ದೆಹಲಿ| ನನ್ನ ಮತ ಎಎಪಿಗೆ, ಕೇಜ್ರಿವಾಲ್ ವೋಟ್ ಕಾಂಗ್ರೆಸ್‌ಗೆ: ರಾಹುಲ್ ಗಾಂಧಿ

Date:

ದೆಹಲಿ ಲೋಕಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಲಿದ್ದಾರೆ ಮತ್ತು ನನ್ನ ಮತ ಎಎಪಿಗೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ಎಎಪಿ ಮತ್ತು ಕಾಂಗ್ರೆಸ್‌ನ ಮೈತ್ರಿಯ ಸಂಕೇತವಾಗಿರುವ ದೆಹಲಿ ಲೋಕಸಭೆ ಕ್ಷೇತ್ರದಲ್ಲಿ ಇಂಡಿಯಾ ಒಕ್ಕೂಟದ ಅಭ್ಯರ್ಥಿಯನ್ನು ಬೆಂಬಲಿಸಿ ಮಾತನಾಡಿದ ವಯನಾಡು ಸಂಸದ ರಾಹುಲ್ ಗಾಂಧಿ, “ಕೇಜ್ರಿವಾಲ್ ಕಾಂಗ್ರೆಸ್‌ನ ಗುಂಡಿಯನ್ನು ಒತ್ತುತ್ತಾರೆ ಮತ್ತು ನಾನು ಎಎಪಿಯ ಗುಂಡಿಯನ್ನು ಒತ್ತುತ್ತೇನೆ” ಎಂದು ತಿಳಿಸಿದ್ದಾರೆ.

“ರಾಷ್ಟ್ರ ರಾಜಧಾನಿಯ ಎಲ್ಲಾ ಏಳು ಲೋಕಸಭಾ ಸ್ಥಾನಗಳಲ್ಲಿ ತಮ್ಮ ಮೈತ್ರಿಕೂಟದ ಗೆಲುವಿಗಾಗಿ ಕಾಂಗ್ರೆಸ್ ಮತ್ತು ಎಎಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು” ಎಂದು ಒತ್ತಾಯಿಸಿದ ರಾಹುಲ್ ಗಾಂಧಿ, ಭಾರತದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಆಗಮಿಸುವಂತೆ ಪ್ರಧಾನಿ ಮೋದಿಗೆ ಸವಾಲೆಸೆದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪ್ರಧಾನಿ ಮೋದಿ ಅವರೊಂದಿಗೆ ಯಾವಾಗ ಮತ್ತು ಎಲ್ಲಿ ಬೇಕಾದರೂ ಚರ್ಚೆಗೆ ನಾನು ಸಿದ್ಧನಿದ್ದೇನೆ, ಆದರೆ ಅವರು ಬರುವುದಿಲ್ಲ ಎಂದು ನನಗೆ ಖಾತ್ರಿಯಿದೆ” ಎಂದರು.

ಇದನ್ನು ಓದಿದ್ದೀರಾ? ಬಹಿರಂಗ ಚರ್ಚೆಗೆ ಸಿದ್ಧ ಎಂದ ರಾಹುಲ್ ಗಾಂಧಿ; ಬರುವರೇ ಮೋದಿ?

ಇನ್ನು ಇತ್ತೀಚೆಗೆ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ಮದನ್ ಬಿ ಲೋಕುರ್ ಮತ್ತು ಅಜಿತ್ ಪಿ ಶಾ ಮತ್ತು ಹಿರಿಯ ಪತ್ರಕರ್ತ ಎನ್ ರಾಮ್ ಅವರು ಇತ್ತೀಚೆಗೆ ರಾಹುಲ್ ಗಾಂಧಿ ಮತ್ತು ಪ್ರಧಾನಿಗೆ ಪತ್ರ ಬರೆದು ಪ್ರಮುಖ ಲೋಕಸಭೆ ಚುನಾವಣೆ ವಿಷಯಗಳ ಕುರಿತು ಚರ್ಚೆಗೆ ಆಹ್ವಾನಿಸಿದ್ದಾರೆ.

“ಮೋದಿ ಕೇವಲ 22-25 ಜನರಿಗಾಗಿ ಕೆಲಸ ಮಾಡಿದ್ದಾರೆ. ಮೋದಿ ನಿಮಗೆ ಏನು ಮಾಡಿದ್ದಾರೆ ಎಂದು ನಾನು ಚಾಂದಿನಿ ಚೌಕ್‌ನ ಸಣ್ಣ ಉದ್ಯಮಿಗಳನ್ನು ಕೇಳಲು ಬಯಸುತ್ತೇನೆ. ಜಿಎಸ್‌ಟಿ, ನೋಟು ಅಮಾನ್ಯೀಕರಣ ಮತ್ತು ಇತರ ತೆರಿಗೆಗಳು ಸಣ್ಣ ಉದ್ಯಮಗಳ ಮೇಲೆ ಪರಿಣಾಮ ಬೀರಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ?  ಉತ್ತರ ಪ್ರದೇಶ, ದೇಶದ ಪ್ರಗತಿಗೆ ರಾಯ್‌ಬರೇಲಿ ಮತ್ತೊಮ್ಮೆ ಹಾದಿ ತೋರಿಸಬೇಕು: ರಾಹುಲ್ ಗಾಂಧಿ

“ಅದಾನಿ ಮತ್ತು ಅಂಬಾನಿಗಳ ಕೋಟ್ಯಂತರ ರೂಪಾಯಿಗಳನ್ನು ಮನ್ನಾ ಮಾಡಲಾಗಿದೆ. ರೈಲ್ವೇ ಮತ್ತು ಇತರ ಪಿಎಸ್‌ಯುಗಳನ್ನು ಖಾಸಗೀಕರಣಗೊಳಿಸುತ್ತಿದೆ” ಎಂದು ಹೇಳಿದರು.

ಇಂಡಿಯಾ ಒಕ್ಕೂಟದ ಕಾಂಗ್ರೆಸ್ ಮತ್ತು ಎಎಪಿ ನಡುವಿನ ಸೀಟು ಹಂಚಿಕೆಯ ಒಪ್ಪಂದದ ಅಡಿಯಲ್ಲಿ, ದೆಹಲಿಯ ಏಳು ಲೋಕಸಭಾ ಸ್ಥಾನಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಉಳಿದ ನಾಲ್ಕರಲ್ಲಿ ಎಎಪಿ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಲೋಕಸಭೆ ಚುನಾವಣೆಯ ಆರನೇ ಹಂತದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮೇ 25ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

 

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್ | ಡ್ರಗ್ಸ್ ಪ್ರಕರಣದಲ್ಲಿ ಯುವಕನ ಬಂಧನ; ಬಿಜೆಪಿ ಜೊತೆಗೆ ನಂಟು ಆರೋಪ

ಡ್ರಗ್ಸ್ ಪ್ರಕರಣದಲ್ಲಿ ಗುಜರಾತ್‌ನ ಸೂರತ್‌ ಮೂಲಕ ವ್ಯಕ್ತಿಯೊಬ್ಬನನ್ನು ಬಂಧಸಿಲಾಗಿದೆ. ಆತನನ್ನು ವಿಕಾಸ್...

ಕೇಂದ್ರ ಬಜೆಟ್‌-2024 | ಮಹಿಳೆಯರಿಗೆ ನೆರವಾಗುವ ನಾರಿಶಕ್ತಿ ಬಜೆಟ್ ಇದಾಗಿದೆ: ಎಚ್‌ ಡಿ ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ 'ವಿಕಸಿತ ಭಾರತ' ನಿರ್ಮಾಣಕ್ಕೆ ಶಕ್ತಿ...

ಗ್ಯಾಂಗ್‌ಸ್ಟಾರ್ ಜೊತೆ ಓಡಿ ಹೋಗಿದ್ದ ಐಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆ

ಗ್ಯಾಂಗ್​ಸ್ಟರ್​ನನ್ನು ಪ್ರೀತಿಸಿ ಆತನೊಂದಿಗೆ ಓಡಿ ಹೋಗಿದ್ದ ಐಎಎಸ್​ ಅಧಿಕಾರಿ ಪತ್ನಿ ಮನೆಗೆ...

ಕೇಂದ್ರ ಬಜೆಟ್ | ಇನ್ಮುಂದೆ ಯಾವುದು ಅಗ್ಗ? ಯಾವುದು ದುಬಾರಿ?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು ಕೇಂದ್ರ ಬಜೆಟ್...