ಮೋದಿಯ ‘ದ್ರೋಹದ ಗ್ಯಾರಂಟಿ’; ರೈಲ್ವೆ ಪಾಲಿಸಿ ವಿರುದ್ಧ ರಾಹುಲ್ ಕಿಡಿ

Date:

Advertisements

ಕೇಂದ್ರ ರೈಲ್ವೆ ಸಚಿವಾಲಯವು ಹಿರಿಯ ನಾಗರಿಕರಿಗಿದ್ದ ವಿನಾಯತಿಯನ್ನೂ ಕಿತ್ತುಕೊಂಡು 3,700 ಕೋಟಿ ರೂಪಾಯಿ ವಸೂಲಿ ಮಾಡಿದೆ. ಅಷ್ಟು ಮಾತ್ರವಲ್ಲದೆ, ಶ್ರೀಮಂತರನ್ನು ಗಮನದಲ್ಲಿಟ್ಟುಕೊಂಡು ಹೊಸ ರೈಲ್ವೆ ಪಾಲಿಸಿ ರೂಪಿಸಿ, ಜನರಿಂದ ರೈಲು ಪ್ರಯಾಣವನ್ನೂ ಕಸಿದುಕೊಳ್ಳುತ್ತಿದೆ ಎಂದು ಕೇಂದ್ರ ಸರ್ಕಾರದ ರೈಲ್ವೆ ಪಾಲಿಸಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

“ಹವಾಯಿ ಚಪ್ಪಲಿ ಹಾಕಿಕೊಂಡು ನಡೆಯುವ ಬಡ ಜನರು ವಿಮಾನದಲ್ಲಿ ಪ್ರಯಾಣಿಸುವ ಕನಸನ್ನು ಹೊತ್ತಿದ್ದಾರೆ. ಆದರೆ, ನಮ್ಮ ಪ್ರಧಾನಿ ನರೇಂದ್ರ ಮೋದಿ ಈ ಬಡ ಜನರಿಂದ ‘ಬಡವರ ಸವಾರಿ’ ಆದ ರೈಲು ಮಾರ್ಗವನ್ನೇ ಕಸಿದುಕೊಳ್ಳುತ್ತಿದ್ದಾರೆ” ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಪ್ರತಿ ವರ್ಷ ಶೇ.10ರಷ್ಟು ಪ್ರಯಾಣ ದರ ಏರಿಕೆ, ಬೇಡಿಕೆ ಬೆಲೆ ಹೆಸರಿನಲ್ಲಿ ಲೂಟಿ, ರದ್ದತಿ ಶುಲ್ಕ ಹೆಚ್ಚಳ, ದುಬಾರಿ ಪ್ಲಾಟ್ ಫಾರಂ ಟಿಕೆಟ್‌ಗಳಿಂದಾಗಿ ಬಡ ಜನರಿಗೆ ರೈಲು ನಿಲ್ದಾಣದಲ್ಲಿ ಕಾಲಿಡಲು ಕೂಡಾ ಸಾಧ್ಯವಾಗದೆ ಇರುವಾಗ ‘ಗಣ್ಯರ ರೈಲು’ ಚಿತ್ರವನ್ನು ತೋರಿಸಿ ಜನರನ್ನು ಸೆಳೆಯಲಾಗುತ್ತಿದೆ” ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Advertisements

“ಈ ಹಿಂದೆ ಹಿರಿಯ ನಾಗರಿಕರಿಗೆ ರೈಲು ಪ್ರಯಾಣದಲ್ಲಿ ವಿನಾಯಿತಿ ಇತ್ತು. ಆದರೆ ಕೇಂದ್ರ ಸರ್ಕಾರವು ಹಿರಿಯರಿಗೆ ನೀಡಲಾಗಿದ್ದ ಈ ವಿನಾಯಿತಿಗಳನ್ನು ಕಿತ್ತುಕೊಂಡಿದೆ. ವಯಸ್ಸಾದವರಿಂದ ಕೇಂದ್ರವು ಕಳೆದ 3 ವರ್ಷಗಳಲ್ಲಿ 3,700 ಕೋಟಿ ರೂಪಾಯಿ ವಸೂಲಿ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರವು ರೈಲ್ವೆಯನ್ನು ತನ್ನ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದೆ. ಅದಕ್ಕಾಗಿಯೇ ಸಾಮಾನ್ಯ ಜನರಿಗೆ ಈಗ ರೈಲು ಪ್ರಯಾಣ ಮಾಡಲು ಸಾಧ್ಯವಾಗದಂತಾಗಿದೆ. ರೈಲ್ವೆ ಪಾಲಿಸಿಯ ಆದ್ಯತೆಯಿಂದ ಬಡ ಮತ್ತು ಮಧ್ಯಮ ವರ್ಗದ ಪ್ರಯಾಣಿಕರನ್ನು ಹೊರಗಿಡಲಾಗಿದೆ ಎಂದು ಆರೋಪಿಸಿದರು.

ಕೊಂಚ ಅಧಿಕ ಹಣವಿರುವವರು ಪ್ರಯಾಣಿಸುವ ಎಸಿ ಕೋಚ್‌ಗಳ ಸಂಖ್ಯೆಯನ್ನು ಹೆಚ್ಚಿಸಲು, ಕೇಂದ್ರವು ಸಾಮಾನ್ಯ ಬೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತಿದೆ. ಇದರಲ್ಲಿ ಕಾರ್ಮಿಕರು ಮತ್ತು ರೈತರು ಮಾತ್ರವಲ್ಲದೆ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳೂ ಪ್ರಯಾಣಿಸುತ್ತಾರೆ. ಆದರೆ ಇದರ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ. ಎಸಿ ಕೋಚ್‌ಗಳ ಉತ್ಪಾದನೆಯನ್ನು ಸಾಮಾನ್ಯ ಕೋಚ್‌ಗಳಿಗಿಂತ 3 ಪಟ್ಟು ಹೆಚ್ಚಿಸಲಾಗಿದೆ ಎಂದು ದೂರಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರವು ರೈಲ್ವೆ ಬಜೆಟ್ ಅನ್ನು ಪ್ರತ್ಯೇಕವಾಗಿ ಮಂಡಿಸುವ ಸಂಪ್ರದಾಯವನ್ನು ಈ ಹಿಂದೆಯೇ ಕೊನೆ ಮಾಡಿದೆ. ವಾಸ್ತವವಾಗಿ ನೋಡುವುದಾದರೆ ರೈಲ್ವೆಯಲ್ಲಿನ ಈ ‘ಶೋಷಣೆ’ಗಳನ್ನು ಮರೆಮಾಡುವ ಪಿತೂರಿಯೇ ಇದಾಗಿದೆ ಎಂದು ಆರೋಪಿಸಿದರು.

ಕೇವಲ ಶ್ರೀಮಂತರನ್ನು ಗಮನದಲ್ಲಿಟ್ಟುಕೊಂಡು ರೈಲ್ವೆ ನೀತಿಗಳನ್ನು ಮಾಡುತ್ತಿರುವುದು ರೈಲ್ವೇಯ ಮೇಲೆ ಅವಲಂಬಿತವಾಗಿರುವ ಭಾರತದ ಶೇಕಡ 80 ರಷ್ಟು ಜನರಿಗೆ ಮಾಡುವ ದ್ರೋಹವಾಗಿದೆ. ಮೋದಿಯವರ ಗ್ಯಾರಂಟಿಯೇ ದ್ರೋಹದ ಗ್ಯಾರಂಟಿ ಎಂದು ಕಿಡಿಕಾರಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X