- ‘ಪಾಂಗಾಂಗ್ ಸರೋವರಕ್ಕೆ ಹೋಗುತ್ತಿದ್ದೇನೆ’ ಎಂದು ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ
- ಬೈಕ್ ರೈಡ್ ಮಾಡಿಕೊಂಡು ಹೋದ ಕಾಂಗ್ರೆಸ್ ಮುಖಂಡ
ಕಾಂಗ್ರೆಸ್ ಮುಖಂಡ, ಕೇರಳದ ವಯನಾಡ್ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಹೊಸ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದು, ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.
ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಹಂಚಿಕೊಂಡಿರುವ ರಾಹುಲ್ ಗಾಂಧಿ, ‘ಪಾಂಗಾಂಗ್ ಸರೋವರಕ್ಕೆ ಹೋಗುತ್ತಿದ್ದೇನೆ. ಇದು ವಿಶ್ವದ ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದಾಗಿದೆ ಎಂದು ನನ್ನ ತಂದೆ ಹೇಳುತ್ತಿದ್ದರು’ ಎಂದು ಉಲ್ಲೇಖಿಸಿದ್ದಾರೆ.
ರಾಹುಲ್ ಗಾಂಧಿಯವರು ಸದ್ಯ ಲಡಾಕ್ ಪ್ರವಾಸ ಕೈಗೊಂಡಿದ್ದು, ಬೈಕರ್ ಆಗಿ ಕಾಣಿಸಿರುವ ಹೊಸ ಗೆಟಪ್ನ ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ವೈರಲ್ ಆಗಿದೆ.