2004ರಿಂದ 2014ರ ನಡುವೆ ಯಾವಾಗ ಬೇಕಾದರೂ ರಾಹುಲ್ ಗಾಂಧಿ ಪ್ರಧಾನಿಯಾಗಬಹುದಿತ್ತು: ತೆಲಂಗಾಣ ಸಿಎಂ

Date:

2004ರಿಂದ 2014ರ ನಡುವೆ ಯಾವಾಗ ಬೇಕಾದರೂ ರಾಹುಲ್ ಗಾಂಧಿ ಪ್ರಧಾನಿಯಾಗಬಹುದಿತ್ತು, ಆದರೆ ಅವರಿಗೆ ಹುದ್ದೆಗಳು ಮತ್ತು ಸ್ಥಾನಗಳು ಮುಖ್ಯವಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸೋಮವಾರ ಹೇಳಿದ್ದಾರೆ.

- Advertisement -

ತೆಲಂಗಾಣದ ಗಾಂಧಿ ಭವನದಲ್ಲಿ ನಡೆದ ಮಾಜಿ ಸಿಎಂ ವೈಎಸ್ ರಾಜಶೇಖರ ರೆಡ್ಡಿ ಅವರ 75ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ರೆಡ್ಡಿ, ” ವೈಎಸ್ಆರ್ ಅವರು ತಮ್ಮ ಆಡಳಿತದ ಅವಧಿಯಲ್ಲಿ ಪರಿಚಯಿಸಿದ ಕಲ್ಯಾಣ ಕಾರ್ಯಕ್ರಮಗಳು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಿಸಿದ ‘ಆರು ಭರವಸೆಗಳಿಗೆ’ ಸ್ಫೂರ್ತಿಯಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

“2009ರಲ್ಲಿ ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ವೈಎಸ್‌ಆರ್ ಅವರು ರಾಹುಲ್ ಗಾಂಧಿ ಭಾರತದ ಪ್ರಧಾನಿಯಾಗುತ್ತಾರೆ ಎಂದು ಹೇಳಿದ ಮಾತು ನನಗೆ ನೆನಪಿದೆ. ರಾಹುಲ್ ಆ ಹುದ್ದೆಗೆ ಏರುವ ಮುನ್ನವೇ ವೈಎಸ್ ಆರ್ ನಮ್ಮನ್ನು ಅಗಲಿದರು. ಅವರನ್ನು ಪ್ರಧಾನಿ ಮಾಡಲು ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕು” ಎಂದರು.

“ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣವಾದ ವೈಎಸ್ಆರ್ ಅವರ ಪಾದಯಾತ್ರೆಯು ರಾಹುಲ್ ಅವರ ಭಾರತ್ ಜೋಡೋ ಯಾತ್ರೆಯನ್ನು ಪ್ರಾರಂಭಿಸಲು ಪ್ರಭಾವ ಬೀರಿತು” ಎಂದು ರೆಡ್ಡಿ ಹೇಳಿದರು.

ಇದನ್ನು ಓದಿದ್ದೀರಾ?  75ನೇ ವಯಸ್ಸಿನಲ್ಲಿ ನಿವೃತ್ತಿ ಪಡೆಯಲು ಸಿದ್ಧವೇ: ಮೋದಿಗೆ ರೇವಂತ್ ರೆಡ್ಡಿ ಪ್ರಶ್ನೆ

“ತೆಲಂಗಾಣ, ಕರ್ನಾಟಕ ಮತ್ತು ಹಿಮಾಚಲ ಪ್ರದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯೇ ನೆರವಾಗಿದೆ. ಈಗ ರಾಹುಲ್ ಅವರನ್ನು ಪ್ರಧಾನಿ ಮಾಡಲು ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕು” ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

“ರಾಹುಲ್ ಗಾಂಧಿ ಈಗಾಗಲೇ ವಿರೋಧ ಪಕ್ಷದ ನಾಯಕರಾಗಿ ಶ್ರಮಿಸುತ್ತಿದ್ದಾರೆ. ಅವರು ಪ್ರಧಾನಿ ಹುದ್ದೆಯನ್ನು ಅಲಂಕರಿಸಲು ಕೇವಲ ಒಂದು ಹೆಜ್ಜೆ ದೂರದಲ್ಲಿದ್ದಾರೆ. ಅವರ ನಾಯಕತ್ವದಲ್ಲಿ ಮಾತ್ರ ದೇಶ ಅಭಿವೃದ್ಧಿಯಾಗಲಿದೆ” ಎಂದು ಅಭಿಪ್ರಾಯಿಸಿದರು.

“ರಾಹುಲ್‌ ಗಾಂಧಿ ಅವರಿಗೆ ಹುದ್ದೆ ಮತ್ತು ಸ್ಥಾನಗಳು ಮುಖ್ಯವಲ್ಲ. ಅವರು 2004 ಮತ್ತು 2014ರ ನಡುವೆ ಯಾವಾಗ ಬೇಕಾದರೂ ಪ್ರಧಾನಿಯಾಗಬಹುದಿತ್ತು. ರಾಹುಲ್‌ರನ್ನು ಮುಂದಿನ ಪ್ರಧಾನಿಯನ್ನಾಗಿ ಮಾಡಲು ಶ್ರಮಿಸುವವರು ವೈಎಸ್‌ಆರ್‌ನ ನಿಜವಾದ ಬೆಂಬಲಿಗರು. ನಾನು ಎಲ್ಲಾ ವೈಎಸ್‌ಆರ್ ಅಭಿಮಾನಿಗಳಿಗೆ ಕಾಂಗ್ರೆಸ್ ಸೇರುವಂತೆ ಮನವಿ ಮಾಡುತ್ತೇನೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ?  ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ₹3 ಕೋಟಿ ಬೆಲೆಯ 22 ಕಾರು ಖರೀದಿಸಿ ಅಡಗಿಸಿಟ್ಟಿದ್ದ ಕೆಸಿಆರ್: ರೇವಂತ್ ರೆಡ್ಡಿ

ವೈಎಸ್ಆರ್ 2004 ಮತ್ತು 2009 ರ ನಡುವೆ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅಧಿಕಾರಕ್ಕೆ ಮರಳಿದ ಮೂರು ತಿಂಗಳ ನಂತರ ಅವರು ಸೆಪ್ಟೆಂಬರ್ 2009ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು.

ಇನ್ನು ಕಳೆದ ವರ್ಷವೂ, ತೆಲಂಗಾಣ ಕಾಂಗ್ರೆಸ್, ನವೆಂಬರ್‌ನಲ್ಲಿ ಅಧಿಕಾರಕ್ಕೆ ಬರುವ ಮೊದಲು, ವೈಎಸ್‌ಆರ್ ಅವರ ಜನ್ಮ ವಾರ್ಷಿಕೋತ್ಸವವನ್ನು ಆಚರಿಸಿತ್ತು. ಇದು ಇತರ ಪಕ್ಷಗಳ ವೈಎಸ್‌ಆರ್ ಬೆಂಬಲಿಗರನ್ನು, ವಿಶೇಷವಾಗಿ ಭಾರತ್ ರಾಷ್ಟ್ರ ಸಮಿತಿಯಲ್ಲಿರುವ (ಬಿಆರ್‌ಎಸ್) ಅನ್ನು ಸೆಳೆಯುವ ಪ್ರಯತ್ನವಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...