ಪ್ರಧಾನಿ ಮೋದಿ ಶ್ರೀಮಂತ ಉದ್ಯಮಿಗಳ ಸಾಧನ: ರಾಹುಲ್ ಗಾಂಧಿ ವಾಗ್ದಾಳಿ

Date:

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು, ಮೋದಿ ದೇಶದ ಕೆಲವು ‘ ಶ್ರೀಮಂತ ಉದ್ಯಮಿಗಳ ಸಾಧನ’ ಎಂದು ಕರೆದಿದ್ದಾರೆ.

- Advertisement -

ಕೇರಳದ ಕೊಡಿಯತ್ತೂರಿನಿಂದ ತಮ್ಮ ರೋಡ್‌ಶೋ ವೇಳೆ ಮಾತನಾಡಿದ ರಾಹುಲ್ ಗಾಂಧಿ ಅವರು, “ದೇಶದ ನೈಜ ಸಮಸ್ಯೆಗಳಿಂದ ಜನರನ್ನು ಬೇರೆಡೆಗೆ ಸೆಳೆಯುವುದು, ಭಾರತದ ಶ್ರೀಮಂತ ಉದ್ಯಮಿಗಳನ್ನು ರಕ್ಷಿಸುವುದು ಮತ್ತು ಅವರ ಬ್ಯಾಂಕ್ ಸಾಲಗಳನ್ನು ಮನ್ನಾ ಮಾಡುವುದು ಪ್ರಧಾನಿ ಮೋದಿಯವರ ಕೆಲಸವಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಐದಾರು ದೊಡ್ಡ, ಶ್ರೀಮಂತ ಉದ್ಯಮಿಗಳ ಸಾಧನ” ಎಂದು ಟೀಕಿಸಿದ ವಯನಾಡಿನ ಹಾಲಿ ಸಂಸದರು, “ಮೋದಿಯವರು ದೇಶದ 20-25 ಜನರಿಗೆ ಸುಮಾರು 16 ಲಕ್ಷ ಕೋಟಿ ರೂಪಾಯಿಗಳನ್ನು ನೀಡಿದ್ದಾರೆ” ಎಂದು ದೂರಿದರು.

ಇದನ್ನು ಓದಿದ್ದೀರಾ?  ತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಹೆಲಿಕಾಪ್ಟರ್ ತಪಾಸಣೆ

“ಶ್ರೀಮಂತರಿಗೆ ಸಹಾಯ ಮಾಡುವ ಪ್ರಧಾನಿ ಮೋದಿ ಅವರು ದೇಶದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳು, ನಿರುದ್ಯೋಗ ಅಥವಾ ಬೆಲೆ ಏರಿಕೆಯ ಬಗ್ಗೆ ಮಾತನಾಡುವುದಿಲ್ಲ” ಎಂದು ರಾಹುಲ್ ಗಾಂಧಿ ಟೀಕಿಸಿದರು. ಹಾಗೆಯೇ “ಬಾಂಡ್‌ಗಳು ಪಿಎಂ ಮೋದಿ ನಡೆಸಿದ ಸುಲಿಗೆಯ ಒಂದು ರೂಪವಾಗಿದೆ” ಎಂದು ಹೇಳಿದರು.

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಂವಿಧಾನವನ್ನು ನಾಶಪಡಿಸಲು ಮತ್ತು ಬದಲಾಯಿಸಲು ಪ್ರಯತ್ನಿಸುತ್ತಿವೆ” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದರು.

ಇದನ್ನು ಓದಿದ್ದೀರಾ?  ಬಿಜೆಪಿ ಪ್ರಣಾಳಿಕೆಯಲ್ಲಿ ಹಣದುಬ್ಬರ, ನಿರುದ್ಯೋಗದ ಪ್ರಸ್ತಾಪವಿಲ್ಲ: ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ಈ ತಿಂಗಳ ಆರಂಭದಲ್ಲಿ ವಯನಾಡಿನಲ್ಲಿ ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದು ಬೃಹತ್ ರೋಡ್ ಶೋ ನಡೆಸುವ ಮೂಲಕ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದರು.

2019 ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ವಯನಾಡಿನಲ್ಲಿ 4,31,770 ಮತಗಳ ದಾಖಲೆಯ ಅಂತರದಿಂದ ಗೆದ್ದಿದ್ದರು. ಕೇರಳದ 20 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...