ಪ್ರಧಾನಿ ಮೋದಿ ಹುಟ್ಟುವಾಗಲೇ ಒಬಿಸಿ ಆಗಿರಲಿಲ್ಲ: ರಾಹುಲ್ ಗಾಂಧಿ

Date:

  • ತೇಲಿ ಸಮುದಾಯಕ್ಕೆ ಸೇರಿದವರು ಪ್ರಧಾನಿ ನರೇಂದ್ರ ಮೋದಿ
  • 2000ದಲ್ಲಿ ತೇಲಿ ಸಮುದಾಯವನ್ನು ಒಬಿಸಿಗೆ ಸೇರಿಸಿದ್ದು ಬಿಜೆಪಿ

“ಪ್ರಧಾನಿ ನರೇಂದ್ರ ಮೋದಿ ಸಂಸತ್‌ನಲ್ಲಿ ಸುದೀರ್ಘ ಭಾಷಣ ಬಿಗಿದು, ತಮ್ಮನ್ನು ತಾವು ಒಬಿಸಿ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅವರು ಹುಟ್ಟುವಾಗಲೇ ಒಬಿಸಿ ಸಮುದಾಯಕ್ಕೆ ಸೇರಿದವರಾಗಿರಲಿಲ್ಲ” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.

- Advertisement -

ಜಾತಿಗಣತಿಗೆ ಕಾಂಗ್ರೆಸ್‌ ಒತ್ತಾಯಿಸುತ್ತಿರುವ ಬಗ್ಗೆ ಪರೋಕ್ಷವಾಗಿ ಸಂಸತ್‌ನ ಬಜೆಟ್ ಅಧಿವೇಶನದ ವೇಳೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, “ಕೆಲವರು ಒಬಿಸಿ ಸಮುದಾಯದವರು ಉನ್ನತ ಅಧಿಕಾರದಲ್ಲಿ ಇಲ್ಲ ಎಂದು ಆರೋಪಿಸುತ್ತಿದ್ದಾರೆ. ಆದರೆ, ಒಬಿಸಿಗೆ ಸೇರಿರುವ ನಾನು ಈ ದೇಶದ ಪ್ರಧಾನಿಯಾಗಿರುವುದು ಕಾಣಿಸುತ್ತಿಲ್ಲವೇ?” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಹೇಳಿಕೆಗೆ ಒಡಿಶಾದ ಜಾರಸ್‌ಗುಡದಲ್ಲಿ ತಮ್ಮ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮೂರನೇ ಮತ್ತು ಮುಕ್ತಾಯದ ದಿನದಂದು ಪ್ರತಿಕ್ರಿಯಿಸಿರುವ ವಯನಾಡ್‌ನ ಸಂಸದ ರಾಹುಲ್ ಗಾಂಧಿ, “ಮೋದಿ ಅವರು ಜನರಲ್ ಕ್ಯಾಟಗರಿಗೆ ಸೇರಿದ ಕುಟುಂಬದಲ್ಲಿ ಜನಿಸಿದ್ದರು. ಆದರೆ ಮೋದಿ, ತಾವು ಒಬಿಸಿ ಎಂದು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರು ಇತರೆ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿಲ್ಲ. ಮೋದಿ, 2000ರಲ್ಲಿ ಗುಜರಾತ್‌ನಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಬಿಸಿ ಪಟ್ಟಿಗೆ ಸೇರಿಸಲ್ಪಟ್ಟ ತೇಲಿ ಜಾತಿಯ ಕುಟುಂಬದಲ್ಲಿ ಜನಿಸಿದವರು. ಆದ್ದರಿಂದ ಮೋದಿ ಹುಟ್ಟಿನಿಂದ ಒಬಿಸಿ ಅಲ್ಲ” ಎಂದು ರಾಹುಲ್ ಗಾಂಧಿ ತಿಳಿಸಿದರು.

“ಪ್ರಧಾನಿ ಮೋದಿ ಒಬಿಸಿಗಳೊಂದಿಗೆ ಕೈಕುಲುಕುವುದಿಲ್ಲ. ರೈತರ ಕೈ ಕುಲುಕುವುದಿಲ್ಲ. ಬದಲಿಗೆ ಕೋಟ್ಯಾಧಿಪತಿ ಅದಾನಿಯವರನ್ನು ಅಪ್ಪಿಕೊಳ್ಳುತ್ತಾರೆ” ಎಂದು ರಾಹುಲ್ ಗಾಂಧಿ ಕಿಡಿಕಾರಿದರು.

“ನಾನು ಜಾತಿ ಗಣತಿ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡಿದಾಗ ಪ್ರಧಾನಿ ಮೋದಿಯವರು ದೇಶದಲ್ಲಿ ಕೇವಲ ಎರಡು ಜಾತಿಗಳಿವೆ. ಶ್ರೀಮಂತ ಮತ್ತು ಬಡವ ಎಂದು ಹೇಳುತ್ತಾರೆ. ಎರಡು ಜಾತಿಗಳಿದ್ದರೆ ನೀವು ಯಾರು? ನೀವು ಬಡವರಲ್ಲ! ಕೋಟಿ ಬೆಲೆಬಾಳುವ ಸೂಟ್ ಧರಿಸುತ್ತೀರಿ. ದಿನಕ್ಕೆ ಹಲವಾರು ಬಾರಿ ಬಟ್ಟೆ ಬದಲಿಸಿ, ನಂತರ ನಾನು ಒಬಿಸಿ ವರ್ಗದ ವ್ಯಕ್ತಿ ಎಂದು ಸುಳ್ಳು ಹೇಳುತ್ತೀರಿ” ಎಂದು ರಾಹುಲ್ ಗಾಂಧಿ ಜರೆದಿದ್ದಾರೆ.

ಇದನ್ನು ಓದಿದ್ದೀರಾ? ಶ್ವೇತಪತ್ರಕ್ಕೆ ಕಾಳಪತ್ರ | ಹತ್ತು ವರ್ಷದಲ್ಲಿ 411 ಶಾಸಕರ ಖರೀದಿ ಬಿಜೆಪಿಯ ಸಾಧನೆ: ಖರ್ಗೆ

ಭಾರತ್ ಜೋಡೋ ನ್ಯಾಯ್ ಯಾತ್ರೆಯು ಇಂದು ಇಲ್ಲಿನ ಹಳೆ ಬಸ್ ನಿಲ್ದಾಣದಿಂದ ಯಾತ್ರೆಯನ್ನು ಪುನರಾರಂಭಿಸಿದರು. ಅವರ ಜೊತೆ ಎಐಸಿಸಿ ನಾಯಕ ಅಜೋಯ್ ಕುಮಾರ್ ಮತ್ತು ಒಪಿಸಿಸಿ ಅಧ್ಯಕ್ಷ ಶರತ್ ಪಟ್ಟನಾಯಕ್ ಇದ್ದರು. ಯಾತ್ರೆಯು ಇಂದು ಸಂಜೆ ಒಡಿಶಾದಿಂದ ಛತ್ತೀಸ್‌ಗಢವನ್ನು ಪ್ರವೇಶಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...