ರಾಹುಲ್ ಗಾಂಧಿ ಅನರ್ಹತೆ | ದೇಶದ 35 ನಗರಗಳಲ್ಲಿ ಕಾಂಗ್ರೆಸ್ ಪತ್ರಿಕಾಗೋಷ್ಠಿ

Date:

  • ಮಾರ್ಚ್ 29ಕ್ಕೆ ದೇಶದ 31 ನಗರಗಳಲ್ಲಿ ಪತ್ರಿಕಾಗೋಷ್ಠಿ
  • ರಾಹುಲ್ ಗಾಂಧಿ ಅನರ್ಹತೆಗೆ ಕಾಂಗ್ರೆಸ್‌ನಿಂದ ಖಂಡನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ ವಿರೋಧಿಸಿರುವ ಕಾಂಗ್ರೆಸ್, ಎರಡು ದಿನಗಳ ಅವಧಿಯಲ್ಲಿ 35 ನಗರಗಳಲ್ಲಿ ಪತ್ರಿಕಾಗೋಷ್ಠಿ ನಡೆಸಲಿದೆ.

ಮೋದಿ ಉಪನಾಮ ಟೀಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರನ್ನು ಸಂಸತ್‌ನಿಂದ ಅನರ್ಹಗೊಳಿಸಲಾಗಿದೆ. ಸರ್ಕಾರದ ಈ ನಿರ್ಧಾರ ಖಂಡಿಸಿ ‘ಪ್ರಜಾಪ್ರಭುತ್ವ ಅನರ್ಹತೆ’ ಎನ್ನುವ ಬ್ಯಾನರ್‌ನಡಿ ಕಾಂಗ್ರೆಸ್ ಪತ್ರಿಕಾಗೋಷ್ಠಿ ನಡೆಸಲಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಮಾರ್ಚ್ 28 ಮತ್ತು 29ರಂದು ಕಾಂಗ್ರೆಸ್‌ನ ಹಿರಿಯ ನಾಯಕರು ‘ಪ್ರಜಾಪ್ರಭುತ್ವ ಅನರ್ಹತೆ’ ಕುರಿತು 35 ನಗರಗಳಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಾರೆ” ಎಂದು ತಿಳಿಸಿದ್ದಾರೆ.

“ಪತ್ರಿಕಾಗೋಷ್ಠಿಗಳಲ್ಲಿ ನೀರವ್ ಮೋದಿ ಮತ್ತು ಲಲಿತ್ ಮೋದಿಗೆ ‘ಮೋದಾನಿ’ ಮತ್ತು ಮೋದಿ ಸರ್ಕಾರ ನೀಡಿದ ‘ಕ್ಲೀನ್ ಚೀಟ್‌’ನ ವಾಸ್ತವತೆಯನ್ನು ಸಹ ಎತ್ತಿ ಹಿಡಿಯಲಾಗುತ್ತದೆ” ಎಂದಿದ್ದಾರೆ.

ಮಾರ್ಚ್‌ 28ಕ್ಕೆ ನಾಲ್ಕು ನಗರಗಳಲ್ಲಿ ಪತ್ರಿಕಾಗೋಷ್ಠಿ

ಮಾರ್ಚ್ 28ಕ್ಕೆ ದೇಶದ ನಾಲ್ಕು ನಗರಗಳಲ್ಲಿ ಕಾಂಗ್ರೆಸ್ ಪತ್ರಿಕಾಗೋಷ್ಠಿ ನಡೆಸಲಿದೆ.
ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಲಖನೌದಲ್ಲಿ ಪತ್ರಿಕಾಗೋಷ್ಠಿ ನಡೆಸಿದರೆ, ಅಜಯ್ ಮಾಕೆನ್ ಜಮ್ಮುವಿನಲ್ಲಿ, ಅಶೋಕ್ ಚವಾಣ್ ಹೈದರಾಬಾದ್‌ನಲ್ಲಿ ಹಾಗೂ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಚಂಡೀಗಢದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್‌ ಗಾಂಧಿಗೆ ನೋಟಿಸ್

ಮಾರ್ಚ್ 29 ರಂದು 31 ನಗರಗಳಲ್ಲಿ ಪತ್ರಿಕಾಗೋಷ್ಠಿ

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಹಮದಾಬಾದ್, ಬೆಂಗಳೂರಿನಲ್ಲಿ ಆನಂದ್ ಶರ್ಮಾ, ಚಂಡೀಗಢದಲ್ಲಿ ಸುಪ್ರಿಯಾ ಶ್ರೀನೇತ್, ಶಿಮ್ಲಾದಲ್ಲಿ ಶಕ್ತಿಸಿನ್ಹ್ ಗೋಹಿಲ್, ತಿರುವನಂತಪುರದಲ್ಲಿ ಮನೀಷ್ ತಿವಾರಿ, ಸೂರತ್‌ನಲ್ಲಿ ಕನ್ಹಯ್ಯಾ ಕುಮಾರ್, ವಾರಣಾಸಿಯಲ್ಲಿ ಗೌರವ್ ವಲ್ಲಭ್, ಮುಂಬೈನಲ್ಲಿ ಪವನ್ ಖೇರಾ ಮತ್ತು ಸಲ್ಮಾನ್ ಖುರ್ಷಿದ್ ಅವರು ಶ್ರೀನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರೊ. ಅರ್ನಾಲ್ಡ್ ಡಿಕ್ಸ್ : ಉತ್ತರಾಖಂಡ ಸುರಂಗ ರಕ್ಷಣಾ ಕಾರ್ಯಾಚರಣೆಯ ಹಿಂದಿನ ಶಕ್ತಿ

ಉತ್ತರಾಖಂಡನ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನಗಳ ಕಾಲ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು...

ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ...

ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಸ್ಥಾಪನೆ: ಸಿದ್ದರಾಮಯ್ಯ ಭರವಸೆ

ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಹೇಳಿಕೆ ಸ್ಥಳದ ಅಭಾವವಿರುವ...

ಗುತ್ತಿಗೆದಾರರ ಬಾಕಿ ಹಣ ಪಾವತಿ ವಿಚಾರ: ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಕಿಡಿ

'ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು?' ಹೈಕೋರ್ಟ್‌ ಕಿಡಿ ಬಾಕಿ ಪಾವತಿಯಲ್ಲೂ...