ಇಂದೋರ್ ಆಸ್ಪತ್ರೆಯಲ್ಲಿ ಇಲಿ ಕಡಿತದಿಂದ ನವಜಾತ ಶಿಶುಗಳ ಸಾವು: ಇದು ‘ಕೊಲೆ’ ಎಂದ ರಾಹುಲ್ ಗಾಂಧಿ

Date:

ಇಂದೋರ್‌ನ ಸರ್ಕಾರಿ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ಇಲಿ ಕಡಿತದಿಂದ ಎರಡು ನವಜಾತ ಶಿಶುಗಳು ಸಾವನ್ನಪ್ಪಿದ್ದು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗುರುವಾರ ಕೇಂದ್ರ ಮತ್ತು ಮಧ್ಯಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆರೋಗ್ಯ ಸೌಲಭ್ಯದಲ್ಲಿನ ಕಳಪೆ ನಿರ್ವಹಣೆ ವಿಚಾರದಲ್ಲಿ ಸರ್ಕಾರವನ್ನು ದೂಷಿಸಿದ ರಾಹುಲ್ “ಇದು ಆಕಸ್ಮಿಕವಾಗಿ ನಡೆದಿರುವುದಲ್ಲ, ಕೊಲೆ” ಎಂದು ಆರೋಪಿಸಿದ್ದಾರೆ.

- Advertisement -

ಇಂದೋರ್ ಆಸ್ಪತ್ರೆಯ ಮಕ್ಕಳ ಶಸ್ತ್ರಚಿಕಿತ್ಸಾ ವಾರ್ಡ್‌ನಲ್ಲಿ ಇಲಿಗಳು ಕಚ್ಚಿದ ಪರಿಣಾಮ ಎರಡು ನವಜಾತ ಶಿಶುಗಳು ಗಾಯಗೊಂಡು ಸಾವನ್ನಪ್ಪಿವೆ. ಆಗಸ್ಟ್ 30-31ರ ಮಧ್ಯರಾತ್ರಿ ನವಜಾತ ಶಿಶುಗಳನ್ನು ಇಲಿಗಳು ಕಚ್ಚಿದ್ದು, ಒಂದು ಮಗುವಿನ ಕೈಗೆ, ಮತ್ತೊಂದು ಮಗುವಿನ ಭುಜಕ್ಕೆ ಗಾಯವಾಗಿದೆ. ಶಿಶುಗಳು ಸಾವನ್ನಪ್ಪಿದ ಬೆನ್ನಲ್ಲೇ ಆಸ್ಪತ್ರೆ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದ್ದು, ತನಿಖೆಯನ್ನು ಪ್ರಾರಂಭಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಮಹಾರಾಷ್ಟ್ರ ಸರ್ಕಾರಿ ಆಸ್ಪತ್ರೆಯಲ್ಲಿ ಮುಂದುವರಿದ ಸಾವಿನ ಸರಣಿ: ಮತ್ತೆ ನಾಲ್ಕು ಮಕ್ಕಳ ಸಹಿತ 7 ಮಂದಿ ಮೃತ್ಯು

ಕೇವಲ 1.2 ಕಿಲೋಗ್ರಾಂಗಳಷ್ಟು ತೂಕವಿದ್ದ ಮಗು ಮಂಗಳವಾರ ಮೃತಪಟ್ಟಿದ್ದು, ಸಾವಿಗೆ ಕಾರಣ ತೀವ್ರ ಸೋಂಕು ಮತ್ತು ಜನಿಸಿದಾಗಲೇ ಇದ್ದ ಕೆಲವು ಸಮಸ್ಯೆಗಳು ಎಂದು ವೈದ್ಯರು ಹೇಳಿಕೊಂಡಿದ್ದಾರೆ. ಎರಡನೇ ಶಿಶು ಬುಧವಾರ ಸಾವನ್ನಪ್ಪಿದೆ. ಇದಾದ ಬೆನ್ನಲ್ಲೇ ನವಜಾತ ಶಿಶುಗಳ ವಾರ್ಡ್‌ನಲ್ಲಿ ಇಲಿಗಳು ಇರುವ ವಿಚಾರದಲ್ಲಿ ಆಸ್ಪತ್ರೆ ಆಡಳಿತದ ನಿರ್ಲಕ್ಷ್ಯದ, ನೈರ್ಮಲ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಎಂಜಿಎಂ ವೈದ್ಯಕೀಯ ಕಾಲೇಜಿನ ಡೀನ್ ಡಾ. ಅರವಿಂದ್ ಘಂಘೋರಿಯಾ ಅವರು ಸುರಕ್ಷತಾ ಶಿಷ್ಟಾಚಾರಗಳ ಉಲ್ಲಂಘನೆಯನ್ನು ಒಪ್ಪಿಕೊಂಡಿದ್ದು, ಈ ವಿಷಯದ ಬಗ್ಗೆ ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಇದು ಆಕಸ್ಮಿಕವಲ್ಲ, ಇದು ನೇರ ಕೊಲೆ. ಈ ಘಟನೆ ಎಷ್ಟು ಭಯಾನಕ, ಅಮಾನವೀಯ ಮತ್ತು ಸಂವೇದನಾರಹಿತವೆಂದರೆ ಈ ವಿಷಯ ಕೇಳಿ ನಾವು ನಡುಗುತ್ತೇವೆ. ಸರ್ಕಾರ ತನ್ನ ಮೂಲಭೂತ ಜವಾಬ್ದಾರಿಯನ್ನು ಪೂರೈಸಲು ವಿಫಲವಾದ ಕಾರಣದಿಂದಾಗಿ ತಾಯಂದಿರು ತಮ್ಮ ಮಗುವನ್ನು ಕಳೆದುಕೊಳ್ಳಬೇಕಾಗಿದೆ” ಎಂದು ಹೇಳಿದ್ದಾರೆ.

“ಆಡಳಿತವು ಯಾವಾಗಲೂ ಹೇಳುವಂತೆ ತನಿಖೆ ನಡೆಯಲಿದೆ ಎಂದು ಹೇಳಿದೆ. ಆದರೆ ನವಜಾತ ಶಿಶುಗಳ ಸುರಕ್ಷತೆಯನ್ನು ನೀವು ಖಚಿತಪಡಿಸಿಕೊಳ್ಳಲು ಸಾಧ್ಯವಾಗದಿದ್ದಾಗ, ಸರ್ಕಾರವನ್ನು ನಡೆಸಲು ನಿಮಗೆ ಯಾವ ಹಕ್ಕಿದೆ ಎಂಬ ಪ್ರಶ್ನೆ ಹುಟ್ಟುತ್ತದೆ. ಪ್ರಧಾನಿ ಮೋದಿ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ನಾಚಿಕೆಯಿಂದ ತಲೆ ತಗ್ಗಿಸಬೇಕು” ಎಂದು ಕಾಂಗ್ರೆಸ್ ನಾಯಕ ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಗೆಯೇ, “ಆರೋಗ್ಯ ಕ್ಷೇತ್ರದಲ್ಲಿನ ಖಾಸಗೀಕರಣದಿಂದಾಗಿ, ಉತ್ತಮ ಚಿಕಿತ್ಸೆ ಶ್ರೀಮಂತರಿಗೆ ಮಾತ್ರ ಸಿಗುತ್ತಿದೆ. ಬಡವರಿಗೆ ಬಿಟ್ಟ ಸರ್ಕಾರಿ ಆಸ್ಪತ್ರೆಗಳು ಸುರಕ್ಷಿತವಾಗಿಲ್ಲ. ಸಾವಿನ ಗುಹೆಗಳಾಗಿವೆ” ಎಂದು ಟೀಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...