ಭಾರತ್ ಜೋಡೋ ನ್ಯಾಯ ಯಾತ್ರೆ | ರಾಹುಲ್ ಗಾಂಧಿ ದೇವಸ್ಥಾನ ಪ್ರವೇಶಿಸದಂತೆ ತಡೆದ ಅಸ್ಸಾಂ ಬಿಜೆಪಿ ಸರ್ಕಾರ

Date:

ಭಾರತ್ ಜೋಡೋ ನ್ಯಾಯ ಯಾತ್ರೆಯ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಮುಖ ದೇವಸ್ಥಾನದೊಳಗೆ ಪ್ರವೇಶಿಸದಂತೆ ಅಸ್ಸಾಂನ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರ ತಡೆದು ನಿಲ್ಲಿಸಿರುವುದಾಗಿ ವರದಿಯಾಗಿದೆ.

ಅಸ್ಸಾಂನ ಪೊಲೀಸರು ಭದ್ರತೆಯ ಕಾರಣಗಳನ್ನೊಡ್ಡಿ ತಡೆದಿರುವುದಾಗಿ ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸಹಿತ ಎಲ್ಲ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಧರಣಿ ನಡೆಸುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್‌ನ ಮುಖಂಡ ಕೆ ಸಿ ವೇಣುಗೋಪಾಲ್, ಇಂದು ನಮ್ಮ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಪೂರ್ವಾನುಮತಿ ಪಡೆದಿದ್ದರೂ ಕೂಡ ವಿದ್ವಾಂಸರಾದ ಶ್ರೀಮಂತ ಶಂಕರದೇವ ಅವರ ಜನ್ಮಸ್ಥಳವಾದ ನಾಗಾಂವ್‌ನಲ್ಲಿರುವ ಬಟಾದ್ರವ ಸತ್ರ ದೇವಸ್ಥಾನಕ್ಕೆ ಭೇಟಿ ನೀಡದಂತೆ ಅಸ್ಸಾಂನ ಅಧಿಕಾರಿಗಳು ತಡೆಯುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇದೊಂದು ಹೊಸತು. ದೇವಸ್ಥಾನಕ್ಕೆ ಯಾರು ಮತ್ತು ಯಾವ ಸಮಯದಲ್ಲಿ ಹೋಗಬೇಕು ಎಂಬುದನ್ನು ಬಿಜೆಪಿ ನಿರ್ಧರಿಸುತ್ತದೆ. ಈ ಸರ್ವಾಧಿಕಾರಿ ಆಡಳಿತ ತನ್ನ ದಿನಗಳು ಎಣಿಸಿವೆ ಎಂಬುದನ್ನು ಅರಿತುಕೊಳ್ಳಬೇಕು. ಇಂತಹ ನಿರಂಕುಶಾಧಿಕಾರಕ್ಕೆ ಭಾರತದ ಜನರು ಅವಕಾಶ ನೀಡುವುದಿಲ್ಲ. ಶ್ರೀಮಂತ ಶಂಕರದೇವ ಮುಂದೆ ನಮಸ್ಕರಿಸುವವರೆಗೆ ನಾವು ಇಲ್ಲಿಂದ ಕದಲುವುದಿಲ್ಲ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆಯ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ನಾಗಾಂವ್‌ನಲ್ಲಿ ಧರಣಿ ನಡೆಸಿದರು. ಸ್ಥಳದಲ್ಲೇ ಕಾರ್ಯಕರ್ತರು ‘ರಘುಪತಿ ರಾಘವ ರಾಜಾರಾಮ್’ ಭಕ್ತಿ ಗೀತೆ ಹಾಡಿದರು.

“ನಾವು ಯಾವುದೇ ಸಮಸ್ಯೆಗಳನ್ನು ಸೃಷ್ಟಿಸಲು ಬಯಸುವುದಿಲ್ಲ, ನಾವು ಕೇವಲ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲು ಬಯಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ನಾವು ದೇವಾಲಯಕ್ಕೆ ಭೇಟಿ ನೀಡಲು ಬಯಸುತ್ತೇವೆ. ನಾನು ದೇವಾಲಯಕ್ಕೆ ಭೇಟಿ ನೀಡಲಾಗದಂತಹ ಅಪರಾಧವೇನು ಮಾಡಿದ್ದೇವೆ” ಎಂದು ಪ್ರಶ್ನಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದ ದಿನವಾದ ಸೋಮವಾರ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ ತೆರಳಲಿರುವ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಪ್ರದೇಶಗಳ ಸೂಕ್ಷ್ಮ ಮಾರ್ಗಗಳಲ್ಲಿ ಕಮಾಂಡೋಗಳನ್ನು ನಿಯೋಜಿಸಲಾಗುವುದು ಎಂದು ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ಎಂದ ಕೆ.ಎಸ್.ಈಶ್ವರಪ್ಪ

ರಾಜ್ಯ ಬಿಜೆಪಿಯ ವಿರುದ್ಧ ಬಂಡಾಯವೆದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ...

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಲೋಕಸಭೆ ಚುನಾವಣೆ | ಪ್ರಣಾಳಿಕೆ: ಬಿಜೆಪಿ ‘ಸಂಕಲ್ಪ ಪತ್ರ’ V/s ಕಾಂಗ್ರೆಸ್‌ ‘ನ್ಯಾಯ ಪತ್ರ’; 10 ಪ್ರಮುಖ ಅಂಶಗಳು

ಮೂರನೇ ಬಾರಿಗೆ ಅಧಿಕಾರ ಹಿಡಿಯುತ್ತೇವೆಂದು ಅಬ್ಬರದ ಭಾಷಣ ಮಾಡುತ್ತಿರುವ ಬಿಜೆಪಿ, ಮುಂಬರು...

ಬೆಂಗಳೂರು | ಸೋಲದೇವನಹಳ್ಳಿ ಪಂಪ್‌ ಸ್ಟೇಷನ್‌ ಪುನಃಶ್ಚೇತನಕ್ಕೆ ಜಲಮಂಡಳಿ ಸಿದ್ದತೆ

ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿಗೆ 1896ರಲ್ಲಿ ಅರ್ಕಾವತಿ ನದಿಯ ನೀರನ್ನ...