ಅಮೇಥಿಯಲ್ಲಿ ರಾಹುಲ್ ಗಾಂಧಿ vs ಸೃತಿ ಇರಾನಿ?

Date:

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮತ್ತೆ ಕಣಕ್ಕಿಳಿದಿದ್ದಾರೆ. ಬಿಜೆಪಿ ಸ್ಮೃತಿ ಇರಾನಿಗೆ ಟಿಕೆಟ್ ಘೋಷಣೆ ಮಾಡುವ ಮುನ್ನವೇ ಅಮೇಥಿಯಲ್ಲಿ ಇರಾನಿ ಮನೆಯೊಂದನ್ನೂ ಕೂಡಾ ಖರೀದಿ ಮಾಡಿದ್ದಾರೆ. ಆ ಮೂಲಕ, 50 ವರ್ಷಗಳಿಂದ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಈ ಕ್ಷೇತ್ರದಲ್ಲಿ ತಾನು ದೀರ್ಘಾವಧಿಯ ಯೋಜನೆ ಹೊಂದಿರುವುದನ್ನು ಸ್ಮೃತಿ ಇರಾನಿ ಸಾಬೀತುಪಡಿಸಿದ್ದಾರೆ.

- Advertisement -

ಕಳೆದ ತಿಂಗಳಷ್ಟೇ ಸ್ಮೃತಿ ಇರಾನಿಯ ಮನೆಯ ಗೃಹ ಪ್ರವೇಶ ನಡೆದಿದೆ. ಈ ನಡುವೆ 2019ರವರೆಗೆ ತಮ್ಮ ಪಕ್ಷದ ಭದ್ರಕೋಟೆಯಾಗಿದ್ದ ಈ ಕ್ಷೇತ್ರವನ್ನು ಮರಳಿ ತನ್ನ ತೆಕ್ಕೆಗೆ ಪಡೆಯುವ ಪ್ರಯತ್ನದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇದ್ದಾರೆ. ಈ ಕ್ಷೇತ್ರದಲ್ಲಿ ರಾಹುಲ್‌ ಗಾಂಧಿಯ ತಂದೆ ರಾಜೀವ್‌ ಗಾಂಧಿ ಮತ್ತು ತಾಯಿ ಸೋನಿಯಾ ಗಾಂಧಿ ಸಂಸದರಾಗಿದ್ದರು. ರಾಹುಲ್‌ ಗಾಂಧಿ ಕೂಡ ಎರಡು ಬಾರಿ ಇದೇ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಆದರೆ, 2019ರಲ್ಲಿ ಅಮೇಥಿಯಲ್ಲಿ ಸೋಲುಂಡಿದ್ದ ರಾಹುಲ್ ಗಾಂಧಿ, ಈ ಬಾರಿಯೂ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಪ್ರದೀಪ್ ಸಿಂಘಾಲ್ ಹೇಳಿದ್ದಾರೆ. ಆದರೆ, ಇನ್ನೂ ಕೂಡಾ ರಾಹುಲ್‌ ಗಾಂಧಿ ಸ್ಪರ್ಧೆ ಅಧಿಕೃತವಾಗಿಲ್ಲ. ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಸದಸ್ಯರೂ ಆಗಿರುವ ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್, “ಅಮೇಥಿಯಿಂದ ಯಾರು ಸ್ಪರ್ಧಿಸುತ್ತಾರೆಂದು ಪಕ್ಷವು ನಿರ್ಧಾರ ಮಾಡುತ್ತದೆ,” ಎಂದಿದ್ದಾರೆ.

ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸುವುದು ಪಕ್ಕಾ ಆದಲ್ಲಿ ಈ ಕ್ಷೇತ್ರದಲ್ಲಿ ಪ್ರಬಲ ನಾಯಕರ ನಡುವೆ ಮತ್ತೊಮ್ಮೆ ಮುಖಾಮುಖಿ ನಡೆಯಲಿದೆ. 2009 ಮತ್ತು 2014ರಲ್ಲಿ ಅಮೇಥಿಯಿಂದ ಸ್ಪರ್ಧಿಸಿ ರಾಹುಲ್ ಗಾಂಧಿ ಜಯ ಸಾಧಿಸಿದ್ದರು. 2014ರಲ್ಲಿ ರಾಹುಲ್ ಎದುರು ಸ್ಮೃತಿ ಇರಾನಿ ಸೋಲು ಕಂಡಿದ್ದರು.

ಆದರೆ ಐದು ವರ್ಷದ ಅವಧಿಯಲ್ಲಿ ಎಲ್ಲ ಹಬ್ಬದ ಸಂದರ್ಭದಲ್ಲಿಯೂ ಜನರಿಗೆ ಉಡುಗೊರೆಗಳನ್ನು ನೀಡುತ್ತಾ ಜನರನ್ನು ಓಲೈಸುವಲ್ಲಿ ಸಫಲರಾದ ಸ್ಮೃತಿ ಇರಾನಿ, 2019ರಲ್ಲಿ ಅಮೇಥಿಯಲ್ಲಿ ಜಯದ ಗದ್ದುಗೆ ಪಡೆದಿದ್ದರು. ಈಗ, ಮತ್ತೆ ರಾಹುಲ್ ಗಾಂಧಿಗೆ ಸವಾಲು ಹಾಕಿದ್ದು, ‘ಧೈರ್ಯವಿದ್ದರೆ ವಯನಾಡು ಬಿಟ್ಟು (ರಾಹುಲ್ ಗಾಂಧಿ ಸಂಸದರಾಗಿರುವ ಕ್ಷೇತ್ರ) ಅಮೇಥಿಯಲ್ಲಿ ಸ್ಪರ್ಧಿಸಿ’ ಎಂದಿದ್ದಾರೆ. ಈಗ ರಾಹುಲ್ ಗಾಂಧಿ ಸವಾಲು ಸ್ವೀಕರಿಸಿ ಅಮೇಥಿಯಿಂದಲೇ ಸ್ಪರ್ಧಿಸುತ್ತಾರಾ ಕಾದುನೋಡಬೇಕಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...