ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದು ಕಾನೂನು ಇಲ್ಲ: ಸಿಎಂ ಬೊಮ್ಮಾಯಿ

Date:

  • ಏನು ಮಾತನಾಡಿದರೂ ನಡೆಯುತ್ತೆ ಎನ್ನುವ ಭಾವನೆ ರಾಹುಲ್‌ಗೆ ಇದೆʼ
  • ‘ದೇಶದ ಕಾನೂನು ವ್ಯವಸ್ಥೆ ಪ್ರಕಾರ ರಾಹುಲ್‌ ಗಾಂಧಿಗೆ ಶಿಕ್ಷೆಯಾಗಿದೆʼ

ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದಿಲ್ಲ. ದೇಶದಲ್ಲಿ ಕಾನೂನು ವ್ಯವಸ್ಥೆ ಪ್ರಕಾರ ಎಲ್ಲ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

“ಏನು ಮಾತನಾಡಿದರೂ ನಡೆಯುತ್ತದೆ ಎನ್ನುವ ಭಾವನೆ ರಾಹುಲ್‌ ಗಾಂಧಿಗೆ ಇದೆ. ಅವರಿಗೆ ಸರಿಪಡಿಸಿಕೊಳ್ಳಲು ಅವಕಾಶವಿತ್ತು. ಆದರೆ ಅವರು ಸರಿಪಡಿಸಿಕೊಳ್ಳಲಿಲ್ಲ. ವಿರೋಧ ಪಕ್ಷದದವರನ್ನ ಚುನಾವಣೆಯಲ್ಲಿ ಸೋಲಿಸಬೇಕು ಅಥವಾ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು. ಅದು ಬಿಟ್ಟು ಹಾದಿಬೀದಿಯಲ್ಲಿ ವೈಯಕ್ತಿಕ ನಿಂದನೆ ಮಾಡಿ ಮಾತನಾಡಿದರೆ, ಖಂಡಿತವಾಗಿಯೂ ಅದಕ್ಕೆ ಕಾನೂನು ಇದೆ” ಎಂದರು.

“ರಾಹುಲ್ ಗಾಂಧಿ ಕೇವಲ ವ್ಯಕ್ತಿಯ ವಿರುದ್ಧ ಅಲ್ಲ ಒಂದು ವರ್ಗದ ವಿರುದ್ಧ ಮಾತನಾಡಿದ್ದಾರೆ. ಬಹಳ ಜನರಿಗೆ ಇದರಿಂದ ನೋವಾಗಿದೆ. ಅವರೆಲ್ಲರೂ ಪ್ರಕರಣ ದಾಖಲಿಸಿದ್ದರಿಂದ ನ್ಯಾಯಾಲಯ ತೀರ್ಪು ನೀಡಿದೆ” ಎಂದರು.

ಕಾಂಗ್ರೆಸ್ ಪಟ್ಟಿಯಲ್ಲಿ ಆಶ್ಚರ್ಯವಿಲ್ಲ

ಕಾಂಗ್ರೆಸ್ ನಿಂದ ಮೊದಲ ಪಟ್ಟಿ ಬಿಡುಗಡೆಯಾಗಿರುವುದರಲ್ಲಿ ಯಾವುದೇ  ಆಶ್ಚರ್ಯವಿಲ್ಲ. ಅದರಲ್ಲಿ  ಹೊಸತನವಿಲ್ಲ. ಬಿಜೆಪಿ ಪಟ್ಟಿ ಬಿಡುಗಡೆ ಕುರಿತು ಕಾದು ನೋಡಿ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆ ನಿಶ್ಚಿತ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ ಬರ ಪರಿಸ್ಥಿತಿ, ರೈತರ ಸಂಕಷ್ಟ ಪರಿಹರಿಸುವ ಚರ್ಚೆಗಳಿಗೆ ಸದನದಲ್ಲಿ ಪ್ರಾಮುಖ್ಯತೆ ನೀಡಿ; ಎಎಪಿ ಒತ್ತಾಯ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ 16ನೇ ವಿಧಾನಸಭೆಯ ವಿಧಾನ ಮಂಡಲಗಳ ಚಳಿಗಾಲದ...

ಬೆಂಗಳೂರಿನ ಈ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧ!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೊಸದೇನಲ್ಲ ಎಂಬಂತೆ ಆಗಿದೆ. ಬೆಂಗಳೂರಿನ...

ಹಾಸನ | ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ; ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್‌ನಲ್ಲಿ ಸೋಮವಾರ ನಡೆದ...

ಹಾವೇರಿ | ಕಾರ್ಖಾನೆಗಳ ಸಹವಾಸ ಸಾಕೆಂದು ಆಲೆಮನೆ ಮೊರೆ ಹೋಗುತ್ತಿರುವ ರೈತರು

ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಲೇ...