ಮೋದಿ ಉಪನಾಮ ಹೇಳಿಕೆಗೆ ಜೈಲು ಶಿಕ್ಷೆ ಪ್ರಶ್ನಿಸಿ ರಾಹುಲ್‌ ಗಾಂಧಿ ಮೇಲ್ಮನವಿ

Date:

  • ಸೂರತ್‌ ನ್ಯಾಯಾಲಯದಿಂದ ರಾಹುಲ್‌ ಗಾಂಧಿ ಅವರಿಗೆ 2 ವರ್ಷ ಶಿಕ್ಷೆ
  • 2019ರಲ್ಲಿ ಮೋದಿ ಉಪನಾಮದ ಬಗ್ಗೆ ಹೇಳಿಕೆ ನೀಡಿದ್ದ ರಾಹುಲ್

ಪ್ರಧಾನಿ ಮೋದಿ ಉಪನಾಮದ ಕುರಿತ ಹೇಳಿಕೆ ಸಂಬಂಧ 2 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೋಮವಾರ (ಏಪ್ರಿಲ್ 3) ಶಿಕ್ಷೆ ಆದೇಶ ಪ್ರಶ್ನಿಸಿ ಸೂರತ್‌ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

- Advertisement -

ಮೇಲ್ಮನವಿ ಸಲ್ಲಿಸಲು ರಾಹುಲ್‌ ಅವರ ವಕೀಲರ ತಂಡ ಸಕಲ ಸಿದ್ಧತೆಗಳನ್ನೂ ಪೂರ್ಣಗೊಳಿಸಿದೆ. ಸೋಮವಾರ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮಾನಹಾನಿ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸಿರುವ ಮ್ಯಾಜಿಸ್ಟ್ರೇಟ್ ಆದೇಶವನ್ನು ರದ್ದುಗೊಳಿಸುವಂತೆ ರಾಹುಲ್ ಅವರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ. ಈ ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ನೀಡಿರುವ ಶಿಕ್ಷೆಗೆ ಮಧ್ಯಂತರ ತಡೆ ನೀಡುವಂತೆಯೂ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಮಾನಹಾನಿ ಮೊಕದ್ದಮೆಯಲ್ಲಿ ಮಾರ್ಚ್ 23ರಂದು ಸೂರತ್‌ ನ್ಯಾಯಾಲಯ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಅಲ್ಲದೆ ನ್ಯಾಯಾಲಯ ಪ್ರಕರಣದಲ್ಲಿ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಹುಲ್ ಅವರಿಗೆ ಜಾಮೀನು ನೀಡಿ 30 ದಿನಗಳವರೆಗೆ ಕಾಲಾವಕಾಶ ಒದಗಿಸಿತು.

ಮಾರ್ಚ್‌ 24 ರಂದು ರಾಹುಲ್‌ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಸಂಸದ ಸ್ಥಾನದಿಂದ ರಾಹುಲ್ ಅವರನ್ನು ಅನರ್ಹಗೊಳಿಸಿದ ಕೆಲವು ದಿನಗಳ ನಂತರ, ರಾಹುಲ್ ಗಾಂಧಿ ಅವರು ತಮ್ಮ ಅಧಿಕೃತ ದೆಹಲಿ ಬಂಗಲೆಯನ್ನು ತೆರವು ಮಾಡುವಂತೆ ಲೋಕಸಭೆ ನೋಟಿಸ್ ನೀಡಿದೆ.

2004ರಲ್ಲಿ ಅವರು ಮೊದಲ ಬಾರಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾದಾಗ ಅವರಿಗೆ ನವದೆಹಲಿಯ ಲುಧಿಯಾನ ಏರಿಯಾದ 12 ತುಘಲಕ್ ರಸ್ತೆಯಲ್ಲಿರುವ ಬಂಗಲೆಯನ್ನು ಸರಕಾರದ ವತಿಯಿಂದ ನೀಡಲಾಗಿತ್ತು.

ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾರಣ ಏಪ್ರಿಲ್‌ 22ರೊಳಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಲೋಕಸಭಾ ವಸತಿ ಸಮಿತಿ ನೀಡಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

2019ರ ಹೇಳಿಕೆ ವಿರುದ್ಧ ಸುಶೀಲ್ ಕುಮಾರ್ ಮೋದಿ ಎಂಬುವವರು ರಾಹುಲ್ ಅವರ ವಿರುದ್ಧ ಪಾಟ್ನಾ ನ್ಯಾಯಾಲಯದಲ್ಲಿ ಮತ್ತೊಂದು ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಏಪ್ರಿಲ್ 12ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ರಾಹುಲ್ ಅವರಿಗೆ ಸೂಚಿಸಿದೆ.

ಈ ಸುದ್ದಿ ಓದಿದ್ದೀರಾ? ಕೋಮು ಉದ್ವಿಗ್ನತೆ ಹಿನ್ನೆಲೆ ಅಮಿತ್‌ ಶಾ ಬಿಹಾರ ಭೇಟಿ ರದ್ದು; ಜನ ಬಾರದ ಕಾರಣ ವಾಪಸ್‌ ಎಂದ ಜೆಡಿಯು

2019ರ ಲೋಕಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೋಲಾರದಲ್ಲಿ ಸಮಾವೇಶದ ಭಾಷಣದಲ್ಲಿ ರಾಹುಲ್‌ ಗಾಂಧಿ ಅವರು, “ಎಲ್ಲ ಕಳ್ಳರಿಗೂ ಮೋದಿ ಎಂಬ ಹೆಸರು ಏಕಿರುತ್ತದೆ?” ಎಂದು ಟೀಕಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...