಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಚುನಾವಣಾ ಪ್ರಚಾರಕ್ಕೆ ಹೋದಲ್ಲೆಲ್ಲ ಜನರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ತಬ್ಬಿಬ್ಬಾಗುತ್ತಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಏಪ್ರಿಲ್‌ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ ಹಗರಣದಿಂದಾಗಿ ಠೇವಣಿ ಕಳೆದುಕೊಂಡಿದ್ದ ಸಂತ್ರಸ್ತರ ಸಭೆಯನ್ನು ಕರೆಯಲಾಗಿತ್ತು. ಈ ವೇಳೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭಾಗವಹಿಸಿದ್ದರು. ಈ ಸಭೆಯಲ್ಲಿ ಠೇವಣಿದಾರರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ತೇಜಸ್ವಿ ಸೂರ್ಯ ಪರಾರಿಯಾದ ಘಟನೆ ನಡೆದಿದೆ. ಏಪ್ರಿಲ್ 13ರ ಘಟನೆಯ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಗುರುರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ ಠೇವಣಿದಾರರ ಸಭೆಯನ್ನು ಕರೆದಿದ್ದು, ಈ ವೇಳೆ ಸಂಸದ ತೇಜಸ್ವಿ ಸೂರ್ಯ, ಶಾಸಕ ರವಿ ಸುಬ್ರಮಣ್ಯ ಹಾಗೂ ಠೇವಣಿದಾರರ ನಡುವೆ ಗದ್ದಲವುಂಟಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಂಸದ ತೆಜಸ್ವಿ ಸೂರ್ಯ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾರೆಡ್ಡಿ ವಿರುದ್ಧ ಮತ್ತೆ ಕಣಕ್ಕಿಳಿದಿದ್ದಾರೆ. 2019ರಲ್ಲೂ ತೇಜಸ್ವಿ ಸೂರ್ಯ ಲೋಕಸಭೆಗೆ ಸ್ಪರ್ಧಿಸಿ ಜಯ ಗಳಿಸಿದ್ದರು. ಇದೀಗ ಮತ್ತೆ 2024ರಲ್ಲೂ ಗೆಲುವು ಸಾಧಿಸಲು ಹೊರಟಿದ್ದಾರೆ.

ತೇಜಸ್ವಿ ಸೂರ್ಯ ಕರೆದ ಸಭೆಯಲ್ಲೇ ಅವರ ವಿರುದ್ಧವೇ ಬ್ಯಾಂಕ್‌ ಡೆಪಾಸಿಟರ್‌ಗಳು ಆಕ್ರೋಶ ಹೊರಹಾಕಿದ್ದಾರೆ. ಗದ್ದಲ ಹೆಚ್ಚಾಗುತ್ತಿದ್ದಂತೆ ತೇಜಸ್ವಿ ಸೂರ್ಯ ಕೋಪಗೊಂಡು, ಸಭೆಯಿಂದ ಎದ್ದು ಹೊರ ನಡೆಯಲು ಮುಂದಾಗಿದ್ದರು. ಈ ವೇಳೆ ಅವರನ್ನು ತಡೆದವರನ್ನು ತಳ್ಳಿ ದರ್ಪ ಮೆರೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಥಳದಲ್ಲಿದ್ದ ಚುನಾವಣಾ ಅಧಿಕಾರಿಗಳ ಮೇಲೆಯೂ ಹಲ್ಲೆ ಮಾಡಿದ್ದಾರೆ. ವಾಗ್ವಾದದ ವೇಳೆ ಶಾಸಕ ರವಿ ಸುಬ್ರಮಣ್ಯಂ ಗ್ರಾಹಕರೊಬ್ಬರನ್ನು ಕೈ ಹಿಡಿದು ಎಳೆದಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನು ನಮ್ಮ ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದು ತೇಜಸ್ವಿ ಸೂರ್ಯ ವಿರುದ್ಧ ಠೇವಣಿದಾರರು ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ತೇಜಸ್ವಿ ಸೂರ್ಯನ ವಿರುದ್ಧ ಕೆಲವು ಘೋಷಣೆಗಳೂ ಕೂಡ ಕೇಳಿಬಂದವು. ಘಟನೆಯ ವೇಳೆ ಸ್ಥಳದಲ್ಲಿದ್ದ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸಪಟ್ಟರು.

“ಎಮರ್ಜೆನ್ಸಿ ಎಕ್ಸಿಟ್ ಡೋರ್” ಮೂಲಕ ಮತ್ತೊಮ್ಮೆ ಎಸ್ಕೇಪ್: ಕಾಂಗ್ರೆಸ್ ವ್ಯಂಗ್ಯ

ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ “ಎಮರ್ಜೆನ್ಸಿ ಎಕ್ಸಿಟ್ ಡೋರ್” ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆಂದು ವ್ಯಂಗ್ಯವಾಡಿದೆ.

ಬೆಂಗಳೂರು ದಕ್ಷಿಣದ ಸಂಸದ 5 ವರ್ಷದುದ್ದಕ್ಕೂ ದೋಸೆ ತಿಂದುಕೊಂಡು, ಫುಟ್ ಬಾಲ್ ಆಡಿಕೊಂಡು, ಮೋಜು ಮಾಡಿಕೊಂಡು ಕಾಲ ಕಳೆದಿದ್ದರು, ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಹಣ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಯನ್ನು ಒಂದು ದಿನವೂ ಆಲಿಸದ ತೇಜಸ್ವಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆಯ ಸಮಯದಲ್ಲಿ ಮತದಾರರ ಮೇಲೆಯೇ ಹಲ್ಲೆ, ನಿಂದನೆ ಮಾಡಲು ಮುಂದಾಗುವ ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ. ಮತದಾರರು ಈ ಅಹಂಗೆ ಪಾಠ ಕಲಿಸುವ ಸಮಯ ಬಂದಿದೆ. ಎಲ್ಲಾ ಕಡೆಯೂ ಮತದಾರರಿಂದ ಬಿಜೆಪಿ ಅಭ್ಯರ್ಥಿಗಳು ಗೋಬ್ಯಾಕ್ ಎದುರಿಸುತ್ತಿದ್ದಾರೆ. ಈ ಜನಾಕ್ರೋಶಕ್ಕೆ ಬಿಜೆಪಿ ದೂಳಿಪಟ ಆಗುವುದು ನಿಶ್ಚಿತ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಶಕ್ತಿ’ ಯೋಜನೆಯಿಂದ ಧರ್ಮಸ್ಥಳಕ್ಕೆ ಭಕ್ತರ ಸಂಖ್ಯೆ ಹೆಚ್ಚಳ; ಸಿಎಂ, ಡಿಸಿಎಂ ಸಂತಸ

ಸರ್ಕಾರದ 'ಶಕ್ತಿ' ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ...

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ, ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಸಚಿವ ಕೆ ಎನ್ ರಾಜಣ್ಣ

"ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ, ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ...

‘ಈ ದಿನʼ ಗ್ರೌಂಡ್‌ ರಿಪೋರ್ಟ್‌ 3 | ವಿಡಿಯೊ ಪ್ರಕರಣ; ಹಲವು ಮಹಿಳೆಯರ ರಾಜಕೀಯ ಮಹತ್ವಾಕಾಂಕ್ಷೆ ಮಣ್ಣುಪಾಲು

ಹಾಸನದ ಸಂಸದನ ಕಾಮಕಾಂಡ ಬಯಲಾಗುತ್ತಿದ್ದಂತೆ ಆ ಪಕ್ಷದ ಹಲವು ನಾಯಕಿಯರ ರಾಜಕೀಯ...

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...