ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹತೆ; ಭಾರತೀಯ ಪ್ರಜಾಪ್ರಭುತ್ವ ಓಂ ಶಾಂತಿ ಎಂದ ಕಾಂಗ್ರೆಸ್

Date:

  • ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ನಡೆ ಖಂಡಿಸಿದ ಕಾಂಗ್ರೆಸ್
  • ಅನರ್ಹತೆ ವಿಚಾರ ಪ್ರಜಾಪ್ರಭುತ್ವದ ಅಣಕ ಎಂದ ಜೈರಾಮ್

ಮೋದಿ ಉಪನಾಮದ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಭಾರತೀಯ ಪ್ರಜಾಪ್ರಭುತ್ವದ ‘ಓಂ ಶಾಂತಿ’ ಎಂದು ವ್ಯಂಗ್ಯವಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ವಿಚಾರಾಧಾರಿತ ಹೋರಾಟ ನಡೆಸುವುದಾಗಿ ಹೇಳಿದ್ದಾರೆ. ಅವರ ಟ್ವೀಟ್ ಸಾರಾಂಶ ಹೀಗಿದೆ.

“ಈ ಹೋರಾಟವನ್ನು ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಎದುರಿಸುತ್ತೇವೆ. ನಾವು ಹೆದರುವುದಿಲ್ಲ ಅಥವಾ ಮೌನವಾಗಿರುವುದಿಲ್ಲ. ಪ್ರಧಾನಮಂತ್ರಿ-ಸಂಯೋಜಿತ ಅದಾನಿ ಮಹಾಮೇಗಾ ಹಗರಣದಲ್ಲಿ ಜೆಪಿಸಿ ಬದಲಿಗೆ, ರಾಹುಲ್ ಗಾಂಧಿ ಅನರ್ಹಗೊಂಡಿದ್ದಾರೆ. ಭಾರತೀಯ ಪ್ರಜಾಪ್ರಭುತ್ವ ಓಂ ಶಾಂತಿ” ಎಂದು ಬರೆದಿದ್ದಾರೆ.

ಅನರ್ಹತೆ ಬಗ್ಗೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ, “ಬಿಜೆಪಿ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲು ಎಲ್ಲಾ ದಾರಿ ಹುಡುಕುತ್ತಿದ್ದರು. ಸತ್ಯವನ್ನು ಹೇಳುವವರು ಮತ್ತು ಸತ್ಯ ಹೇಳುವುದನ್ನು ಮುಂದುವರಿಸುವವರನ್ನು ಸಂಸತ್ತಿನಲ್ಲಿ ಇರಲು ಅವರು ಬಿಡುವುದಿಲ್ಲ. ಜೆಪಿಸಿ ರಚನೆಗೆ ನಮ್ಮ ಬೇಡಿಕೆ ಮುಂದುವರಿಸಲಿದ್ದೇವೆ. ಅಗತ್ಯವಿದ್ದಲ್ಲಿ ಪ್ರಜಾಪ್ರಭುತ್ವದ ರಕ್ಷಣೆಗೆ ಜೈಲಿಗೂ ಹೋಗಲು ಸಿದ್ಧ” ಎಂದು ಹೇಳಿದ್ದಾರೆ.

ಏನಿದು ಪ್ರಕರಣ?

2019ರ ಏಪ್ರಿಲ್ 19ರಂದು ರಾಹುಲ್ ಗಾಂಧಿ ಅವರು ಕರ್ನಾಟಕದ ಕೋಲಾರದಲ್ಲಿ ನಡೆದ ಲೋಕಸಭಾ ಚುನಾವಣಾ ಬಹಿರಂಗ ಪ್ರಚಾರ ಸಭೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಹೇಳುತ್ತಾ ಮೋದಿ ಉಪನಾಮದ ಕುರಿತು ವ್ಯಂಗ್ಯವಾಡಿದ್ದರು.

“ಎಲ್ಲಾ ಕಳ್ಳರು, ಎಂದರೆ; ಅದು ನೀರವ್ ಮೋದಿ, ಲಲಿತ್ ಮೋದಿ ಅಥವಾ ನರೇಂದ್ರ ಮೋದಿ ಇವರೆಲ್ಲರೂ ಮೋದಿ ಎಂಬ ಉಪನಾಮನ್ನೇಕೆ ಹೊಂದಿದ್ದಾರೆ” ಎಂದು ಪ್ರಶ್ನಿಸಿದ್ದರು. ರಾಹುಲ್ ಗಾಂಧಿ ಅವರ ಹೇಳಿಕೆ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿತ್ತು. ಬೆನ್ನಲ್ಲೇ ಗುಜರಾತಿನ ಬಿಜೆಪಿ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500 ಅಡಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಅನರ್ಹತೆ

ಮೋದಿ ಉಪನಾಮದ ಟೀಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಗುಜರಾತಿನ ಸೂರತ್ ಜಿಲ್ಲಾ ನ್ಯಾಯಾಲಯದ ಈ ತೀರ್ಪು ಬೆನ್ನಲ್ಲೇ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬುವೆ : ಸಚಿವ ಶಿವರಾಜ್ ತಂಗಡಗಿ

ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಚಿವರು ಕನ್ನಡ ಮತ್ತು ಸಂಸ್ಕೃತಿ...

ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ ರಾಜ್ಯದ ಜನ ಬಿಜೆಪಿಯ...

ದಲಿತರ ಹತ್ಯಾಕಾಂಡ | 42 ವರ್ಷಗಳ ಬಳಿಕ ತೀರ್ಪಿತ್ತ ಕೋರ್ಟ್‌; ನ್ಯಾಯ ದಕ್ಕಿದ್ದು ಯಾರಿಗೆ?

ಇಲ್ಲಿ ನ್ಯಾಯ ತೋರುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಕಾಯುವುದರಲ್ಲೇ...

ನಮ್ಮ ಸಚಿವರು | ಮಾಸ್ ಲೀಡರ್ ಆಗುವ ಲಕ್ಷಣವುಳ್ಳ ಪ್ರಿಯಾಂಕ್ ಖರ್ಗೆ; ಕ್ಷೇತ್ರದ ಅಭಿವೃದ್ಧಿಗೆ ನೀಡಬೇಕಿದೆ ಆದ್ಯತೆ

ಪ್ರಿಯಾಂಕ್ ಖರ್ಗೆ ಅವರು  ಕಾಂಗ್ರೆಸ್‌ನಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ. ತಂದೆಯ ಹಾದಿಯಲ್ಲಿಯೇ...