‘ರಾಹುಲ್‌ ಗಾಂಧಿ’ ಸರ್ವಾಧಿಕಾರ ವಿರುದ್ಧದ ಒಂದು ಕ್ರಾಂತಿ: ನವಜೋತ್‌ ಸಿಂಗ್‌ ಸಿಧು

Date:

  • 10 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನವಜೋತ್‌ ಸಿಂಗ್ ಸಿಧು
  • ಕಳೆದ ವರ್ಷ ಮೇ 20ರಂದು ಪಟಿಯಾಲ ನ್ಯಾಯಾಲಯಕ್ಕೆ ಶರಣಾಗಿದ್ದರು

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ದೇಶದಲ್ಲಿನ ಸರ್ವಾಧಿಕಾರದ ವಿರುದ್ಧದ ಒಂದು ಕ್ರಾಂತಿಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ನವಜೋತ್‌ ಸಿಂಗ್‌ ಸಿಧು ಶನಿವಾರ (ಏಪ್ರಿಲ್‌ 2) ಹೇಳಿದ್ದಾರೆ.

ರಸ್ತೆಯಲ್ಲಿ ರೋಷಾವೇಶ ತೋರಿದ 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲ ಜೈಲು ಶಿಕ್ಷೆ ಅನುಭವಿಸಿದ 10 ತಿಂಗಳ ನಂತರ ಪಂಜಾಬ್‌ನ ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ಸನ್ನಡತೆಯ ಆಧಾರದಲ್ಲಿ ಶನಿವಾರ ಜೈಲಿನಿಂದ ಬಿಡುಗಡೆಯಾದರು.

ಜೈಲಿನಿಂದ ಹೊರಬಂದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನವಜೋತ್ ಸಿಂಗ್‌ ಸಿಧು, “ನನ್ನನ್ನು ಮಧ್ಯಾಹ್ನದ ವೇಳೆಗೆ ಬಿಡುಗಡೆ ಮಾಡಬೇಕಿತ್ತು. ಆದರೆ, ಜೈಲು ಅಧಿಕಾರಿಗಳು ತಡಮಾಡಿದ್ದಾರೆ. ಮಾಧ್ಯಮಗಳು ಹೊರಹೋಗಲೆಂದು ಅವರು ಕಾಯುತ್ತಿದ್ದರು” ಎಂದು ಸಿಧು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತಾನು ಶನಿವಾರ ಮಧ್ಯಾಹ್ನ ಹೊತ್ತಿಗೆ ಬಿಡುಗಡೆಯಾಗುತ್ತೇನೆ. ಜೈಲಿನ ಹೊರಗೆ ಮಾಧ್ಯಮಗೋಷ್ಠಿ ನಡೆಸುತ್ತೇನೆ ಎಂದು ನವಜೋತ್‌ ಸಿಂಗ್ ಸಿಧು ಶುಕ್ರವಾರ ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ವೃತ್ತಿಯಲ್ಲಿ ಭಿಕ್ಷುಕನಾದರೂ ಪತ್ನಿ ಸಲಹುವುದು ಪತಿ ಕರ್ತವ್ಯ ಎಂದ ಪಂಜಾಬ್-ಹರಿಯಾಣ ಹೈಕೋರ್ಟ್

“ದೇಶದಲ್ಲಿ ಪ್ರಜಾಪ್ರಭುತ್ವ ಸರಪಳಿಗಳಲ್ಲಿ ಬಂಧಿಯಾಗಿದೆ. ಈ ದೇಶದಲ್ಲಿ ಸರ್ವಾಧಿಕಾರ ಬಂದಾಗಲೆಲ್ಲಾ ಒಂದು ಕ್ರಾಂತಿಯೂ ಬಂದಿದೆ. ಈ ಬಾರಿ ರಾಹುಲ್ ಗಾಂಧಿ ಅವರ ರೂಪದಲ್ಲಿ ಕ್ರಾಂತಿ ಆಗಮಿಸಿದೆ. ಅವರು ಕೇಂದ್ರ ಬಿಜೆಪಿ ಸರ್ಕಾರವನ್ನು ಸಮರ್ಥವಾಗಿ ಎದುರಿಸಲಿದ್ದಾರೆ” ಎಂದು ಹೇಳಿದ್ದಾರೆ.

ನವಜೋತ್ ಸಿಂಗ್ ಸಿಧು ಅವರು 1988ರಲ್ಲಿ ನಡೆಸಿದ್ದ ಹಲ್ಲೆಯಲ್ಲಿ 65 ವರ್ಷದ ಗುರ್ನಾಮ್ ಸಿಂಗ್ ಎಂಬುವವರು ಮೃತಪಟ್ಟಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೊರ್ಟ್, ಸಿಧು ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಅನುಸಾರ ಸಿಧು ಅವರು ಕಳೆದ ವರ್ಷ ಮೇ 20ರಂದು ಪಟಿಯಾಲ ನ್ಯಾಯಾಲಯಕ್ಕೆ ಶರಣಾಗಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

“ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು” ಎಂಬ ಘೋಷಣೆಯನ್ನು ನರೇಂದ್ರ ಮೋದಿಯವರು...

ನೇಹಾ ಕನ್ನಡ ನಾಡಿನ ಮಗಳು, ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಬೇಡ: ಸುರ್ಜೇವಾಲ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ...

ಕೋಟಕ್ ಮಹೀಂದ್ರ ಬ್ಯಾಂಕ್‌ನ ಹೊಸ ಗ್ರಾಹಕರ ಸೇರ್ಪಡೆ, ಕ್ರೆಡಿಟ್ ಕಾರ್ಡ್‌ಗೆ ನಿಷೇಧವೇರಿದ ಆರ್‌ಬಿಐ

ಕೋಟಕ್‌ ಮಹೀಂದ್ರ ಬ್ಯಾಂಕ್‌ ನ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ಗಳ ಮೂಲಕ...

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು...