ಲೋಕಸಭಾ ಚುನಾವಣೆ | ಪೆರಿಯಾರ್-ಸಾಮಾಜಿಕ ನ್ಯಾಯ ಮತ್ತು ಆರ್‌ಎಸ್‌ಎಸ್-ಮೋದಿ ನಡುವಿನ ಯುದ್ಧ: ರಾಹುಲ್ ಗಾಂಧಿ

Date:

ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಪೆರಿಯಾರ್, ಸಾಮಾಜಿಕ ನ್ಯಾಯ ಸಿದ್ಧಾಂತ ಮತ್ತು ಆರ್‌ಎಸ್‌ಎಸ್‌, ಮೋದಿ ನಡುವಿನ ಯುದ್ಧ ನಡೆಯುತ್ತಿದೆ ಎಂದು ರಾಹುಲ್‌ ಗಾಂಧಿ ಪ್ರತಿಪಾದಿಸಿದ್ದಾರೆ.

- Advertisement -

ತಮಿಳುನಾಡಿನ ತುರುನಲ್ವೆಯಲ್ಲಿ ಚುನಾವಣಾ ರ್‍ಯಾಲಿ ಉದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ವಿರುದ್ಧ ಕುಟುವಾಗಿ ವಾಗ್ದಾಳಿ ನಡೆಸಿದರು. “ತಮಿಳು ಭಾಷೆಯ ಮೇಲಿನ ದಾಳಿಯು ತಮಿಳು ಜನರ ಮೇಲಿನ ದಾಳಿಯಾಗಿದೆ” ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಇಂದು ಭಾರತದಲ್ಲಿ ಸೈದ್ಧಾಂತಿಕ ಕದನ ನಡೆಯುತ್ತಿದೆ. ಒಂದೆಡೆ ಪೆರಿಯಾರ್, ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆಯ ವಿಚಾರಗಳು, ಇನ್ನೊಂದೆಡೆ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ವಿಚಾರಗಳಿವೆ. ‘ಒಂದು ರಾಷ್ಟ್ರ, ಒಂದು ನಾಯಕ, ಒಂದು ಭಾಷೆ’ ಎಂದು ಮೋದಿ ಹೇಳುತ್ತಾರೆ. ತಮಿಳು ಭಾಷೆ ಯಾವುದೇ ಭಾರತೀಯ ಭಾಷೆಗಿಂತ ಕಡಿಮೆಯಿಲ್ಲ. ಈ ದೇಶದಲ್ಲಿ ಹಲವಾರು ವಿಭಿನ್ನ ಭಾಷೆಗಳು ಮತ್ತು ಸಂಸ್ಕೃತಿಗಳಿವೆ. ನಮಗೆ ಎಲ್ಲವೂ ಸಮಾನವಾಗಿದ್ದು, ಮುಖ್ಯವಾಗಿವೆ” ಎಂದು ರಾಹುಲ್‌ ಪ್ರತಿಪಾದಿಸಿದ್ದಾರೆ.

“ಕೇಂದ್ರೀಯ ಸಂಸ್ಥೆಗಳನ್ನು ರಾಜಕೀಯ ಅಸ್ತ್ರಗಳಾಗಿ ಮೋದಿ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಜಾರಿ ನಿರ್ದೇಶನಾಲಯ, ಸಿಬಿಐ, ಐಟಿ ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿದೆ. ಚುನಾವಣಾ ಆಯುಕ್ತರನ್ನು ಪ್ರಧಾನಿ ಆಯ್ಕೆ ಮಾಡುತ್ತಿದ್ದಾರೆ. ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಚುನಾವಣೆಗೆ ಎರಡು ತಿಂಗಳ ಮುಂಚೆ ಸ್ಥಗಿತಗೊಳಿಸಲಾಗಿದೆ. ಮುಖ್ಯಮಂತ್ರಿಗಳನ್ನು ಬಂಧಿಸಲಾಗಿದೆ, ವಿರೋಧ ಪಕ್ಷದ ನಾಯಕರಿಗೆ ಬೆದರಿಕೆ ಹಾಕಲಾಗುತ್ತಿದೆ’’ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. .

“ದೇಶದ 3-4 ಶ್ರೀಮಂತರು ಸರ್ಕಾರದಿಂದ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ, ಪ್ರವಾಹ ಪರಿಹಾರಕ್ಕಾಗಿ ಹಣವನ್ನು ಕೇಳಿದರೆ ಕೇಂದ್ರ ಸರ್ಕಾರ ನಿರಾಕರಿಸುತ್ತದೆ. ಪ್ರಧಾನಿ ಈ ದೇಶದ ಮೀನುಗಾರರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಅವರ ಬಗ್ಗೆ ಮೋದಿ ಯೋಚಿಸುವುದಿಲ್ಲ. ನಾವು ಮೀನುಗಾರರಿಗೆ ವಿಶೇಷ ಪ್ರಣಾಳಿಕೆ ರಚಿಸಿದ್ದೇವೆ. ಮೀನುಗಾರಿಕಾ ದೋಣಿಗಳಿಗೆ ಡೀಸೆಲ್‌ಗೆ ಸಬ್ಸಿಡಿ, ಮೀನುಗಾರಿಕಾ ದೋಣಿಗಳಿಗೆ ವಿಮೆ, ಕ್ರೆಡಿಟ್ ಕಾರ್ಡ್ ನೀಡುತ್ತೇವೆ. ಒಳನಾಡು ಮೀನುಗಾರಿಕೆ ಮತ್ತು ಜಲಚರಗಳನ್ನು ಕೃಷಿ ಎಂದು ಗುರುತಿಸಲು ಕಾಂಗ್ರೆಸ್‌ ಹೊರಟಿದೆ” ಎಂದು ವಿವರಿಸಿದ್ದಾರೆ.

“ಮೋದಿ ಸರ್ಕಾರವು ಸಂವಿಧಾನವನ್ನು ಬದಲಾಯಿಸಲು ಯೋಜಿಸುತ್ತಿದೆ. ಬಿಜೆಪಿ ಸಂಸದರು ತಾವು ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಬಹಿರಂಗವಾಗಿ ಹೇಳುತ್ತಾರೆ. ಪ್ರಪಂಚದ ಉಳಿದ ರಾಷ್ಟ್ರಗಳು ಭಾರತವನ್ನು ಪ್ರಜಾಪ್ರಭುತ್ವದ ದಾರಿದೀಪ ಎಂದು ಕರೆಯುತ್ತಿದ್ದವು; ಈಗ ಅವರೆಲ್ಲರೂ ಭಾರತದ ಪ್ರಜಾಪ್ರಭುತ್ವವು ಇನ್ನು ಮುಂದೆ ಪ್ರಜಾಪ್ರಭುತ್ವವಲ್ಲ ಎಂದು ಹೇಳುವ ಪರಿಸ್ಥಿತಿ ಎದುರಾಗಿದೆ” ಎಂದು ರಾಹುಲ್ ಹೇಳಿದ್ದಾರೆ.

ತಮಿಳುನಾಡು 39 ಲೋಕಸಭಾ ಸ್ಥಾನಗಳನ್ನು ಹೊಂದಿದ್ದು, ಏಪ್ರಿಲ್ 19ರಂದು ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಜೊತೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿದ್ದು, ತಮಿಳುನಾಡಿನ 9 ಸ್ಥಾನಗಳು ಹಾಗೂ ಪುದುಚೇರಿಯ ಏಕೈಕ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...