ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ತು ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಕಾರ್ಯಾಲಯ ಶುಕ್ರವಾರ (ಮಾರ್ಚ್ 24) ಅಧಿಸೂಚನೆ ಹೊರಡಿಸಿದೆ.
ಮಾನಹಾನಿ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ರಾಹುಲ್ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ ಒಂದು ದಿನದ ನಂತರ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ.
ಈ ಕುರಿತು ಕಾಂಗ್ರೆಸ್ ನಾಯಕ ಜೈ ರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಸಂಸದರಾಗಿರುವ ರಾಹುಲ್ ಗಾಂಧಿ ಅವರಿಗೆ ಗುಜರಾತ್ನ ನ್ಯಾಯಾಲಯ 2019ರಲ್ಲಿ ದಾಖಲಾದ ಮಾನಹಾನಿ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ (ಮಾರ್ಚ್ 23) ತೀರ್ಪು ನೀಡಿತ್ತು.
ಲೋಕಸಭೆಗೆ 2019ರಲ್ಲಿ ನಡೆದ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಹುಲ್ ಅವರು ಕೋಲಾರದಲ್ಲಿ ಮಾಡಿದ ಭಾಷಣದಲ್ಲಿ ‘ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ’ ಎಂದು ಪ್ರಶ್ನಿಸಿದ್ದರು.