ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿಯೂ ಸ್ಪರ್ಧಿಸಿದ್ದು, ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.
ಗುರುವಾರ ಮುಂಜಾನೆ ಬಿಡುಗಡೆಯಾದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ರಾಹುಲ್ ಗಾಂಧಿ ಅವರಿಗೆ ರಾಯ್‌ಬರೇಲಿಯಿಂದ ಟಿಕೆಟ್ ನೀಡಲಾಗಿದೆ.
ಉತ್ತರ ಪ್ರದೇಶದಲ್ಲಿ ರಾಯ್‌ಬರೇಲಿ ಕ್ಷೇತ್ರವು 90ರ ದಶಕದಿಂದಲೂ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. 2019ರಲ್ಲಿ ರಾಹುಲ್ ಅವರ ತಾಯಿ ಸೋನಿಯಾ ಗಾಂಧಿ ಸ್ಪರ್ಧಿಸಿ ಗೆದ್ದಿದ್ದರು. ಇತ್ತೀಚೆಗೆ, ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾಗಿದ್ದು, ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದರು.
ರಾಯ್‌ಬರೇಲಿಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆಂಬ ಚರ್ಚೆಗಳು ನಡೆದಿದ್ದವು. ಆದರೆ, ಕ್ಷೇತ್ರದಲ್ಲಿ ರಾಹುಲ್ ಕಣಕ್ಕಿಳಿದಿದ್ದಾರೆ.
ಕೇರಳದ ವಯನಾಡ್‌ನಲ್ಲಿಯೂ ರಾಹುಲ್ ಗಾಂಧಿ ಸ್ಪರ್ಧಿಸಿದ್ದು, ಈಗಾಗಲೇ ಮತದಾನ ಮುಗಿದಿದೆ.
ಇನ್ನು, ಈ ಹಿಂದೆ ರಾಹುಲ್ ಗಾಂಧಿ ಪ್ರತಿನಿಧಿಸುತ್ತಿದ್ದ ಅಮೇಥಿಯಲ್ಲಿ ಕಾಂಗ್ರೆಸ್ ಮುಖಂಡ ಕೆಎಲ್ ಶರ್ಮಾ ಕಣಕ್ಕಿಳಿದಿದ್ದಾರೆ.