2024ರ ಚುನಾವಣೆಯಲ್ಲಿ ಅಮೇಥಿಯಿಂದಲೇ ರಾಹುಲ್ ಗಾಂಧಿ ಸ್ಪರ್ಧೆ

Date:

ಕಾಂಗ್ರೆಸ್ ನಾಯಕ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಅಜಯ್ ರೈ ಶುಕ್ರವಾರ ಖಚಿತಪಡಿಸಿದ್ದಾರೆ.

ರಾಹುಲ್ ಗಾಂಧಿಯವರ ಉಮೇದುವಾರಿಕೆಯು ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರೊಂದಿಗೆ ನೇರ ಸ್ಪರ್ಧೆಗೆ ಕಾರಣವಾಗುವುದರಿಂದ ಈ ನಿರ್ಧಾರವು ಮಹತ್ವದ್ದಾಗಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಸ್ಮೃತಿ ಇರಾನಿ ಅವರು ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ಸುಮಾರು 55,000 ಮತಗಳ ಅಂತರದಿಂದ ರಾಹುಲ್ ಗಾಂಧಿಯನ್ನು ಸೋಲಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಮೇಥಿ ಲೋಕಸಭಾ ಕ್ಷೇತ್ರವು ಒಂದು ಕಾಲದಲ್ಲಿ ಗಾಂಧಿ ಕುಟುಂಬದ ಭದ್ರಕೋಟೆಯಾಗಿತ್ತು. ಇಲ್ಲಿಂದ ರಾಹುಲ್ ಗಾಂಧಿ 2004 ರಿಂದ ಆಯ್ಕೆಯಾಗುತ್ತಿದ್ದರು.

ರಾಹುಲ್ ಗಾಂಧಿ 2019ರ ಲೋಕಸಭೆ ಚುನಾವಣೆಯಲ್ಲಿ ಅಮೇಥಿ ಮತ್ತು ವಯನಾಡು ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು. ನಂತರದಲ್ಲಿ ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಪರಾಭವಗೊಂಡರೂ ವಯನಾಡಿನಿಂದ ಗೆಲುವು ಸಾಧಿಸಿದರು.

ಈ ಸುದ್ದಿ ಓದಿದ್ದೀರಾ? ವಿದೇಶಿ ವೈದ್ಯ ಎಂದು ಮ್ಯಾಟ್ರಿಮೋನಿಯಲ್ ಸೈಟ್‌ ಮೂಲಕ 22 ಮಹಿಳೆಯರಿಗೆ 4.5 ಕೋಟಿ ರೂ. ವಂಚನೆ

ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲು ನಿರ್ಧರಿಸಿದರೆ, ಅವರ ಗೆಲುವಿಗೆ ಕಾಂಗ್ರೆಸ್‌ನ ಪ್ರತಿಯೊಬ್ಬ ಕಾರ್ಯಕರ್ತ ಶ್ರಮಿಸುತ್ತಾರೆ ಎಂದು ಅಜಯ್ ರೈ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿಯೂ ಪ್ರಿಯಾಂಕಾ ಗಾಂಧಿ ವಾರಣಾಸಿಯಿಂದ ಪ್ರಧಾನಿ ಮೋದಿಗೆ ಸವಾಲೆಸೆಯಬಹುದು ಎಂದು ಊಹಿಸಲಾಗಿತ್ತು. ಆದರೆ ಕಾಂಗ್ರೆಸ್ ಕೊನೆಯ ಕ್ಷಣದಲ್ಲಿ ಅಜಯ್ ರೈ ಅವರನ್ನು ವಾರಣಾಸಿಯಿಂದ ಕಣಕ್ಕೆ ಇಳಿಸಿತು. 2014ರ ಲೋಕಸಭೆ ಚುನಾವಣೆಯಲ್ಲಿಯೂ ಅಜಯ್ ರೈ ವಾರಣಾಸಿಯಿಂದ ಸ್ಪರ್ಧಿಸಿ ನರೇಂದ್ರ ಮೋದಿ ವಿರುದ್ಧ ಸೋತಿದ್ದರು.

ಪ್ರಿಯಾಂಕಾ ಗಾಂಧಿಯವರ ಪತಿ ರಾಬರ್ಟ್ ವಾದ್ರಾ ಅವರು ಪ್ರಿಯಾಂಕಾ ಅವರು ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಸಾಧ್ಯತೆಯ ಸುಳಿವುಗಳನ್ನು ಕೊಟ್ಟ ಕೆಲವು ದಿನಗಳ ನಂತರ ಅಜಯ್ ರೈ ಈ ಹೇಳಿಕೆಗಳನ್ನು ನೀಡಿದ್ದಾರೆ.

“ಪ್ರಿಯಾಂಕಾ ಲೋಕಸಭೆಯಲ್ಲಿ ಖಂಡಿತವಾಗಿ ಇರಬೇಕು. ಅವರಿಗೆ ಲೋಕಸಭೆಯಲ್ಲಿ ಇರಲು ಎಲ್ಲ ಅರ್ಹತೆಗಳಿವೆ. ಪ್ರಿಯಾಂಕಾ ಗಾಂಧಿ ಅವರು ಸಂಸತ್ತಿನಲ್ಲಿ ಉತ್ತಮ ಪಟು ಆಗಬಹುದು. ಪಕ್ಷವು ಅವರಿಗಾಗಿ ಉತ್ತಮವಾದದ್ದನ್ನು ನೀಡಲು ಯೋಜಿಸುತ್ತಿದೆ ಎಂದು ನಾನು ಭಾವಿಸುತ್ತೇನೆ” ಎಂದು ರಾಬರ್ಟ್ ವಾದ್ರಾ ಹೇಳಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ವಜಾಗೊಳಿಸಿ: ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ...

ಪಪುವಾ ನ್ಯೂಗಿನಿಗೆ 1 ಮಿಲಿಯನ್ ಡಾಲರ್ ನೆರವು ಘೋಷಿಸಿದ ಭಾರತ

ಬೃಹತ್‌ ಪ್ರಮಾಣದ ಭೂಕುಸಿತದಿಂದ ಅಪಾರ ಪ್ರಮಾಣದ ಸಾವು ನೋವಿನ ನಷ್ಟ ಅನುಭವಿಸಿರುವ...

ಪಠ್ಯಪುಸ್ತಕ ಪರಿಷ್ಕರಣೆ | ಕೆಲವು ಪದ ಮತ್ತು ವಾಕ್ಯಗಳಲ್ಲಷ್ಟೇ ಬದಲಾವಣೆ: ಸಚಿವ ಮಧು ಬಂಗಾರಪ್ಪ

"ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಕ್ಕಳು ಯಾವುದೇ ತೊಂದರೆ ಇಲ್ಲದಂತೆ ತೊಡಗಿಸಿಕೊಳ್ಳಲು...