ಶಿವಮೊಗ್ಗ, ರಾಯಚೂರು ಕ್ಷೇತ್ರದಲ್ಲಿ ಇಂದು ರಾಹುಲ್‌ ಗಾಂಧಿ ಪ್ರಚಾರ

Date:

ಎಐಸಿಸಿ ನಾಯಕ ರಾಹುಲ್ ಗಾಂಧಿ ಇಂದು (ಮೇ 2) ರಾಜ್ಯಕ್ಕೆ ಆಗಮಿಸಲಿದ್ದು ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.

- Advertisement -

ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ರಾಹುಲ್ ಗಾಂಧಿ ಗುರುವಾರ ಮಧ್ಯಾಹ್ನ 12ಕ್ಕೆ ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್) ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

“ರಾಹುಲ್‌ ಗಾಂಧಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕಾರ್ಯದರ್ಶಿ ಮಯೂರ್‌ ಜಯಕುಮಾರ್ ಭಾಗವಹಿಸಲಿದ್ದಾರೆ. ಸಭೆ ಸಿದ್ಧತೆ ಪೂರ್ಣಗೊಂಡಿದೆ” ಎಂದು
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ರಾಯಚೂರಲ್ಲಿ ರಾಹುಲ್‌ ಗಾಂಧಿ

ಶಿವಮೊಗ್ಗ ಸಭೆ ಮುಗಿಸಿಕೊಂಡು ರಾಹುಲ್‌ ಗಾಂಧಿ ಅವರು ಸಂಜೆ 4ಗಂಟೆಗೆ ನಡೆಯುವ ರಾಯಚೂರು ಲೋಕಸಭಾ ಎಸ್‌.ಟಿ.ಮೀಸಲು ಕ್ಷೇತ್ರದ ಅಭ್ಯರ್ಥಿ ಜಿ.ಕುಮಾರನಾಯಕ ಪರ ಪ್ರಚಾರ ನಡೆಸಲಿದ್ದಾರೆ.

“ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಗಮಿಸುತ್ತಿದ್ದಾರೆ. ರಾಹುಲ್‌ ಗಾಂಧಿ ಅವರು ವಿಶೇಷ ವಿಮಾನದ ಮೂಲಕ ಬಳ್ಳಾರಿ ಜಿಲ್ಲೆಯ ಜಿಂದಾಲ್‌ಗೆ ಬಂದು ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ರಾಯಚೂರಿಗೆ ಬರಲಿದ್ದಾರೆ” ಎಂದು ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಬೋಸರಾಜು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ ‘ಮಹಾಭಿಯೋಗ’ ನಡೆದಿದೆಯೇ?

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ...

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...

ರಾಜ್ಯದಲ್ಲಿ ಮಿತಿಮೀರಿದ ದಲಿತರ ಮೇಲಿನ ದೌರ್ಜನ್ಯ: ಕಾನೂನು ಸುವ್ಯವಸ್ಥೆ ವೈಫಲ್ಯದ ವಿರುದ್ಧ ಮುಖಂಡರ ಗುಡುಗು

ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ದಲಿತರ ಮೇಲಿನ ಹಲ್ಲೆ, ದೌರ್ಜನ್ಯ, ಮಹಿಳೆಯರ...