ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆಗಸ್ಟ್ 8ಕ್ಕೆ ಮುಂದೂಡಿಕೆ: ಡಿಸಿಎಂ ಡಿ ಕೆ ಶಿವಕುಮಾರ್

Date:

“ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಪ್ರತಿಭಟನಾ ಸಭೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

- Advertisement -

ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಸೋಮವಾರ ಮಾತನಾಡಿದ ಶಿವಕುಮಾರ್ ಅವರು ಈ ವಿಚಾರ ತಿಳಿಸಿದರು. “ಶಿಬು ಸೊರೇನ್ ಬುಡಕಟ್ಟು ಸಮುದಾಯದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷದ ಬಹುಕಾಲದ ಮೈತ್ರಿ ನಾಯಕರು. ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಶಿಬು ಸೊರೇನ್ ಅವರಿಗೆ ಗೌರವ ಸಲ್ಲಿಸಬೇಕು. ಅವರ ಅಂತ್ಯಕ್ರಿಯೆ ಮಂಗಳವಾರ (ನಾಳೆ) ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆತುರದಲ್ಲಿ ಮಾಡುವುದು ಬೇಡ ಎಂಬ ಕಾರಣಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ. ಶೋಕಾಚರಣೆ ಆಚರಿಸುವ ದಿನ ದೇಶಕ್ಕೆ ಒಂದು ಸಂದೇಶ ನೀಡುವ ಕಾರ್ಯಕ್ರಮ ಬೇಡ ಎಂದು ನಿರ್ಧರಿಸಿದ್ದೇವೆ. ಈ ವಿಚಾರವಾಗಿ ನಮ್ಮ ನಾಯಕರ ಜೊತೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಇದನ್ನು ಓದಿದ್ದೀರಾ? ಬಿಜೆಪಿಯ ಮತಗಳ್ಳತನವನ್ನು ಜನರ ಗಮನಕ್ಕೆ ತರಲು ರಾಹುಲ್‌ ಗಾಂಧಿ ಬರುತ್ತಿದ್ದಾರೆ: ಡಿ ಕೆ ಶಿವಕುಮಾರ್

“ಮಂಗಳವಾರದ ಕಾರ್ಯಕ್ರಮಕ್ಕೆ ಮಾಡಿಕೊಂಡಿರುವ ಸಿದ್ಧತೆ ಹಾಗೇ ಮುಂದುವರಿಸಿಕೊಂಡು ಹೋಗಬೇಕು ಎಂದು ಪಕ್ಷದ ನಾಯಕರು, ಶಾಸಕರು, ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. ಆಗಸ್ಟ್ 8ರಂದು ಅದೇ ಸ್ಥಳದಲ್ಲಿ, ಅದೇ ಸಮಯಕ್ಕೆ ನಡೆಯಲಿದೆ. ನಮ್ಮ ಕಾರ್ಯಕರ್ತರು, ಮುಖಂಡರು ಹಾಗೂ ಮತದಾರರು ಈ ಹೋರಾಟದಲ್ಲಿ ಭಾಗವಹಿಸಲು ಬಹಳ ಉತ್ಸುಕರಾಗಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿ ಅವರ ಮಾಧ್ಯಮಗೋಷ್ಠಿಯನ್ನು ಕೂಡ ಮುಂದೂಡಲಾಗಿದ್ದು, ನಾಳೆ ಅಂತ್ಯಕ್ರಿಯೆ ನಂತರ ಇದರ ಬಗ್ಗೆ ಚರ್ಚಿಸಿ ಮಾಹಿತಿಯನ್ನು ಅವರು ತಿಳಿಸಲಿದ್ದಾರೆ” ಎಂದು ತಿಳಿಸಿದರು.

“ಶಿಬು ಸೊರೇನ್ ಅವರು ಕಷ್ಟ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿದ್ದಾರೆ. ನರಸಿಂಹ ರಾವ್ ಅವರ ಕಾಲ ಸೇರಿದಂತೆ ಎಲ್ಲಾ ಸಮಯದಲ್ಲೂ ಕಾಂಗ್ರೆಸ್ ಪಕ್ಷದ ಪರ ಬಂಡೆಯಂತೆ ನಿಂತಿದ್ದರು. ಪಕ್ಷದ ಸಿದ್ಧಾಂತದ ಜೊತೆ ನಿಂತು ನಮ್ಮ ಸರ್ಕಾರಕ್ಕೆ ಅವರು, ಅವರ ಸರ್ಕಾರಕ್ಕೆ ನಾವು ಬೆಂಬಲವಾಗಿ ನಿಂತಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವು ಪ್ರಾರ್ಥಿಸುತ್ತೇವೆ” ಎಂದರು.

“ಆಗಸ್ಟ್ 8ರಂದು ವರಮಹಾಲಕ್ಷ್ಮಿ ಹಬ್ಬವಿದ್ದರೂ ಪಕ್ಷದ ಕೆಲಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಹಬ್ಬದ ಪ್ರಯುಕ್ತ ಪೂಜೆ ಮಾಡಲು ಹಾಗೂ ಪ್ರಾರ್ಥನೆ ಮಾಡಲು ನಾವು ಯಾರಿಗೂ ಅಡ್ಡಿಪಡಿಸುವುದಿಲ್ಲ. ಪಕ್ಷದ ಹೋರಾಟಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಮುಖಂಡರು, ಕಾರ್ಯಕರ್ತರಲ್ಲಿ ಮಾಧ್ಯಮಗಳ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ಮತ್ತೊಮ್ಮೆ ಶಾಸಕಾಂಗ ಪಕ್ಷದ ಸಭೆ ಕರೆಯಲು ನಮ್ಮ ನಾಯಕರು ಮಾರ್ಗದರ್ಶನ ನೀಡಿದ್ದು, ಸಿಎಂ ಜೊತೆ ಚರ್ಚೆ ಮಾಡುತ್ತೇವೆ” ಎಂದು ಹೇಳಿದರು.

ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿಯವರು ಚುನಾವಣಾ ಆಯೋಗದ ಪರವಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟಿಸುವವರು, ಟೀಕಿಸುವವರನ್ನು ಸ್ವಾಗತಿಸುತ್ತೇವೆ. ಅವರು ಏನು ಹೇಳಬೇಕೋ ಹೇಳಲಿ. ನೀವುಗಳು ಹೇಳಿದಂತೆ ಅವರು ಚುನಾವಣಾ ಆಯೋಗವನ್ನು ಸಮರ್ಥಿಸಿಕೊಂಡು ಪ್ರತಿಭಟಿಸುತ್ತಿದ್ದಾರೆ. ಚುನಾವಣಾ ಆಯೋಗ ಸರ್ಕಾರದ ಭಾಗವಾಗಿದೆ. ಹೀಗಾಗಿ ಇದನ್ನು ಮಾಡುತ್ತಿದ್ದಾರೆ. ಚುನಾವಣಾ ಆಯೋಗ ನಿಷ್ಪಕ್ಷಪಾತ ಹಾಗೂ ನ್ಯಾಯಪೀಠ ಸ್ಥಾನದಲ್ಲಿ ಇರಬೇಕು. ನ್ಯಾಯಪೀಠದಿಂದ ಅನ್ಯಾಯ ಆಗಬಾರದು. ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ನಮ್ಮ ಆಶಯ” ಎಂದರು.

“ವಿಧಾನಸಭೆ ಚುನಾವಣೆ ಸಮಯದಲ್ಲೇ ಮಹದೇವಪುರ ಕ್ಷೇತ್ರದ ನಮ್ಮ ಅಭ್ಯರ್ಥಿ ಸೂಕ್ತ ದಾಖಲೆಯೊಂದಿಗೆ ದೂರು ನೀಡಿದ್ದರು. ಅವರ ದೂರಿಗೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಈ ವಿಚಾರವಾಗಿ ಅಧ್ಯಯನ ನಡೆಸಿದ ನಂತರ ಮತ್ತಷ್ಟು ಅಂಶಗಳು ಬೆಳಕಿಗೆ ಬಂದಿವೆ. ಈ ವಿಚಾರ ತಡವಾಗಿ ಬಹಿರಂಗವಾಗುತ್ತಿರಬಹುದು, ಹಾಗೆಂದು ನಾವು ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ. ನಮ್ಮ ಅಧ್ಯಯನದ ಅಂಶಗಳನ್ನು ಸಾರ್ವಜನಿಕರ ಮುಂದೆ ಇಡುತ್ತೇವೆ. ನಂತರ ಯಾರು ಸರಿ, ಯಾರು ತಪ್ಪು ಎಂಬುದನ್ನು ಜನ ತೀರ್ಮಾನ ಮಾಡಲಿ” ಎಂದು ತಿಳಿಸಿದರು.

ಶಾಸಕಾಂಗ ಸಭೆ ಬಗ್ಗೆ ಕೇಳಿದಾಗ, “ಈ ಕಾರ್ಯಕ್ರಮದ ಉದ್ದೇಶಕ್ಕೆ ಬೆಂಗಳೂರಿಗೆ ಆಗಮಿಸುತ್ತಿರುವ ಶಾಸಕರ ಜೊತೆ ಚರ್ಚೆ ಮಾಡಲು ನಮ್ಮ ನಾಯಕರು ಹೇಳಿದ್ದಾರೆ” ಎಂದು ಸ್ಪಷಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡ ಬೌದ್ಧಿಕ ಲೋಕದ ‘ಪರಸ್ಪರ ಮೆಚ್ಚುಗೆ ಸಮಾಜ’ಕ್ಕೆ ಸವಾಲಾಗಿದ್ದ ಕೆವಿಎನ್

ರಾಜಕೀಯ, ಸಂಸ್ಕೃತಿ, ಜನಪದ, ಭಾಷೆ, ಕಾವ್ಯ, ಸಾಹಿತ್ಯ, ಸಿನಿಮಾ ಹೀಗೆ ಯಾವುದೇ...

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ...

ನಮ್ಮ ಮೆಟ್ರೋ | ರಾಜ್ಯ Vs ಕೇಂದ್ರ: ಯಾರದ್ದು ಸತ್ಯ, ಯಾರದ್ದು ಸುಳ್ಳು?

ನವೆಂಬರ್‌ 13ರ ಶುಕ್ರವಾರ, ಬೆಂಗಳೂರಿನಲ್ಲಿ ಮೆಟ್ರೋದ ನಾಲ್ಕನೇ ಮಾರ್ಗ 'ಪಿಂಕ್‌ ಲೈನ್‌'ಅನ್ನು...

ಹಳೇ ಮೈಸೂರು | ಕಲ್ಯಾಣದಿಂದ ಬೊಪ್ಪೇಗೌಡನಪುರದವರೆಗೆ: ಜನಪದ ಕಾವ್ಯದ ಬೆಳಕಿನಲ್ಲಿ ಮಂಟೇಸ್ವಾಮಿ

ಒಂದು ಜನಪದ ಕಾವ್ಯ, ನೂರಾರು ವರ್ಷಗಳ ಮೌಖಿಕ ಪರಂಪರೆ, ತಲೆಮಾರುಗಳಿಂದ ತಂಬೂರಿಯ...