ರಾಹುಲ್ ಗಾಂಧಿಗೆ ಪಾಸ್‌ಪೋರ್ಟ್ ಪಡೆಯಲು ಕೋರ್ಟ್ ಅನುಮತಿ

Date:

  • ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದ ಸುಬ್ರಮಣಿಯನ್‌ ಸ್ವಾಮಿ
  • 3 ವರ್ಷಗಳ ಅವಧಿಗೆ ಪಾಸ್‌ಪೋರ್ಟ್ ಪಡೆಯಲು ನ್ಯಾಯಾಲಯ ಅನುಮತಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮೂರು ವರ್ಷಗಳ ನವೀಕರಣದೊಂದಿಗೆ ಸಾಮಾನ್ಯ ಪಾಸ್‌ಪೋರ್ಟ್‌ ಪಡೆಯಲು ದೆಹಲಿ ನ್ಯಾಯಾಲಯ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನೀಡಿದೆ.

ಸಂಸದ ಸ್ಥಾನದಿಂದ ಅನರ್ಹರಾದ ಬಳಿಕ ರಾಹುಲ್ ಗಾಂಧಿ ಅವರು ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್‌ ಅನ್ನು ವಾಪಸ್ ನೀಡಿದ್ದರು. ಬಳಿಕ ತಾವು ಪಾಸ್‌ಪೋರ್ಟ್‌ ಹೊಂದಲು ನಿರಪೇಕ್ಷಣಾ ಪತ್ರ ಬಯಸಿ ನ್ಯಾಯಾಲಯದ ಮೊರೆ ಹೋಗಿದ್ದರು.

10 ವರ್ಷದ ಬದಲಿಗೆ ಮೂರು ವರ್ಷಗಳ ಸಾಮಾನ್ಯ ಪಾಸ್‌ಪೋರ್ಟ್‌ ಹೊಂದಲು ನ್ಯಾಯಾಲಯ ಅನುಮತಿ ನೀಡಿದೆ ಎಂದು ರಾಹುಲ್ ಗಾಂಧಿ ಪರ ವಕೀಲರು ತಿಳಿಸಿದ್ಧಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನ್ಯಾಷನಲ್ ಹೆರಾಲ್ಡ್ ಪ್ರಕರಣ ಹಿನ್ನೆಲೆ ರಾಹುಲ್ ಗಾಂಧಿ ಅವರು ಪಾಸ್‌ಪೋರ್ಟ್ ಹೊಂದಲು ನ್ಯಾಯಾಲಯದ ಅನುಮತಿ ಪಡೆಯಬೇಕಿತ್ತು. ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ರಾಹುಲ್ ಗಾಂಧಿ ಅವರಿಗೆ ಸಾಮಾನ್ಯ ಪಾಸ್‌ಪೋರ್ಟ್ ನೀಡುವುದನ್ನು ವಿರೋಧಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಮಣಿಪುರ ಹಿಂಸಾಚಾರ ಕೊನೆಗೊಳಿಸಲು ಭಾರತಕ್ಕೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯುಕ್ತರ ಒತ್ತಾಯ

ರಾಹುಲ್ ಗಾಂಧಿ ಅವರು ಪಾಸ್‌ಪೋರ್ಟ್‌ ಹೊಂದಲು ನ್ಯಾಯಾಲಯದಿಂದ ನಿರಪೇಕ್ಷಣಾ ಪತ್ರ ಕೋರಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಗೆ ತಮ್ಮ ಪ್ರತಿಕ್ರಿಯೆ ಸಲ್ಲಿಸುವಂತೆ ಕಳೆದ ಬುಧವಾರ ಸೂಚಿಸಿತ್ತು. ಶುಕ್ರವಾರದೊಳಗೆ ತಮ್ಮ ಪ್ರತಿಕ್ರಿಯೆ ಸಲ್ಲಿಸುವಂತೆ ಸ್ವಾಮಿ ಅವರಿಗೆ ನ್ಯಾಯಾಲಯ ಗಡುವು ವಿಧಿಸಿತ್ತು.

ಶುಕ್ರವಾರದ ವಿಚಾರಣೆ ವೇಳೆ ಮೆಟ್ರೋಪಾಲಿಟನ್ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಮೂರ್ತಿ ವೈಭವ್ ಮೆಹ್ತಾ ಅವರು ರಾಹುಲ್ ಗಾಂಧಿ ಅವರಿಗೆ ಪ್ರಯಾಣ ಮಾಡುವ ಮೂಲಭೂತ ಹಕ್ಕು ಇದೆ ಎಂದು ಅಭಿಪ್ರಾಯಪಟ್ಟರು. ಇದಕ್ಕೆ ನಾವು ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು ಹೇಳಿದ ನ್ಯಾಯಮೂರ್ತಿಗಳು ತೀರ್ಪು ಪ್ರಕಟಿಸಿದ್ದಾರೆ.

ನ್ಯಾಷನಲ್‌ ಹೆರಾಲ್ಡ್ ಪ್ರಕರಣ ಸಂಬಂಧ ಡಿಸೆಂಬರ್ 2015ರಲ್ಲಿ ರಾಹುಲ್ ಗಾಂಧಿ ಅವರಿಗೆ ಜಾಮೀನು ನೀಡುವ ವೇಳೆಯಲ್ಲೂ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ರಾಹುಲ್ ಗಾಂಧಿ ಅವರ ಪ್ರಯಾಣಕ್ಕೆ ನಿರ್ಬಂಧ ಹೇರುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ, ನ್ಯಾಯಾಲಯವು ಸ್ವಾಮಿ ಅವರ ಮನವಿಯನ್ನು ತಿರಸ್ಕರಿಸಿ, ರಾಹುಲ್ ಗಾಂಧಿ ಅವರ ಪ್ರಯಾಣಕ್ಕೆ ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು ಹೇಳಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ ಟಿಕೆಟ್‌ | ಬಣ ಬಡಿದಾಟಕ್ಕೆ ಪೂರ್ಣವಿರಾಮವಿಟ್ಟ ಸಿಎಂ, ಡಿಸಿಎಂ; ಅಭ್ಯರ್ಥಿ ಯಾರು?

ಕೋಲಾರ ಟಿಕೆಟ್‌ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಉಂಟಾಗಿದ್ದ ಬಣಗಳ ಬಡಿದಾಟವನ್ನು...

ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್...

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ...

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...