ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡಲಾಗುವುದು: ರಾಹುಲ್ ಗಾಂಧಿ

Date:

ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡುತ್ತದೆ ಮತ್ತು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ನೀಡುತ್ತದೆ, ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

- Advertisement -

ಪಕ್ಷದ ಲೂಧಿಯಾನ ಅಭ್ಯರ್ಥಿ ಮತ್ತು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಪರವಾಗಿ ಲುಧಿಯಾನದ ಮುಲ್ಲನ್‌ಪುರ್ ದಖಾದಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, “ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ರದ್ದುಪಡಿಸಲಿದೆ” ಎಂದು ಎಂದು ಆರೋಪಿಸಿದ್ದು, “2024ರ ಲೋಕಸಭೆ ಚುನಾವಣೆಯು ಸಂವಿಧಾನವನ್ನು ಉಳಿಸಲು ನಡೆಯುತ್ತಿರುವ ಚುನಾವಣೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಮೊದಲ ಬಾರಿಗೆ, ಒಂದು ಪಕ್ಷ ಮತ್ತು ಅದರ ನಾಯಕರು ಚುನಾವಣೆಯಲ್ಲಿ ಗೆದ್ದರೆ ಸಂವಿಧಾನವನ್ನು ಬದಲಾಯಿಸುತ್ತೇವೆ ಮತ್ತು ರದ್ದುಗೊಳಿಸುತ್ತೇವೆ ಎಂದು ಹೇಳಿದ್ದಾರೆ” ಎಂದು ಬಿಜೆಪಿ ನಾಯಕರುಗಳ ಸಂವಿಧಾನ ಬದಲಾಯಿಸುವ ಹೇಳಿಕೆ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ ಸಂವಿಧಾನದ ಪ್ರತಿಯನ್ನು ಹಿಡಿದು, ಇದು ಪುಸ್ತಕವಲ್ಲ, ಜನರ ಧ್ವನಿ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಜುಲೈ 5ರಂದು ಬಡ ಮಹಿಳೆಯರ ಖಾತೆಗೆ 8,500 ರೂ ಜಮೆ: ರಾಹುಲ್ ಗಾಂಧಿ

“ದೇಶವನ್ನು ವಿಭಜಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನ ಮಾಡುತ್ತಿದ್ದಾರೆ. ಒಬ್ಬ ಸಹೋದರ ಇನ್ನೊಬ್ಬ ಸಹೋದರನ ವಿರುದ್ಧ ಹೋರಾಡುವುದು, ಒಂದು ಸಮುದಾಯವು ಇನ್ನೊಬ್ಬರನ್ನು ದ್ವೇಷಿಸುವುದು ಮತ್ತು ಒಂದು ಭಾಷೆಯನ್ನು ಇನ್ನೊಬ್ಬರು ವಿರೋಧ ಮಾಡುವಂತೆ ಮಾಡಿರುವುದು ಮಾತ್ರ 10 ವರ್ಷಗಳಲ್ಲಿ, ಮೋದಿ ಮತ್ತು ಬಿಜೆಪಿ ಮಾಡಿದ ಏಕೈಕ ಕೆಲಸ” ಎಂದು ಟೀಕಿಸಿದರು.

ಇದನ್ನು ಓದಿದ್ದೀರಾ?   ಅದಾನಿ, ಅಂಬಾನಿಗೆ ಸಹಾಯ ಮಾಡಲು ಮೋದಿಯವರನ್ನು ಆ ಪರಮಾತ್ಮನೇ ಕಳುಹಿಸಿದ್ದು: ರಾಹುಲ್ ಲೇವಡಿ

ರೈತ ಸ್ನೇಹಿ ಬೆಳೆ ವಿಮಾ ಯೋಜನೆ ಜಾರಿಗೆ ತರುವುದಾಗಿ ಭರವಸೆ ನೀಡಿದ ರಾಹುಲ್ ಗಾಂಧಿ ಪ್ರಸ್ತುತ ಯೋಜನೆಯಿಂದ ಕೇವಲ 16 ವಿಮಾ ಕಂಪನಿಗಳಿಗೆ ಲಾಭವಾಗಿದೆ ಎಂದು ಆರೋಪಿಸಿದರು. ಮಹಾಲಕ್ಷ್ಮಿ ಯೋಜನೆ ಸೇರಿದಂತೆ ತಮ್ಮ ಪಕ್ಷದ ಚುನಾವಣಾ ಭರವಸೆಗಳ ಬಗ್ಗೆಯೂ ರಾಹುಲ್ ಗಾಂಧಿ ಪ್ರಸ್ತಾಪ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...