ಭಾರತ್ ಜೋಡೋ ನ್ಯಾಯ ಯಾತ್ರೆ | ರಾಹುಲ್ ಗಾಂಧಿ ದೇವಸ್ಥಾನ ಪ್ರವೇಶಿಸದಂತೆ ತಡೆದ ಅಸ್ಸಾಂ ಬಿಜೆಪಿ ಸರ್ಕಾರ

Date:

Advertisements

ಭಾರತ್ ಜೋಡೋ ನ್ಯಾಯ ಯಾತ್ರೆಯ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಮುಖ ದೇವಸ್ಥಾನದೊಳಗೆ ಪ್ರವೇಶಿಸದಂತೆ ಅಸ್ಸಾಂನ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರ ತಡೆದು ನಿಲ್ಲಿಸಿರುವುದಾಗಿ ವರದಿಯಾಗಿದೆ.

ಅಸ್ಸಾಂನ ಪೊಲೀಸರು ಭದ್ರತೆಯ ಕಾರಣಗಳನ್ನೊಡ್ಡಿ ತಡೆದಿರುವುದಾಗಿ ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸಹಿತ ಎಲ್ಲ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಧರಣಿ ನಡೆಸುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್‌ನ ಮುಖಂಡ ಕೆ ಸಿ ವೇಣುಗೋಪಾಲ್, ಇಂದು ನಮ್ಮ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಪೂರ್ವಾನುಮತಿ ಪಡೆದಿದ್ದರೂ ಕೂಡ ವಿದ್ವಾಂಸರಾದ ಶ್ರೀಮಂತ ಶಂಕರದೇವ ಅವರ ಜನ್ಮಸ್ಥಳವಾದ ನಾಗಾಂವ್‌ನಲ್ಲಿರುವ ಬಟಾದ್ರವ ಸತ್ರ ದೇವಸ್ಥಾನಕ್ಕೆ ಭೇಟಿ ನೀಡದಂತೆ ಅಸ್ಸಾಂನ ಅಧಿಕಾರಿಗಳು ತಡೆಯುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇದೊಂದು ಹೊಸತು. ದೇವಸ್ಥಾನಕ್ಕೆ ಯಾರು ಮತ್ತು ಯಾವ ಸಮಯದಲ್ಲಿ ಹೋಗಬೇಕು ಎಂಬುದನ್ನು ಬಿಜೆಪಿ ನಿರ್ಧರಿಸುತ್ತದೆ. ಈ ಸರ್ವಾಧಿಕಾರಿ ಆಡಳಿತ ತನ್ನ ದಿನಗಳು ಎಣಿಸಿವೆ ಎಂಬುದನ್ನು ಅರಿತುಕೊಳ್ಳಬೇಕು. ಇಂತಹ ನಿರಂಕುಶಾಧಿಕಾರಕ್ಕೆ ಭಾರತದ ಜನರು ಅವಕಾಶ ನೀಡುವುದಿಲ್ಲ. ಶ್ರೀಮಂತ ಶಂಕರದೇವ ಮುಂದೆ ನಮಸ್ಕರಿಸುವವರೆಗೆ ನಾವು ಇಲ್ಲಿಂದ ಕದಲುವುದಿಲ್ಲ” ಎಂದು ತಿಳಿಸಿದ್ದಾರೆ.

Advertisements

ಘಟನೆಯ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ನಾಗಾಂವ್‌ನಲ್ಲಿ ಧರಣಿ ನಡೆಸಿದರು. ಸ್ಥಳದಲ್ಲೇ ಕಾರ್ಯಕರ್ತರು ‘ರಘುಪತಿ ರಾಘವ ರಾಜಾರಾಮ್’ ಭಕ್ತಿ ಗೀತೆ ಹಾಡಿದರು.

“ನಾವು ಯಾವುದೇ ಸಮಸ್ಯೆಗಳನ್ನು ಸೃಷ್ಟಿಸಲು ಬಯಸುವುದಿಲ್ಲ, ನಾವು ಕೇವಲ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲು ಬಯಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ನಾವು ದೇವಾಲಯಕ್ಕೆ ಭೇಟಿ ನೀಡಲು ಬಯಸುತ್ತೇವೆ. ನಾನು ದೇವಾಲಯಕ್ಕೆ ಭೇಟಿ ನೀಡಲಾಗದಂತಹ ಅಪರಾಧವೇನು ಮಾಡಿದ್ದೇವೆ” ಎಂದು ಪ್ರಶ್ನಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದ ದಿನವಾದ ಸೋಮವಾರ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ ತೆರಳಲಿರುವ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಪ್ರದೇಶಗಳ ಸೂಕ್ಷ್ಮ ಮಾರ್ಗಗಳಲ್ಲಿ ಕಮಾಂಡೋಗಳನ್ನು ನಿಯೋಜಿಸಲಾಗುವುದು ಎಂದು ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X