ವಯನಾಡ್‌ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

Date:

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ನಾಮಪತ್ರ ಸಲ್ಲಿಸಿದರು.

- Advertisement -

ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಆಗಮಿಸಿದ ರಾಹುಲ್ ಗಾಂಧಿ, ಚುನಾವಣಾಧಿಕಾರಿಯೂ ಆಗಿರುವ ವಯನಾಡ್ ಜಿಲ್ಲಾಧಿಕಾರಿ ಡಾ. ರೇಣು ರಾಜ್ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರವನ್ನು ಸಲ್ಲಿಸಿದ ನಂತರ, ಸಂವಿಧಾನವನ್ನು ಎತ್ತಿಹಿಡಿಯುವ ಪ್ರಮಾಣವಚನವನ್ನು ಓದಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ವಯನಾಡಿಗೆ ಆಗಮಿಸಿದ್ದ ರಾಹುಲ್, ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ  ಕಲ್ಪೆಟ್ಟಾದಿಂದ ಸಿವಿಲ್ ಸ್ಟೇಷನ್‌ವರೆಗೆ ಬೃಹತ್ ರೋಡ್ ಶೋ ನಡೆಸಿದರು.

ರೋಡ್‌ಶೋ ಅಂತ್ಯದ ವೇಳೆಗೆ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, “ವಯನಾಡ್‌ನಲ್ಲಿ ಅನೇಕ ಜೀವಗಳನ್ನು ಬಲಿತೆಗೆದುಕೊಂಡಿರುವ ಮಾನವ-ಪ್ರಾಣಿ ಸಂಘರ್ಷ ಸೇರಿದಂತೆ ಎಲ್ಲ ವಿಷಯಗಳಲ್ಲಿ ತಾನು ಯಾವಾಗಲೂ ವಯನಾಡಿನ ಜನರೊಂದಿಗೆ ಇರುತ್ತೇನೆ. ವಯನಾಡ್‌ನ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ರಾಷ್ಟ್ರ ಮತ್ತು ವಿಶ್ವದ ಗಮನಕ್ಕೆ ತರಲು ಸದಾ ಸಿದ್ಧ” ಎಂದು ಹೇಳಿದರು.

Rahul Gandhi 22

ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ಈ ಚುನಾವಣೆಯು ಪ್ರಜಾಪ್ರಭುತ್ವ ಮತ್ತು ಭಾರತದ ಸಂವಿಧಾನವನ್ನು ರಕ್ಷಿಸಲು ಇರುವ ಹೋರಾಟವಾಗಿದೆ. ಈ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಾಶಮಾಡಲು ಬಯಸುವ ಶಕ್ತಿಗಳು ಒಂದೆಡೆ ಇದೆ. ಇನ್ನೊಂದೆಡೆ ದೇಶದ ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ಸ್ವರೂಪವನ್ನು ರಕ್ಷಿಸುವವರ ಶಕ್ತಿ ಇದೆ” ಎಂದು ಹೇಳಿದರು.

ವಯನಾಡ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಮತ್ತು ಸಿಪಿಐ ನಾಯಕಿ ಅನ್ನಿ ರಾಜಾ ವಿರುದ್ಧ ರಾಹುಲ್ ಸ್ಪರ್ಧಿಸಲಿದ್ದಾರೆ. 2019ರಲ್ಲಿ ಇದೇ ಕ್ಷೇತ್ರದಿಂದ ನಾಲ್ಕು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ರಾಹುಲ್ ಗಾಂಧಿ ಗೆದ್ದಿದ್ದರು.

ಇದನ್ನು ಓದಿದ್ದೀರಾ? ಬೆಂಗಳೂರು | ಹೈಕೋರ್ಟ್‌ ಜಡ್ಜ್ ಮುಂದೆಯೇ ಕೈ ಕತ್ತರಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಒಟ್ಟು 10,92,197 ಮತಗಳಲ್ಲಿ 7,06,367 ಮತಗಳನ್ನು ಗಳಿಸಿದ್ದರೆ, ತಮ್ಮ ಹತ್ತಿರದ ಪ್ರತಿಸ್ಪರ್ಧಿಯಾಗಿದ್ದ ಸಿಪಿಐನ ಪಿಪಿ ಸುನೀರ್ 2,74,597 ಮತಗಳನ್ನು ಪಡೆದಿದ್ದರು. ಕೇರಳದಲ್ಲಿ ಏಪ್ರಿಲ್ 26ರಂದು ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...