ಲೈಂಗಿಕ ಕಿರುಕುಳ ಸಂತ್ರಸ್ತೆಯರ ಕುರಿತು ಭಾಷಣ; ಮಾಹಿತಿಗಾಗಿ ರಾಹುಲ್ ನಿವಾಸಕ್ಕೆ ಪೊಲೀಸರ ಭೇಟಿ

Date:

ಈ ವರ್ಷದ ಜನವರಿಯಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮಾಡಿದ ಭಾಷಣದಲ್ಲಿ, ಲೈಂಗಿಕ ಕಿರುಕುಳ ಸಂತ್ರಸ್ತೆಯರ ಕುರಿತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೀಡಿರುವ ಹೇಳಿಕೆಯ ಕುರಿತು ವಿವರಪಡೆಯಲು ಅವರ ದೆಹಲಿ ನಿವಾಸಕ್ಕೆ ಪೊಲೀಸರು ಆಗಮಿಸಿದ್ದಾರೆ.

ದೆಹಲಿಯ ವಿಶೇಷ ಆಯುಕ್ತ ಸಾಗರ್ ಪ್ರೀತ್ ಹೂಡ ನೇತೃತ್ವದಲ್ಲಿ ಪೊಲೀಸರ ತಂಡ ರಾಹುಲ್ ಗಾಂಧಿ ನಿವಾಸಕ್ಕೆ ಆಗಮಿಸಿದ್ದಾರೆ. ಎರಡು ದಿನಗಳ ಹಿಂದೆ ಪೊಲೀಸರು ಅವರಿಗೆ ನೋಟಿಸ್ ನೀಡಿದ್ದರು.

“ಶ್ರೀನಗರದಲ್ಲಿ ಜನವರಿ 30ರಂದು ಭಾರತ್ ಜೋಡೋ ಯಾತ್ರೆ ವೇಳೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಅನೇಕ ಮಹಿಳೆಯರನ್ನು ರಾಹುಲ್ ಗಾಂಧಿ ಭೇಟಿ ಮಾಡಿದ್ದರು. ನಾವು ಈ ಕುರಿತು ರಾಹುಲ್ ಗಾಂಧಿ ಅವರ ಬಳಿ ಹೇಳಿಕೆ ಪಡೆಯಲು ಬಂದಿದ್ದೇವೆ. ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲು ಅವರಿಂದ ವಿವರಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ” ಎಂದು ದೆಹಲಿಯ ವಿಶೇಷ ಆಯುಕ್ತ ಸಾಗರ್ ಪ್ರೀತ್ ಹೂಡ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್ಗಳನ್ನು ಪರಿಗಣಿಸಿರುವ ದೆಹಲಿ ಪೊಲೀಸರು, ಈ ಸಂಬಂಧ ಪ್ರಶ್ನಾವಳಿ ಸಿದ್ಧಪಡಿಸಿ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಿದೆ.

ಭಾರತ್ ಜೋಡೋ ಯಾತ್ರೆ ವೇಳೆಯ ತಮ್ಮ ಅನುಭವ ಹಾಗೂ ಮಹಿಳೆಯರು ಎದುರಿಸಿದ ಸಮಸ್ಯೆಗಳ ಬಗ್ಗೆ ಉಲ್ಲೇಖಿಸುವಾಗ, ಬಾಲಕಿಯೊಬ್ಬರು ಎದುರಿಸಿದ ದೌರ್ಜನ್ಯಗಳ ಬಗ್ಗೆ ತಮ್ಮ ಬಳಿ ಮಾತನಾಡಿದ್ದರು ಎಂದು ರಾಹುಲ್ ತಿಳಿಸಿದ್ದರು.

“ಒಂದು ನಿರ್ದಿಷ್ಟ ಪ್ರಕರಣದಲ್ಲಿ, ನಾನು ಬಾಲಕಿಯೊಬ್ಬರನ್ನು ಪ್ರಶ್ನಿಸಿದ್ದೆ. ಆಕೆ ತನ್ನ ಮೇಲೆ ಅತ್ಯಾಚಾರ ನಡೆದ ವಿವರ ಹೇಳಿದ್ದರು. ‘ಪೊಲೀಸರನ್ನು ಕರೆಯೋಣವೇ’ ಎಂದು ಆಕೆಯನ್ನು ಕೇಳಿದೆ. ‘ಪೊಲೀಸರನ್ನು ಕರೆಯಬೇಡಿ, ನನ್ನ ಮರ್ಯಾದೆ ಹೋಗುತ್ತದೆ’ ಎಂದು ಆಕೆ ಹೇಳಿದ್ದಳು” ಎಂಬುದಾಗಿ ರಾಹುಲ್ ಗಾಂಧಿ ಹೇಳಿದ್ದರು.

ಪೊಲೀಸರ ಹಿಂದೆ ಅಡಗಿರುವ ಸರ್ಕಾರ; ಕಾಂಗ್ರೆಸ್ ಆಕ್ರೋಶ

ಪ್ರಧಾನಿ ಮೋದಿ ಮತ್ತು ಅದಾನಿ ನಡುವಿನ ಸಂಬಂಧದ ಕುರಿತಾದ ರಾಹುಲ್ ಗಾಂಧಿ ಅವರ ಪ್ರಶ್ನೆಗಳಿಂದ ಸರ್ಕಾರ ಕಂಗಾಲಾಗಿ ಪೊಲೀಸರ ಹಿಂದೆ ಅಡಗಿದೆ. ಭಾರತ್ ಜೋಡೋ ಯಾತ್ರೆ ಮುಗಿದು 45 ದಿನಗಳ ಬಳಿಕ ದೆಹಲಿ ಪೊಲೀಸರು, ರಾಹುಲ್ ಗಾಂಧಿ ಅವರು ತಮ್ಮನ್ನು ಭೇಟಿ ಮಾಡಿದ ಹಾಗೂ ತಾವು ಎದುರಿಸಿದ ಕಿರುಕುಳ ಹಾಗೂ ಹಿಂಸಾಚಾರದ ಬಗ್ಗೆ ಮಾತನಾಡಿದ್ದ ಮಹಿಳೆಯರ ವಿವರ ನೀಡುವಂತೆ ನೋಟಿಸ್ ಮೂಲಕ ಕೇಳಿದ್ದಾರೆ” ಎಂದು ಕಾಂಗ್ರೆಸ್ ಟ್ವಿಟ್ಟರ್ನಲ್ಲಿ ಟೀಕಿಸಿದೆ.
ಕಾನೂನಿಗೆ ಅನುಗುಣವಾಗಿ ನೋಟಿಸ್ಗೆ ಪ್ರತಿಕ್ರಿಯೆ ನೀಡಲಾಗುವುದು ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. “ಸರ್ಕಾರ ಆತಂಕಕ್ಕೆ ಒಳಗಾಗಿದೆ ಮತ್ತು ಪ್ರಜಾಪ್ರಭುತ್ವ, ಮಹಿಳಾ ಸಬಲೀಕರಣ, ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ವಿರೋಧ ಪಕ್ಷದ ಪಾತ್ರವನ್ನು ದುರ್ಬಲಗೊಳಿಸುವ ಅವರ ಇತ್ತೀಚಿನ ಪ್ರಯತ್ನಗಳಿಗೆ ಈಗಿನ ನೋಟಿಸ್ ಮತ್ತೊಂದು ಪುರಾವೆ. ಚಿತ್ರಗಳೇ ಎಲ್ಲ ಕಥೆ ಹೇಳುತ್ತವೆ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

Suprabha
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...

ಪ್ರೊ. ಅರ್ನಾಲ್ಡ್ ಡಿಕ್ಸ್ : ಉತ್ತರಾಖಂಡ ಸುರಂಗ ರಕ್ಷಣಾ ಕಾರ್ಯಾಚರಣೆಯ ಹಿಂದಿನ ಶಕ್ತಿ

ಉತ್ತರಾಖಂಡನ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನಗಳ ಕಾಲ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು...

ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ...

ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಸ್ಥಾಪನೆ: ಸಿದ್ದರಾಮಯ್ಯ ಭರವಸೆ

ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಹೇಳಿಕೆ ಸ್ಥಳದ ಅಭಾವವಿರುವ...