ಬ್ರೇಕಿಂಗ್ | ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣ; ರಾಹುಲ್​ ಗಾಂಧಿಗೆ ಜಾಮೀನು

Date:

ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ಬಿಜೆಪಿ ದಾಖಲಿಸಿದ್ದ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಗೆ ಜಾಮೀನು ದೊರೆತಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ನೀಡಿದೆ.

- Advertisement -

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ‘40% ಸರ್ಕಾರ’ ಎಂದು ಅಭಿಯಾನ ನಡೆಸಿತ್ತು. ಅಭಿಯಾನ ನಡೆಸಿದ್ದಕ್ಕಾಗಿ ತಮ್ಮ ಪಕ್ಷದ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ದೂರು ದಾಖಲಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ ಜಾಮೀನು ನೀಡಿದೆ. ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಿದೆ. ರಾಹುಲ್‌ ಅವರ ಜಾಮೀನಿಗೆ ಮಾಜಿ ಸಂಸದ ಡಿ.ಕೆ ಸುರೇಶ್ ಶ್ಯೂರಿಟಿ ನೀಡಿದ್ದಾರೆ.

ಸುಲ್ತಾನ್‌ಪುರ ನ್ಯಾಯಾಲಯದಲ್ಲೂ ವಿಚಾರಣೆ ಮುಂದೂಡಿಕೆ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ರಾಹುಲ್‌ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನಷನಷ್ಟ ಪ್ರಕರಣದ ವಿಚಾರಣೆಯನ್ನು ಸುಲ್ತಾನ್‌ಪುರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೂನ್ 18ಕ್ಕೆ ಮುಂದೂಡಿದೆ.

2018ರ ಮೇ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ರಾಹುಲ್‌ ಗಾಂಧಿ ಅವರಿಗೆ ಈಗಾಗಲೇ ಫೆಬ್ರವರಿ 20ರಂದು ಜಾಮೀನು ದೊರೆತಿದೆ.

2005ರಲ್ಲಿ ಅಮಿತ್‌ ಶಾ ಅವರು ಗುಜರಾತ್‌ ಗೃಹ ಸಚಿವರಾಗಿದ್ದಾಗ ನಕಲಿ ಎನ್‌ಕೌಂಟರ್‌ ಮಾಡಿಸಿದ್ದರು ಎಂದು ರಾಹುಲ್ ಅರೋಪಿಸಿದ್ದರು. ಅಮಿತ್ ಶಾ ಅವರನ್ನು ರಾಹುಲ್‌ ‘ಕೊಲೆ ಆರೋಪಿ’ ಎಂದು ಕರೆದಿದ್ದರು. ಆದರೆ, ರಾಹುಲ್ ಆರೋಪಕ್ಕೂ ನಾಲ್ಕು ವರ್ಷ ಮೊದಲೇ ಮುಂಬೈನ ಸಿಬಿಐ ವಿಶೇಷ ನ್ಯಾಯಾಲಯವು ಅಮಿತ್‌ ಶಾ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...