ರಾಗಿಗುಡ್ಡ ಗಲಾಟೆ | ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

Date:

Advertisements
  • ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸ್ಥಳಕ್ಕೆ ಬಿಜೆಪಿ ನಿಯೋಗ ಭೇಟಿ
  • ಯೋಜನೆ ಹಾಕಿಕೊಂಡು ಹಿಂದೂಗಳ ಮನೆಗೆ ಕಲ್ಲು ಹೊಡೆಯಲಾಗಿದೆ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದ ನಂತರ ಹಿಂದು ಮುಸ್ಲಿಂ ಗಲಾಟೆಗಳು ಹೆಚ್ಚುತ್ತಿವೆ. ರಾಗಿಗುಡ್ಡ ಪ್ರಕರಣ ಇದರ ಮುಂದುವರಿಕೆ ಅಷ್ಟೇ. ರಾಗಿಗುಡ್ಡದಲ್ಲಿ ಹಿಂದೂ ಕಾರ್ಯಕರ್ತರ ಮನೆಗಳನ್ನು ಗುರಿಯಾಗಿಸಿಕೊಂಡು ಕಲ್ಲು ಎಸೆಯಲಾಗಿದೆ. ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದರು.

ಗುರುವಾರ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಸತ್ಯ ಶೋಧನಾ ತಂಡ ಶಿವಮೊಗ್ಗಕ್ಕೆ ಆಗಮಿಸಿ, ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿತು. ನಂತರ ರಾಗಿಗುಡ್ಡಕ್ಕೆ ಭೇಟಿ ನೀಡಿ ಹಾನಿಗೊಳಗಾದ ಮನೆಗಳ ಪರಿಶೀಲನೆ ನಡೆಸಿ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

“ಈದ್‌ ಮಿಲಾದ್‌ ಹಬ್ಬದ ಸಂದರ್ಭದಲ್ಲಿ ಕೆಲವು ಕಟೌಟ್‌ಗಳನ್ನು ಹಾಕಲಾಗಿದೆ. ಅಲ್ಲಿ ಕತ್ತಿ, ಟಿಪ್ಪು ಹಾಗೂ ಔರಂಗಜೇಬ್‌ ಕಟೌಟ್‌ಗಳು ಹಾಕಿರುವ ಉದ್ದೇಶ ನೋಡಿದರೆ ಹಿಂದೂಗಳ ಭಾವನೆ ಕೆರಳಿಸಲು ಹಾಕಿದ್ದಾರೆ ಎಂಬುದು ಸ್ಪಷ್ಟ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಇರಲಿಲ್ಲವೇ? ಇಂತಹ ಘಟನೆ ನಡೆಯಲು ಪೊಲೀಸರ ವೈಫಲ್ಯವೇ ಕಾರಣ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದಲ್ಲಿ ಸ್ವತಂತ್ರ ಮಾಧ್ಯಮದ ಪಾಲಿಗೆ ಇದು ಅತ್ಯಂತ ಕರಾಳ ಕಾಲ

“ಮುಸ್ಲಿಮರು ಇಷ್ಟು ಧೈರ್ಯವಾಗಿ ಹಿಂದೂ ಕಾರ್ಯಕರ್ತರ ಮನೆಗಳಿಗೆ ಕಲ್ಲು ಎಸೆಯುತ್ತಾರೆ ಎಂದರೆ ಅದಕ್ಕೆ ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕು ಕಾರಣ. ಮೊದಲೇ ಯೋಜನೆ ಹಾಕಿಕೊಂಡು ಕಲ್ಲು ಹೊಡೆಯಲಾಗಿದೆ. ಮಹಿಳೆಯರ ರಕ್ಷಣೆಗೆ ಬಂದ ಹಿಂದೂ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಅಷ್ಟೇ ಅಲ್ಲ ಅವರ ಮೇಲೆ ಎಫ್‌ಐಆರ್‌ ಹಾಕಲಾಗಿದೆ” ಎಂದರು.

“ಇಡೀ ಪ್ರದೇಶ ನೋಡಿದಾಗ ಮುಸ್ಲಿಂ ಮಹಿಳೆಯರು ಕೂಡ ಆ ಗಲಭೆಯದಲ್ಲಿ ಭಾಗಿಯಾಗಿದ್ದಾರೆ. ಮುಸ್ಲಿಂ ಮನೆಗಳ ಮೇಲೆ ಕಲ್ಲು ತೂರಾಟ ಎಲ್ಲೂ ನಡೆದಿಲ್ಲ. ಮೊದಲೇ ಮನೆಗಳನ್ನು ಗುರಿ ಮಾಡಿ ಕಲ್ಲು ಹೊಡೆಯಲಾಗಿದೆ. ಐದು ಹಿಂದೂ ಯುವಕರು ಆಸ್ಪತ್ರೆಯಲ್ಲಿ ಇದ್ದಾರೆ. ಅವರಿಗೆ ಗಂಭೀರ ಗಾಯಗಳಾಗಿವೆ” ಎಂದು ಹೇಳಿದರು.

“ಜಿಲ್ಲಾ ಉಸ್ತುವಾರಿ ಸಚಿವರು ಆದೇಶ ಮಾಡಿದ ಮೇಲೆ ಹಿಂದೂ ಯುವಕರನ್ನು ಬಂಧಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಇವತ್ತು ಉಗ್ರವಾದಿಗಳ, ಆತಂಕವಾದಿಗಳ ಪರವಾಗಿದೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ಇಡೀ ಘಟನೆ ನೋಡಿದಾಗ ನನಗೆ ಅನ್ನಿಸುವುದು, ಇಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪಾಕಿಸ್ತಾನಕ್ಕೆ ಜಿಂದಾಬಾದ್‌ ಹೇಳಿ ಸಂಭ್ರಮ ಆಚರಿಸಲಾಯಿತು. ಈ ಬಗ್ಗೆ ಯಾವುದೇ ಕ್ರಮ ಇಲ್ಲ. ಇದನ್ನೆಲ್ಲ ನೋಡಿದರೆ ಕಾಂಗ್ರೆಸ್‌ ಇವರಿಗೆಲ್ಲ ಸಪೋರ್ಟ್‌ ಮಾಡುತ್ತಿದೆ” ಎಂದು ಅವರು ಆರೋಪಿಸಿದರು.

ನಿಯೋಗದಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವರಾದ ಅಶ್ವತ್ಥನಾರಾಯಣ್, ರವಿಕುಮಾರ್, ಕೆ ಎಸ್ ಈಶ್ವರಪ್ಪ, ಸಂಸದ ರಾಘವೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X