ಮಣಿಪುರ | ನಿರಾಶ್ರಿತರ ಕೇಂದ್ರಗಳಿಗೆ ರಾಹುಲ್ ಗಾಂಧಿ ಭೇಟಿ; ಸಂತ್ರಸ್ತರೊಂದಿಗೆ ಸಂವಾದ

Date:

ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜುಲೈ 8ರಂದು ಹಿಂಸಾಚಾರ ಪೀಡಿತ ಮಣಿಪುರದ ಜಿರಿಬಾಮ್‌ನಲ್ಲಿನ ಜುಲೈ 8ರಂದು ಮಣಿಪುರದ ಜಿರಿಬಾಮ್‌ನಲ್ಲಿನ ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿದ್ದು ಮೈತಿ ಸಮುದಾಯದ ಜನರನ್ನು ಭೇಟಿಯಾದರು.

ಮಣಿಪುರಕ್ಕೆ ತೆರಳುವ ಮೊದಲು, ರಾಹುಲ್ ಗಾಂಧಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದ ಅಸ್ಸಾಂಗೆ ಸ್ಥಳಾಂತರಗೊಂಡ ಕುಕಿ ಸಮುದಾಯ ಸದಸ್ಯರು ಮತ್ತು ಅಸ್ಸಾಂ ಪ್ರವಾಹ ಪೀಡಿತರನ್ನು ಭೇಟಿಯಾಗಿ ಸಂವಾದ ನಡೆಸಿದರು.

ರಾಹುಲ್ ಗಾಂಧಿ ಒಂದು ದಿನದಲ್ಲೇ ಅಸ್ಸಾಂ ಮತ್ತು ಮಣಿಪುರಕ್ಕೆ ಭೇಟಿ ನೀಡಿದ್ದಾರೆ. ಇದು ರಾಹುಲ್ ಲೋಕಸಭೆಯ ವಿಪಕ್ಷ ನಾಯಕರಾದ ಬಳಿಕ ಜನಾಂಗೀಯ ಸಂಘರ್ಷ ಪೀಡಿತ ಮಣಿಪುರಕ್ಕೆ ಮಾಡಿದ ಮೊದಲ ಭೇಟಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಹುಲ್ ಗಾಂಧಿಯ ಜೊತೆ ಮಣಿಪುರ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕೀಶಮ್ ಮೇಘಚಂದ್ರ ಮತ್ತು ಕಾಂಗ್ರೆಸ್ ನಾಯಕ ಓ ಇಬೋಬಿ ಸಿಂಗ್ ಇದ್ದರು. “ಹಿಂಸಾಚಾರದ ನಂತರ ಜನರಲ್ಲಿರುವ ಕಳವಳವನ್ನು ಪರಿಹರಿಸುವ ಕಾಂಗ್ರೆಸ್ ಪಕ್ಷದ ಬದ್ಧತೆಯನ್ನು ಪ್ರತಿಬಿಂಬಿಸುವುದು, ಸಂತ್ರಸ್ತ ಜನರಿಗೆ ಬೆಂಬಲವನ್ನು ನೀಡುವುದು ರಾಹುಲ್ ಗಾಂಧಿ ಭೇಟಿಯ ಉದ್ದೇಶವಾಗಿದೆ” ಎಂದು ಮಾಧ್ಯಮಗಳಿಗೆ ಕೀಶಮ್ ಮೇಘಚಂದ್ರ ತಿಳಿಸಿದ್ದಾರೆ.

ರಾಹುಲ್ ಗಾಂಧಿ

ಇದನ್ನು ಓದಿದ್ದೀರಾ?  ಮಣಿಪುರಕ್ಕೆ ತೆರಳಲಿರುವ ರಾಹುಲ್ ಗಾಂಧಿ; ನಿರಾಶ್ರಿತರ ಕೇಂದ್ರಗಳಿಗೆ ಭೇಟಿ

ಪ್ರಧಾನಿ ಮೋದಿಗೆ ಸಂದೇಶ

ರಾಹುಲ್ ಗಾಂಧಿ ಈ ಹಿಂದೆ ಎರಡು ಬಾರಿ ಮಣಿಪುರಕ್ಕೆ ಭೇಟಿ ನೀಡಿದ್ದಾರೆ. ಇನ್ನು ಇಂಡಿಯಾ ಒಕ್ಕೂಟವು ಇತ್ತೀಚಿನ ಅಧಿವೇಶನದಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಮಣಿಪುರ ಹಿಂಸಾಚಾರದ ವಿಷಯವನ್ನು ಪದೇ ಪದೇ ಪ್ರಸ್ತಾಪಿಸಿದೆ.

ಕಳೆದ ವರ್ಷ ಮೇ ತಿಂಗಳಿನಿಂದ ಮಣಿಪುರದಲ್ಲಿ ಹಿಂಸಾಚಾರ ಆರಂಭವಾಗಿದೆ. ಆದರೆ ಪ್ರಧಾನಿ ಮೋದಿ ಈವರೆಗೂ ಮಣಿಪುರಕ್ಕೆ ಭೇಟಿ ನೀಡಿಲ್ಲ. ಆದ್ದರಿಂದ ರಾಹುಲ್ ಗಾಂಧಿಯ ಈ ಮಣಿಪುರ ಭೇಟಿಯು ಪ್ರಧಾನಿ ಮೋದಿಗೆ ಸಂದೇಶವಾಗಿದೆ ಎಂದು ನೆಟ್ಟಿಗರು ಹೇಳಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1950ರ ಕೇಂದ್ರ ಬಜೆಟ್ ಸೋರಿಕೆ: ನಡೆದಿದ್ದೇನು, ಪರಿಣಾಮವೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಸತತ ಏಳನೇ...

ನಾಲ್ಕು ಕೃಷಿ ಡಿಪ್ಲೊಮಾ ಕಾಲೇಜು ಪುನರಾರಂಭಕ್ಕೆ ಮರು ಅನುಮತಿ ನೀಡಿದ ಸರ್ಕಾರ

ಕಳೆದ ಸರ್ಕಾರದ ಅವದಿಯಲ್ಲಿ ತಡೆಹಿಡಿಯಲಾಗಿದ್ದ ವಿವಿಧ ಕೃಷಿ ವಿವಿ ವ್ಯಾಪ್ತಿಯ ನಾಲ್ಕು...

ವಾಲ್ಮೀಕಿ ನಿಗಮ ಅಕ್ರಮ | ಹಣ ಲೂಟಿ ಮಾಡಲು ನಕಲಿ ಹುದ್ದೆ ಸೃಷ್ಟಿ!

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಕೋಟ್ಯಂತರ ರೂ.ಗಳನ್ನು ಲೂಟಿ...

ಕೇದಾರನಾಥ ದೇಗುಲದಿಂದ 228 ಕೆಜಿ ಚಿನ್ನ ನಾಪತ್ತೆ: ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ

"ಕೇದಾರನಾಥ ದೇವಸ್ಥಾನದಲ್ಲಿದ್ದ ಚಿನ್ನ ನಾಪತ್ತೆಯಾಗಿದೆ, 228 ಕೆಜಿ ಚಿನ್ನದ ಹಗರಣ ನಡೆದಿದೆ. ಆದರೆ...