ಅನಾರೋಗ್ಯ ಹಿನ್ನೆಲೆ; ರಾಹುಲ್ ಗಾಂಧಿ ಕೇರಳ ಚುನಾವಣಾ ಪ್ರಚಾರ ರದ್ದು

Date:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 22 ರಂದು ಕೇರಳದಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿದ್ದಾರೆ ಎಂದು ಪಕ್ಷ ಭಾನುವಾರ ತಿಳಿಸಿದೆ.

- Advertisement -

ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಂಗಾಮಿ ಅಧ್ಯಕ್ಷ, ಯುಡಿಎಫ್ ಸಂಚಾಲಕ ಎಂಎಂ ಹಸನ್ “ಸೋಮವಾರ ನಡೆಯಬೇಕಿದ್ದ ಗಾಂಧಿಯವರ ಎಲ್ಲಾ ಸಾರ್ವಜನಿಕ ಸಭೆಗಳನ್ನು ರದ್ದುಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇನ್ನು ರಾಂಚಿಯಲ್ಲಿ ನಡೆದ ಭಾರತ ಬ್ಲಾಕ್ ರ್‍ಯಾಲಿಯಲ್ಲಿಯೂ ರಾಹುಲ್ ಗಾಂಧಿ ಭಾಗಿಯಾಗಿಲ್ಲ. ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಅವರು “ರಾಹುಲ್ ಗಾಂಧಿ ಅವರಿಗೆ ಇದ್ದಕ್ಕಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದೆ. ಪ್ರಸ್ತುತ ನವದೆಹಲಿಯಿಂದ ಬೇರೆ ಕಡೆ ಪ್ರಯಾಣ ಮಾಡಲು ಸಾಧ್ಯವಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ?  ಮೋದಿಯವರ ದ್ವೇಷ ಭಾಷಣ ಜನರ ಗಮನವನ್ನು ಬೇರೆಡೆಗೆ ತಿರುಗಿಸುವ ಯತ್ನ: ರಾಹುಲ್ ಗಾಂಧಿ

“ಇಂಡಿಯಾ ಒಕ್ಕೂಟದ ರ್‍ಯಾಲಿ ನಡೆಯುತ್ತಿರುವ ಸತ್ನಾ ಮತ್ತು ರಾಂಚಿಯಲ್ಲಿ ರಾಹುಲ್ ಗಾಂಧಿ ಪ್ರಚಾರಕ್ಕೆ ಸಿದ್ಧರಾಗಿದ್ದರು. ಆದರೆ ದಿಡೀರ್ ಆಗಿ ಅನಾರೋಗ್ಯ ಕಾಣಿಸಿಕೊಂಡಿದೆ. ಸದ್ಯಕ್ಕೆ ಅವರು ಪ್ರಯಾಣ ಮಾಡಲಾಗದು” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಮೇಶ್ ಹೇಳಿದರು.

ರಾಹುಲ್ ಗಾಂಧಿ ವಯನಾಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಕೇರಳದ 20 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 26 ರಂದು ಚುನಾವಣೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...